ಮಡಿಕೇರಿ, ಮೇ ೨೯: ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ ಅವರು ಕೊಡಗು ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಕೋವಿಡ್ ಸೋಂಕು ನಿಯಂತ್ರಣ ಸಂಬAಧ ಪಂಚಾಯಿತಿಗಳ ಪ್ರಮುಖರಿಂದ ಮಾಹಿತಿ ಪಡೆದರು.

ದಕ್ಷಿಣ ಕೊಡಗಿನ ಕುಟ್ಟ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ನಂತರ ಕುಟ್ಟ ಸರ್ಕಾರಿ ಆಸ್ಪತ್ರೆಗೆ ತೆರಳಿ ಅಲ್ಲಿನ ವ್ಯವಸ್ಥೆ ಬಗ್ಗೆ ಪರಿಶೀಲನೆ ನಡೆಸಿದರು. ಇದೇ ವೇಳೆ ಕರ್ನಾಟಕ-ಕೇರಳ ಗಡಿ ಪ್ರದೇಶದ ಕುಟ್ಟ ಚೆಕ್‌ಪೋಸ್ಟ್ ಬಳಿ ತೆರಳಿ ವಾಹನಗಳ ಸಂಚಾರದ ಬಗ್ಗೆ ಪೊಲೀಸರಿಂದ ಮಾಹಿತಿ ಪಡೆದರು.

ಶ್ರೀಮಂಗಲ, ಬಿರುನಾಣಿ, ಕಾಕೋಟುಪರಂಬು, ಮೂರ್ನಾಡು, ಹಾಕತ್ತೂರು, ಮೇಕೇರಿ ಗ್ರಾಮ ಪಂಚಾಯಿತಿ ಸೇರಿದಂತೆ ವಿವಿಧ ಕಡೆ ತೆರಳಿ ಗ್ರಾಮ ಪಂಚಾಯಿತಿಗಳ ಪಿಡಿಓ, ಅಧ್ಯಕ್ಷರೊಂದಿಗೆ ಚರ್ಚೆ ನಡೆಸಿ ಕೋವಿಡ್ ಕ್ರಮಗಳನ್ನು ಪಾಲನೆ ಮಾಡುವುದರೊಂದಿಗೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಸೋಂಕು ನಿಯಂತ್ರಿಸಲು ಶ್ರಮಿಸಬೇಕೆಂದು ಸಲಹೆ ನೀಡಿದರು.