ಮಡಿಕೇರಿ, ಮೇ ೩೦: ಕೋವಿಡ್-೧೯ ಸಾಂಕ್ರಾಮಿಕ ರೋಗ ತೀವ್ರಗತಿಯಲ್ಲಿ ಹರಡುತ್ತಿರುವುದರಿಂದ ಜಿಲ್ಲೆಯಲ್ಲಿರುವ ೧೮ ವರ್ಷ ಮೇಲ್ಪಟ್ಟ ಎಲ್ಲಾ ವಿಶೇಷಚೇತನರಿಗೆ ಮೇ ೨೭ ರಿಂದ ವಾಸವಿರುವ ಗ್ರಾಮ ಪಂಚಾಯಿತಿಗೊಳಪಟ್ಟ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ, ನಗರ ವ್ಯಾಪ್ತಿಯವರಿಗೆ ಸಂಬAಧಿಸಿದ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಇತರ ಸ್ಥಳಗಳಲ್ಲಿ ಲಸಿಕೆ ನೀಡಲಾಗುತ್ತಿದೆ.

ಜಿಲ್ಲೆಯ ಎಲ್ಲಾ ೧೮ ವರ್ಷ ಮೇಲ್ಪಟ್ಟ ವಿಶೇಷಚೇತನರು ಇದರ ಸದುಪಯೋಗ ಪಡೆದುಕೊಳ್ಳಬೇಕಾಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ೭೯೭೫೨೩೬೯೪೩, ಮಾಹಿತಿ ಸಲಹೆಗಾರರಾದ ನವೀನ್ ಹೆಚ್. ೭೪೧೧೭೧೭೬೧೯, ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರು ಮಡಿಕೇರಿ ೮೦೭೩೧೯೨೯೧೪, ಸೋಮವಾರಪೇಟೆ ೯೦೦೮೬೮೫೧೨೯, ವೀರಾಜಪೇಟೆ ೯೦೩೫೩೨೦೩೯೭ ಅವರನ್ನು ಸಂಪರ್ಕಿಸಬಹುದಾಗಿದೆ.