ಮಡಿಕೇರಿ, ಮೇ ೩೦: ಕರ್ನಾಟಕ ಪ್ರಾದೇಶಿಕ ಕಾಂಗ್ರೆಸ್ ಸಮಿತಿ ವತಿಯಿಂದ ಉಚಿತ ಆ್ಯಂಬುಲೆನ್ಸ್ ಸೇವೆಗೆ ನಗರದಲ್ಲಿ ಚಾಲನೆ ನೀಡಲಾಯಿತು. ಪಕ್ಷದ ಯುವ ಮುಖಂಡ ಹ್ಯಾರಿಸ್ ನಲಪಾಡ್ ನೇತೃತ್ವದಲ್ಲಿ ಕೊಡಗು ಜಿಲ್ಲೆಯಲ್ಲಿ ಕಾಂಗ್ರೆಸ್ ಕೇರ್ ಹೆಸರಿನ ಆ್ಯಂಬ್ಯುಲೆನ್ಸ್ ಸೇವೆಗೆ ನಗರದಲ್ಲಿ ಪಕ್ಷದ ಪ್ರಮುಖರು ಚಾಲನೆ ನೀಡಿದರು. ಇದೇ ಸಂದರ್ಭ ನೂತನ ಕಾರ್ಯಾಧ್ಯಕ್ಷರನ್ನು ಪಕ್ಷದ ಪ್ರಮುಖರು, ಕಾರ್ಯಕರ್ತರು ಸ್ವಾಗತಿಸಿದರು.ಈ ಸಂದರ್ಭ ಕೊಡಗು ಕಾಂಗ್ರೆಸ್ ಕಾರ್ಯಾಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ವಿಧಾನಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ, ಕೆಪಿಸಿಸಿ ಕಾನೂನು ಮಾನವ ಹಕ್ಕು ಮತ್ತು ಆರ್.ಟಿ.ಐ ಘಟಕದ ರಾಜ್ಯಾಧ್ಯಕ್ಷÀ ಎ.ಎಸ್. ಪೊನ್ನಣ್ಣ, ಕೆಪಿಸಿಸಿ ವಕ್ತಾರ ಹೆಚ್.ಎಸ್ ಚಂದ್ರಮೌಳಿ, ಯುವ ಕಾಂಗ್ರೆಸ್ ಮಾಜಿ ಜಿಲ್ಲಾಧ್ಯಕ್ಷÀ ಹನೀಫ್ ಸಂಪಾಜೆ, ಪೊನ್ನಂಪೇಟೆ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಅಂಕಿತ್ ಪೊನ್ನಪ್ಪ, ನಗರಸಭಾ ಸದಸ್ಯ ರಾಜೇಶ್ ಯಲ್ಲಪ್ಪ, ಯುವ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಮೈಸಿ, ಸೇರಿದಂತೆ ಇನ್ನಿತರರು ಹಾಜರಿದ್ದರು.