ಸೋಮವಾರಪೇಟೆ, ಮೇ ೩೦: ಕೊರೊನಾ ೨ನೇ ಅಲೆ ಗ್ರಾಮೀಣ ಭಾಗದಲ್ಲಿ ಹೆಚ್ಚು ವ್ಯಾಪಿಸುತ್ತಿದ್ದು, ಇದಕ್ಕೆ ಕಡಿವಾಣ ಹಾಕಬೇಕಾದರೆ ಎಲ್ಲಾ ಇಲಾಖಾ ಸಿಬ್ಬಂದಿಗಳು ಸಂಘಟಿತ ಪ್ರಯತ್ನ ನಡೆಸಬೇಕೆಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಸೂಚಿಸಿದರು.
ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ, ಸ್ಥಳೀಯ ಟಾಸ್ಕ್ ಫೋರ್ಸ್ ಸಮಿತಿ ಸಭೆಗಳಲ್ಲಿ ಭಾಗವಹಿಸಿ ಮಾತನಾಡಿದ ಅವರು, ಎಲ್ಲಾ ಇಲಾಖಾಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಮನ್ವಯತೆ ಯಿಂದ ಕೆಲಸ ಮಾಡಿದರೆ ಮಾತ್ರ ಕೊರೊನಾವನ್ನು ನಿಗ್ರಹಿಸಲು ಸಾಧ್ಯ. ಈ ನಿಟ್ಟಿನಲ್ಲಿ ಎಲ್ಲರೂ ಕಾರ್ಯೋನ್ಮುಖರಾಗಬೇಕೆಂದು ತಿಳಿಸಿದರು.ಕೋವಿಡ್ ನಿಯಂತ್ರಣಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಅನೇಕ ಕ್ರಮಗಳನ್ನು ಕೈಗೊಂಡಿವೆ. ಇದರೊಂದಿಗೆ ಪರಿಷ್ಕೃತ ಮಾರ್ಗ ಸೂಚಿಗಳನ್ನು ಬಿಡುಗಡೆ ಮಾಡುತ್ತಿವೆ. ಇವುಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಸಾರ್ವಜನಿಕರು ನಿಯಮಾವಳಿಗಳನ್ನು ಉಲ್ಲಂಘಿಸ ದಂತೆ ಎಚ್ಚರಿಕೆ ವಹಿಸಬೇಕೆಂದು ರಂಜನ್ ಸೂಚಿಸಿದರು.ಜಿಲ್ಲೆಯ ಗಡಿಭಾಗಗಳಲ್ಲಿ ಚೆಕ್ಪೋಸ್ಟ್ಗಳನ್ನು ತೆರೆದು ತಪಾಸಣೆ ನಡೆಸಲಾಗುತ್ತಿದೆ. ವಾರದಲ್ಲಿ ಮೂರು ದಿನ ನಿಗದಿತ ಸಮಯದಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಒದಗಿಸಲಾಗಿದೆ. ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಪ್ರಮಾಣ ಇಳಿಮುಖವಾಗುತ್ತಿದ್ದರೂ ನಿರ್ಲಕ್ಷö್ಯತೆ ವಹಿಸುವ ಹಾಗಿಲ್ಲ. ಎಂದಿನAತೆ ಕಟ್ಟುನಿಟ್ಟಿನ ಕ್ರಮಗಳನ್ನು ಅನುಸರಿಸ ಬೇಕಿದೆ ಎಂದು ರಂಜನ್ ಅಭಿಪ್ರಾಯಿಸಿದರು.
ತಾನೇ ಸ್ವತಃ ಪಿಪಿಇ ಕಿಟ್ಗಳನ್ನು ಧರಿಸಿ ಕೋವಿಡ್ ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಲ್ಲಿ ಕಂಡುಬAದ ಕೆಲವೊಂದು ನ್ಯೂನತೆಗಳನ್ನು ಸರಿಪಡಿಸಲಾಗಿದೆ. ಫ್ರಂಟ್ಲೈನ್ ವಾರಿಯರ್ಸ್ಗಳು ಮೊದಲು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು ಎಂದು ಕಿವಿಮಾತು ಹೇಳಿದರು.
ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗ್ರಾಮವಾರು ದಾಖಲಾಗಿರುವ ಸೋಂಕಿತ ಪ್ರಕರಣ, ಕಂಟೈನ್ಮೆAಟ್ ಜೋನ್ಗಳು, ಕೋವಿಡ್ ಲಸಿಕೆ ಪಡೆದುಕೊಂಡವರ ಮಾಹಿತಿ, ಹೊರ ರಾಜ್ಯ ಮತ್ತು ಜಿಲ್ಲೆಯಿಂದ ಆಗಮಿಸಿ ಗೃಹ ಸಂಪರ್ಕ ತಡೆಯಲ್ಲಿರುವ ಮಂದಿಯ ವಿವರ, ಕೋವಿಡ್ ನಿಯಂತ್ರಣಕ್ಕಾಗಿ ಗ್ರಾ.ಪಂ. ವತಿಯಿಂದ ಕೈಗೊಂಡ ಸುಧಾರಣಾ ಕ್ರಮಗಳ ಸಮಗ್ರ ವರದಿಯನ್ನು ಶಾಸಕರು ಪಡೆದರಲ್ಲದೆ, ಕೆಲವೊಂದು ಸಲಹೆ ಸೂಚನೆ ನೀಡಿದರು. ತಾಲೂಕಿನ ಮಾದಾಪುರ, ಹರದೂರು, ಸುಂಟಿಕೊಪ್ಪ, ಕೆದಕಲ್, ಚೆಟ್ಟಳ್ಳಿ, ನೆಲ್ಲಿಹುದಿಕೇರಿ,
(ಮೊದಲ ಪುಟದಿಂದ) ಕೊಡಗರಹಳ್ಳಿ, ೭ನೇ ಹೊಸಕೋಟೆ, ನಾಕೂರುಶಿರಂಗಾಲ, ಕಂಬಿಬಾಣೆ ಗ್ರಾ.ಪಂ.ಗಳಿಗೆ ಭೇಟಿ ನೀಡಿ ಗ್ರಾ.ಪಂ. ಅಧ್ಯಕ್ಷರು, ಸದಸ್ಯರು, ಟಾಸ್ಕ್ಫೋರ್ಸ್ ಸಮಿತಿ ಸದಸ್ಯರೊಂದಿಗೆ ಸಭೆ ನಡೆಸಿದರು. ಸಭೆಯಲ್ಲಿ ತಾಲೂಕು ತಹಶೀಲ್ದಾರ್ ಗೋವಿಂದರಾಜು, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಜಯಣ್ಣ, ಸೇರಿದಂತೆ ಇತರ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.
ಮಳೆಗಾಲಕ್ಕೆ ಪೂರ್ವ ತಯಾರಿ ಮಾಡಿ: ಇನ್ನೇನು ಕೆಲವೇ ದಿನಗಳಲ್ಲಿ ಮಳೆಗಾಲ ಪ್ರಾರಂಭವಾಗುತ್ತಿದ್ದು, ಪ್ರಾಕೃತಿಕ ವಿಕೋಪ ತಡೆಗಟ್ಟುವ ನಿಟ್ಟಿನಲ್ಲಿ ಗ್ರಾ.ಪಂ.ವತಿಯಿAದ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಲೋಕೋಪಯೋಗಿ ಇಲಾಖೆ, ಜಿಲ್ಲಾ ಪಂಚಾಯತ್, ಅರಣ್ಯ ಇಲಾಖಾಧಿಕಾರಿಗಳ ಸಭೆ ಕರೆದು ಮಳೆಗಾಲವನ್ನು ಎದುರಿಸುವ ಬಗ್ಗೆ ಸಿದ್ಧತೆ ಕೈಗೊಳ್ಳಬೇಕು ಎಂದು ಪಂಚಾಯತ್ ನೋಡಲ್ ಅಧಿಕಾರಿಗಳಿಗೆ ಶಾಸಕ ರಂಜನ್ ಸೂಚಿಸಿದರು.
ಸುಂಟಿಕೊಪ್ಪಕ್ಕೆ ಭೇಟಿ ಸಂದರ್ಭ, ಪ್ರಧಾನಿ ನರೇಂದ್ರ ಮೋದಿ ಅವರ ಬಿಜೆಪಿ ಸರ್ಕಾರ ೭ ವರ್ಷ ಪೂರೈಸಿದ ಹಿನ್ನೆಲೆ ಸುಂಟಿಕೊಪ್ಪದ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಆರೋಗ್ಯ ಕಾರ್ಯಕರ್ತೆಯರಿಗೆ ಶಾಸಕ ರಂಜನ್ ಅವರು ಆಹಾರ ಸಾಮಗ್ರಿಗಳ ಕಿಟ್ ವಿತರಿಸಿದರು. ಈ ಸಂದರ್ಭ ಸ್ಥಳೀಯ ಬಿಜೆಪಿ ಪ್ರಮುಖರು ಉಪಸ್ಥಿತರಿದ್ದರು.