ಮಡಿಕೇರಿ, ಮೇ ೨೯: ಕೋವಿಡ್ ಮುಕ್ತ ಗ್ರಾಮ ಮಾಡಲು ಅಧಿಕಾರಿಗಳು ಶ್ರಮಿಸಬೇಕು. ಮಡಿಕೇರಿ ತಾಲೂಕಿನ ಹೊದಕಾನ ಗ್ರಾಮ ಕೋವಿಡ್ ಮುಕ್ತ ಗ್ರಾಮವಾಗಿದ್ದು, ಕೋವಿಡ್ ೧೯ ಪಾಸಿಟಿವ್ ಕಂಡುಬರದAತೆ ಮುಂದೆಯೂ ಎಚ್ಚರ ವಹಿಸಬೇಕು ಎಂದು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ತಿಳಿಸಿದರು.
ನಗರದ ಜಿಲ್ಲಾ ಪಂಚಾಯಿತಿ ಕೆಡಿಪಿ ಸಭಾಂಗಣದಲ್ಲಿ ಮಡಿಕೇರಿ ತಾಲೂಕಿನ ಮಡಿಕೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗಳೊಂದಿಗೆ ನಡೆದ ಟಾಸ್ಕ್ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮಡಿಕೇರಿ ತಾಲೂಕಿನ ಹೊದಕಾನ ಗ್ರಾಮದಲ್ಲಿ ಇದುವರೆಗೆ ಕೋವಿಡ್-೧೯ ಪಾಸಿಟಿವ್ ಪ್ರಕರಣಗಳು ಕಂಡುಬAದಿಲ್ಲ, ಅದೇ ರೀತಿ ಉಳಿದ ಗ್ರಾಮಗಳನ್ನೂ ಕೋವಿಡ್ ಮುಕ್ತ ಮಾಡಲು ಶ್ರಮಿಸಬೇಕು ಎಂದು ಶಾಸಕರು ನಿರ್ದೇಶನ ನೀಡಿದರು.
ಕೋವಿಡ್-೧೯ ನಿಯಂತ್ರಣಕ್ಕೆ ಪ್ರತಿ ಹಂತದ ಅಧಿಕಾರಿಗಳು ಶ್ರಮಿಸುತ್ತಿದ್ದಾರೆ. ಕೋವಿಡ್-೧೯ ಸಾಂಕ್ರಾಮಿಕ ರೋಗದಂತಹ ಸಂದಿಗ್ಧ ಹಾಗೂ ಸಂಕಷ್ಟದ ಪರಿಸ್ಥಿತಿಯಲ್ಲಿ ತಮ್ಮ ಆರೋಗ್ಯದ ಜೊತೆಗೆ ಇತರರ ಆರೋಗ್ಯದ ಕಡೆಯೂ ಗಮನಹರಿಸುವುದು ಅಗತ್ಯ. ಆ ದಿಸೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಪ್ರತಿ ಹಂತದಲ್ಲಿಯೂ ಮುನ್ನೆಚ್ಚರ ವಹಿಸಿ ಕರ್ತವ್ಯ ನಿರ್ವಹಿಸಬೇಕು ಎಂದು ತಿಳಿಸಿದರು.
ಗೃಹ ಸಂಪರ್ಕ ತಡೆಯಲ್ಲಿ ರುವವರ ಬಗ್ಗೆ ತುಂಬಾ ಎಚ್ಚರವಹಿಸಬೇಕು. ಮನೆಯಲ್ಲಿ ಇತರ ಸದಸ್ಯರಿಗೆ ಹರಡದಂತೆ ನೋಡಿ ಕೊಳ್ಳಬೇಕು. ಕೊಡಗು ಜಿಲ್ಲೆಯಲ್ಲಿ ವಾರದಲ್ಲಿ ಬೆಳಿಗ್ಗೆ ೬ ರಿಂದ ೧೦ ಗಂಟೆವರೆಗೆ ತರಕಾರಿ, ಹಾಲು, ದಿನಸಿ ಇತರ ಪದಾರ್ಥಗಳನ್ನು ಕೊಳ್ಳಲು ಅವಕಾಶ ಮಾಡಿದ್ದರಿಂದ ಜಿಲ್ಲೆಯಲ್ಲಿ ಆದಷ್ಟು ಕೋವಿಡ್ ೧೯ ನಿಯಂತ್ರಣಕ್ಕೆ ಬಂದಿದೆ ಎಂದು ಅಪ್ಪಚ್ಚು ರಂಜನ್ ಅವರು ಅಭಿಪ್ರಾಯಪಟ್ಟರು.
ಕೋವಿಡ್-೧೯ ಸರಪಳಿ ತುಂಡರಿಸಲು ಪ್ರತಿಯೊಬ್ಬರೂ ಕೈಜೋಡಿಸಿ ಕರ್ತವ್ಯ ನಿರ್ವಹಿಸಬೇಕು. ಜೂನ್ ೭ ರ ನಂತರವೂ ಲಾಕ್ಡೌನ್ ಮುಂದುವರೆಯಬಾರದು. ಆ ದಿಸೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಸಾರ್ವಜನಿಕರೂ ಸಹಕರಿಸು ವಂತಾಗಬೇಕು ಎಂದರು. ಕೋವಿಡ್ ೧೯ ಪಾಸಿಟಿವ್ ಬಂದಿರುವ ಎಲ್ಲಾ ಬಡ ಕುಟುಂಬ ಗಳಿಗೂ ಆಹಾರ ಕಿಟ್ನ್ನು ಕಡ್ಡಾಯ ವಾಗಿ ವಿತರಿಸಬೇಕು. ಯಾವುದೇ ಕಾರಣಕ್ಕೂ ಬಡವರಿಗೆ ತೊಂದರೆ ಯಾಗದಂತೆ ಎಚ್ಚರ ವಹಿಸಬೇಕು ಎಂದು ಸಲಹೆ ನೀಡಿದರು,
ಸರ್ಕಾರದ ನಿರ್ದೇಶನದಂತೆ ಅರ್ಹರಿಗೆ ಲಸಿಕೆ ನೀಡುವುದು, ಕೋವಿಡ್ ಪರೀಕ್ಷೆ ಮಾಡುವುದು ಹೀಗೆ ಹಲವು ಕಾರ್ಯಗಳನ್ನು ವ್ಯವಸ್ಥಿತವಾಗಿ ನಿರ್ವಹಿಸುವಂತೆ ಸಂಬAಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಕೋವಿಡ್ ೧೯ ನಿಯಂತ್ರಣ ಜೊತೆಗೆ ಮುಂಗಾರು ಎದುರಿಸಲು ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸೂಚಿಸಿದರು.
ಜಿ.ಪಂ. ಉಪ ಕಾರ್ಯದರ್ಶಿ ಲಕ್ಷಿö್ಮ ಮಾತನಾಡಿ, ಕೋವಿಡ್ ೧೯ ಪಾಸಿಟಿವ್ ಬಂದವರಲ್ಲಿ ಮನೆಯಲ್ಲಿ ಅಗತ್ಯ ಸೌಲಭ್ಯ ಇಲ್ಲದವರನ್ನು ಕೋವಿಡ್ ಆರೈಕೆ ಕೇಂದ್ರಕ್ಕೆ ಸೇರ್ಪಡೆ ಮಾಡಬೇಕು. ಯಾವುದೇ ಕಾರಣಕ್ಕೂ ಗೃಹ ಸಂಪರ್ಕ ತಡೆಯಲ್ಲಿರಿಸಬಾರದು ಎಂದರು.
ಕೋವಿಡ್ ೧೯ ಸೋಂಕಿತ ಪ್ರಕರಣಗಳು ಹೆಚ್ಚು ಕಂಡುಬರುವ ಕಡೆ ವಿಶೇಷ ಗಮನಹರಿಸಬೇಕು. ಅಂತಹ ಪ್ರದೇಶದಲ್ಲಿನ ಜನರಲ್ಲಿ ಕೋವಿಡ್ ೧೯ ಬಗ್ಗೆ ಹೆಚ್ಚಿನ ಜಾಗೃತಿ ನೀಡಬೇಕು ಎಂದರು. ಮುಂಗಾರು ಎದುರಿಸುವ ನಿಟ್ಟಿನಲ್ಲಿ ಗ್ರಾಮ ಪಂಚಾಯತ್ಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳುತ್ತಿವೆ ಎಂದು ಲಕ್ಷಿö್ಮ ಅವರು ತಿಳಿಸಿದರು.
ಉಪ ಪೊಲೀಸ್ ವರಿಷ್ಠಾಧಿಕಾರಿ ದಿನೇಶ್ ಕುಮಾರ್ ಅವರು ತಮ್ಮ ಗ್ರಾ.ಪಂ. ವ್ಯಾಪ್ತಿಯಲ್ಲಿ ಮದುವೆ, ನಾಮಕರಣ ಮತ್ತಿತರ ಯಾವುದೇ ರೀತಿಯ ಕಾರ್ಯಕ್ರಮಗಳು ನಡೆಯುವ ಬಗ್ಗೆ ಪೊಲೀಸ್ ಇಲಾಖೆಗೆ ಮಾಹಿತಿ ನೀಡುವಂತೆ ತಿಳಿಸಿದರು. ತಹಶೀಲ್ದಾರ್ ಮಹೇಶ್, ತಾ.ಪಂ. ಇಒ ಶೇಖರ್, ವೈದ್ಯಾಧಿಕಾರಿ ಡಾ. ಮಂಜುನಾಥ್, ಕ್ಷೇತ್ರ ಶಿಕ್ಷಣಾಧಿಕಾರಿ ಗುರುರಾಜ್, ಬಿಆರ್ಸಿ ಮಂಜುಳ, ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗಳು ಇತರರು ಹಲವು ಮಾಹಿತಿ ನೀಡಿದರು.