ಮಡಿಕೇರಿ, ಜೂ. ೧: ವಿಶೇಷ ಭತ್ಯೆ ನೀಡಬೇಕೆಂದು ಆಗ್ರಹಿಸಿ ರಾಜ್ಯವ್ಯಾಪಿ ನಡೆಯುತ್ತಿರುವ ಆಯುಷ್ ವೈದ್ಯರ ಪ್ರತಿಭಟನೆಗೆ ಕೊಡಗು ಜಿಲ್ಲೆಯ ಆಯುಷ್ ವೈದ್ಯರು ಬೆಂಬಲ ಸೂಚಿಸಿ ಕಪ್ಪು ಪಟ್ಟಿ ಧರಿಸಿ ಕರ್ತವ್ಯ ನಿರ್ವಹಿಸಿ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿದರು.
ಆಯುಷ್ ವೈದ್ಯಾಧಿಕಾರಿಗಳಿಗೆ ವಿಶೇಷ ಭತ್ಯೆ ನೀಡಬೇಕು. ಸರ್ಕಾರಿ ವೇತನ ಮತ್ತು ಭತ್ಯೆ ತಾರತಮ್ಯವನ್ನು ನಿವಾರಿಸಬೇಕು ಬೇಡಿಕೆ ಈಡೇರಿಸುವ ನಿಟ್ಟಿನಲ್ಲಿ ಸೂಕ್ತ ಆದೇಶವನ್ನು ಹೊರಡಿಸದಿದ್ದಲ್ಲಿ ಜೂನ್ ೭ ರಿಂದ ಕೋವಿಡ್ ಸಂಬAಧಿತ ಎಲ್ಲ ರೀತಿಯ ಕೆಲಸ ಕಾರ್ಯಗಳನ್ನು ಬಹಿಷ್ಕರಿಸಿ, ಕೇವಲ ನಮ್ಮ ಮಾತೃ ಇಲಾಖೆಯ ಆಯುಷ್ ಚಿಕಿತ್ಸಾಲಯ ಮತ್ತು ಆಸ್ಪತ್ರೆಗಳಿಗೆ ಸೀಮಿತವಾಗಿ ಕರ್ತವ್ಯ ನಿರ್ವಹಿಸಬೇಕಾಗುತ್ತದೆ ಎಂದು ಆಯುಷ್ ವೈದ್ಯಾಧಿಕಾರಿ ಡಾ. ಎಂ.ಬಿ. ಶ್ರೀನಿವಾಸ್ ಎಚ್ಚರಿಸಿದ್ದಾರೆ.