ರಾಜ್ಯದಲ್ಲಿ ಇಳಿಮುಖದತ್ತ ಕೊರೊನಾ
ಬೆಂಗಳೂರು, ಜೂ. ೧: ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿದ್ದು ಇಂದು ೧೪,೩೦೪ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ ೨೬,೧೮,೭೩೫ಕ್ಕೆ ಏರಿಕೆಯಾಗಿದೆ. ಕಳೆದ ೨೪ ಗಂಟೆಯಲ್ಲಿ ಮಹಾಮಾರಿಗೆ ೪೬೪ ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ ೨೯,೫೫೪ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಬೆಂಗಳೂರಿನಲ್ಲಿ ಇಂದು ೩,೭೩೪ ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ ೧೧,೬೬,೬೪೭ಕ್ಕೆ ಏರಿಕೆಯಾಗಿದೆ. ನಗರದಲ್ಲಿ ಸೋಂಕಿಗೆ ೨೭೬ ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ರಾಜ್ಯದಲ್ಲಿ ಇಂದು ಸಹ ಹೊಸ ಪಾಸಿಟಿವ್ ಪ್ರಕರಣಗಳಿಗಿಂತ ಹೆಚ್ಚು ಅಂದರೆ ೨೯,೨೭೧ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿAದ ಚೇತರಿಸಿಕೊಂಡವರ ಸಂಖ್ಯೆ ೨೨,೯೦,೮೬೧ಕ್ಕೆ ಏರಿಕೆಯಾಗಿದೆ. ಇನ್ನು ೨,೯೮,೨೯೯ ಸಕ್ರೀಯ ಪ್ರಕರಣಗಳಿವೆ. ರಾಜ್ಯಾದ್ಯಂತ ಇಂದು ೧,೧೬,೨೨೪ ಕೋವಿಡ್ ಟೆಸ್ಟ್ ನಡೆಸಲಾಗಿದ್ದು, ೧೪,೩೦೪ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. ೧೨.೩೦ಕ್ಕೆ ಇಳಿದಿದೆ.
ಆಲಾಪನ್ ಬಂದ್ಯೋಪಾಧ್ಯಾಯ್ಗೆ ನೋಟೀಸ್
ನವದೆಹಲಿ, ಜೂ. ೧: ಪಶ್ಚಿಮ ಬಂಗಾಳದ ನಿವೃತ್ತ ಮುಖ್ಯ ಕಾರ್ಯದರ್ಶಿ ಆಲಾಪನ್ ಬಂದೋಪಾಧ್ಯಾಯಗೆ ಕೇಂದ್ರ ಗೃಹ ಸಚಿವಾಲಯ ವಿಪತ್ತು ನಿರ್ವಹಣಾ ಕಾಯ್ದೆಯಡಿ ಕಾರಣ ಕೇಳಿ ನೊಟೀಸ್ ಜಾರಿಗೊಳಿಸಿದೆ. ಕೇಂದ್ರ ಸರ್ಕಾರದ ನಿರ್ದೇಶನವನ್ನು ಪಾಲಿಸಲು ನಿರಾಕರಿಸಿದ ಹಿನ್ನೆಲೆ ಸೋಮವಾರದಂದು (ಮೇ ೩೧) ರಂದು ನಿವೃತ್ತಿಗೂ ಕೆಲವೇ ಗಂಟೆಗಳ ಮೊದಲು ಬಂದ್ಯೋಪಾಧ್ಯಾಯಗೆ ಕಾರಣ ಕೇಳಿ ನೋಟೀಸ್ ಜಾರಿಗೊಳಿಸಲಾಗಿದೆ. ಆಲಾಪನ್ ಬಂದ್ಯೋಪಾಧ್ಯಾಯ ಅವರ ನಡೆ ವಿಪತ್ತು ನಿರ್ವಹಣಾ ಕಾಯ್ದೆ, ೨೦೦೫ ರ ಸೆಕ್ಷನ್ ೫೧-ಬಿ ನ ಉಲ್ಲಂಘನೆ ಎಂದು ಪರಿಗಣಿಸಲಾಗಿದ್ದು, ಮೂರು ದಿನಗಳಲ್ಲಿ ಉತ್ತರಿಸುವಂತೆ ಸಚಿವಾಲಯ ಹೇಳಿದೆ.
ಸಿದ್ಧರಾಮಯ್ಯ ಆರೋಗ್ಯದಲ್ಲಿ ಇದ್ದಕ್ಕಿದ್ದಂತೆ ಏರುಪೇರು
ಬೆಂಗಳೂರು, ಜೂ. ೧: ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಅವರಿಗೆ ಅನಾರೋಗ್ಯ ಕಾಣಿಸಿಕೊಂಡಿದ್ದು ಎರಡು ದಿನಗಳ ಕಾಲ ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚಿಸಿದ್ದಾರೆ. ಪಕ್ಷದ ಮೂಲಗಳಂತೆ, ಜ್ವರದ ಹಿನ್ನೆಲೆ ಸಿದ್ಧರಾಮಯ್ಯ ಮುಂದಿನ ಎರಡು ದಿನ ಎಲ್ಲ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದಾರೆ. ಸಿದ್ಧರಾಮಯ್ಯ ಈ ಹಿಂದೆ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದರೂ ಅವರಿಗೆ ನೆಗೆಟಿವ್ ವರದಿ ಬಂದಿತ್ತು. ಸಿದ್ಧರಾಮಯ್ಯ ಈಗಾಗಲೇ ಎರಡು ಡೋಸ್ ಲಸಿಕೆ ಪಡೆದಿದ್ದಾರೆ. ನಿನ್ನೆ ಪತ್ರಿಕಾ ಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ನಂತರ ಅವರಿಗೆ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿದೆ. ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದು, ಕೋವಿಡ್ ನೆಗೆಟಿವ್ ವರದಿ ಬಂದಿದೆ ಮುನ್ನೆಚ್ಚರಿಕಾ ಕ್ರಮವಾಗಿ ವೈದ್ಯರು ಅವರಿಗೆ ಎರಡು ದಿನ ವಿಶ್ರಾಂತಿ ಪಡೆಯುವಂತೆ ಸೂಚಿಸಿದ್ದಾರೆ.
ಹಿಂಸಾಚಾರ; ಪ್ರತಿಕ್ರಿಯೆ ನೀಡುವಂತೆ ಸೂಚನೆ
ನವದೆಹಲಿ, ಜೂ. ೧: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ನಂತರ ನಡೆದ ಹಿಂಸಾಚಾರದ ಕುರಿತು ವಿವರ ನೀಡುವಂತೆ ಅಲ್ಲಿನ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಮಂಗಳವಾರ ಸೂಚಿಸಿದೆ. ಪಶ್ಚಿಮ ಬಂಗಾಳ ಚುನಾವಣೆ ನಂತರ ನಡೆದ ಹಿಂಸಾಚಾರ ಹಲವು ಜನರ ವಲಸೆ ಹಾಗೂ ಆಂತರಿಕ ಸ್ಥಳಾಂತರಕ್ಕೆ ಕಾರಣವಾಗಿದೆ. ಅವರ ಜೀವನ ಸಂಕಷ್ಟದಲ್ಲಿದ್ದು, ಅಂತಹವರಿಗೆ ಸೂಕ್ತ ಪರಿಹಾರ ಒದಗಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ವಕೀಲೆ ಶ್ರುತಿ ಅಗರ್ವಾಲ್ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ವಿನೀತ್ ಸರನ್ ಮತ್ತು ಬಿ.ಆರ್. ಗವಾಯಿ ಅವರ ರಜಾಕಾಲದ ಪೀಠವು ರಾಜ್ಯಕ್ಕೆ ನೋಟೀಸ್ ಜಾರಿಗೊಳಿಸಿತು. ಜೊತೆಗೆ, ರಾಷ್ಟಿçÃಯ ಮಾನವ ಹಕ್ಕುಗಳ ಆಯೋಗ ಮತ್ತು ರಾಷ್ಟಿçÃಯ ಮಹಿಳಾ ಆಯೋಗಗಳಿಗೆ ಪ್ರತಿವಾದಿಯಾಗಿ ಸೇರ್ಪಡಲು ಅವಕಾಶ ಕಲ್ಪಿಸಿತು. ರಾಜ್ಯ ಸರ್ಕಾರದ ಉದಾಸೀನತೆಯಿಂದಾಗಿ, ಹದಿನೆಂಟಕ್ಕೂ ಹೆಚ್ಚು ರಾಜಕೀಯ ಕಾರ್ಯಕರ್ತರು ಪ್ರಾಣ ಕಳೆದುಕೊಂಡಿದ್ದಾರೆ. ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಮತ್ತು ಖಾಸಗಿ ಮತ್ತು ಆಸ್ತಿ ಲೂಟಿ ಮಾಡಲಾಗಿದೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ. ಪೊಲೀಸರು ಮತ್ತು ರಾಜ್ಯ ಪ್ರಾಯೋಜಿತ ಗೂಂಡಾಗಳು ಇದರಲ್ಲಿ ಭಾಗಿಯಾಗಿದ್ದಾರೆ. ಸರ್ಕಾರ ಈ ಕುರಿತು ತನಿಖೆ ನಡೆಸುತ್ತಿಲ್ಲ ಮತ್ತು ಅವರ ಜೀವಕ್ಕೆ ಬೆದರಿಕೆ ಎದುರಿಸುತ್ತಿರುವವರಿಗೆ ರಕ್ಷಣೆ ನೀಡುವಲ್ಲಿ ವಿಫಲರಾಗಿದ್ದಾರೆ ಎಂದಿದ್ದಾರೆ.
ಚತ್ತೀಸ್ಗಢ: ಇಬ್ಬರು ನಕ್ಸಲರ ಹತ್ಯೆ
ರಾಯ್ಪುರ, ಜೂ. ೧: ಓರ್ವ ಮಹಿಳೆ ಸೇರಿದಂತೆ ಇಬ್ಬರು ನಕ್ಸಲರು ಚತ್ತೀಸ್ಗಢದ ಕೊಂಡಗಾAವ್ನಲ್ಲಿ ಭದ್ರತಾ ಪಡೆಗಳ ಗುಂಡೇಟಿಗೆ ಹತರಾಗಿದ್ದಾರೆ. ಈ ಘಟನೆ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದು, ಅಪಾರ ಪ್ರಮಾಣದ ಶಸ್ತಾçಸ್ತçಗಳನ್ನು, ಸ್ಫೋಟಕಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಹೇಳಿದ್ದಾರೆ. ಪೊಲೀಸ್ ಐಜಿ ಸುಂದರ್ ರಾಜ್ ಪಿ. ಈ ಬಗ್ಗೆ ಮಾತನಾಡಿದ್ದು, ಪೊಲೀಸ್ ಜಿಲ್ಲಾ ಮೀಸಲು ಗಾರ್ಡ್ (ಡಿಆರ್ಜಿ) ನಕ್ಸಲ್ ವಿರೋಧಿ ಕಾರ್ಯಾಚರಣೆ ಪ್ರಾರಂಭಿಸಿದಾಗ ಭಂಡರಪಾಲ್ ಗ್ರಾಮದ ದಟ್ಟ ಅರಣ್ಯದಲ್ಲಿ ಮಧ್ಯಾಹ್ನ ೧೨:೩೦ಕ್ಕೆ ಗುಂಡಿನ ಚಕಮಕಿ ಪ್ರಾರಂಭವಾಯಿತು ಎಂದು ಹೇಳಿದ್ದಾರೆ. ಉತ್ತರ ಕಾನ್ಕೇರ್-ಮಣಿಪುರ್ ವಿಭಾಗದ ಸಮನ್ವಯ ಸಮಿತಿಗೆ ಸೇರಿದ ಮಾವೋವಾದಿಗಳ ಇರುವಿಕೆಯ ಬಗ್ಗೆ ಮಾಹಿತಿ ಪಡೆದು ರಾಜ್ಪುರ, ಭಂಡಾರ್ಪಾಲ್ ಹಾಗೂ ತಿಮ್ನಾರ್ನ ಅರಣ್ಯ ಪ್ರದೇಶಗಳಲ್ಲಿ ಮೇ.೩೧ ರಂದು ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿತ್ತು. ಈ ವೇಳೆ ಎನ್ಕೌಂಟರ್ ನಡೆದಿದೆ. ಎನ್ಕೌಂಟರ್ನಲ್ಲಿ ಇಬ್ಬರು ಮಾವೋವಾದಿಗಳು ಹತರಾಗಿದ್ದು, ಮಹಿಳಾ ಮಾವೋವಾದಿಯೊಬ್ಬರು ಸಾವನ್ನಪ್ಪಿದ್ದಾರೆ. ಒಂದು ಎಸ್ಎಲ್ಆರ್ (ಸೆಲ್ಫ್-ಲೋಡಿಂಗ್ ರೈಫೆಲ್) ೩೦೩ ರೈಫಲ್ ಹಾಗೂ ೧೨ ಬೋರ್ ರೈಫಲ್ಸ್ ಹಾಗೂ ಬೃಹತ್ ಪ್ರಮಾಣದ ಸ್ಫೋಟಕಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಸುಂದರ್ ರಾಜ್ ಹೇಳಿದ್ದಾರೆ.
ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಮಕ್ಕಳ ಚಿಕಿತ್ಸಾ ವಿಭಾಗ ಅಭಿವೃದ್ಧಿ
ಬೆಂಗಳೂರು, ಜೂ. ೧: ಕೋವಿಡ್ ಮೂರನೇ ಅಲೆಗೆ ಮುನ್ನೆಚ್ಚರಿಕೆಯಾಗಿ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಮಕ್ಕಳ ಚಿಕಿತ್ಸಾ ವಿಭಾಗ ಅಭಿವೃದ್ಧಿಪಡಿಸಲು ತೀರ್ಮಾನಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ತಿಳಿಸಿದರು. ಆರೋಗ್ಯ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿದ ಸಚಿವರು, ಆಕ್ಸಿಜನ್ ಘಟಕಗಳನ್ನು ಪ್ರತಿ ತಾಲೂಕು ಆಸ್ಪತ್ರೆ, ಜಿಲ್ಲಾಸ್ಪತ್ರೆಗಳಲ್ಲಿ ಆರಂಭಿಸಲಾಗುತ್ತಿದೆ. ಜೊತೆಗೆ ಎಲ್ಲ ಜಿಲ್ಲಾಸ್ಪತ್ರೆಯಲ್ಲಿ ೭೦-೮೦ ಹಾಸಿಗೆಗಳ ಸೌಲಭ್ಯದ ಮಕ್ಕಳ ಚಿಕಿತ್ಸಾ ವಿಭಾಗ ಮಾಡಿ, ಅದಕ್ಕೆ ಬೇಕಾದ ಮಕ್ಕಳ ತಜ್ಞರು, ನರ್ಸಿಂಗ್ ಸ್ಟಾಫ್ ಅನ್ನು ಹೆಚ್ಚುವರಿಯಾಗಿ ಪಡೆಯಲು ತೀರ್ಮಾನಿಸಲಾಗಿದೆ. ೨೦ ಹಾಸಿಗೆಯ ಮಕ್ಕಳ ವಿಭಾಗವಿದ್ದರೆ ಅದನ್ನು ೮೦ ಹಾಸಿಗೆಗೆ ಏರಿಸಲಾಗುವುದು. ಎಂಬಿಬಿಎಸ್ ವೈದ್ಯರು, ತಾಂತ್ರಿಕ ಸಿಬ್ಬಂದಿಗೆ ಮಕ್ಕಳಿಗೆ ಚಿಕಿತ್ಸೆ ನೀಡಲು ರಾಜೀವ್ ಗಾಂಧಿ ಆರೋಗ್ಯ ವಿವಿಯಿಂದ ತರಬೇತಿ ನೀಡಲಾಗುವುದು ಎಂದು ಮಾಹಿತಿ ನೀಡಿದರು. ಎರಡನೇ ಅಲೆಯಲ್ಲಿ ಬಂದ ರೂಪಾಂತರಿ ವೈರಾಣು ಪತ್ತೆಗೆ, ೫ ವೈದ್ಯಕೀಯ ಕಾಲೇಜು ಹಾಗೂ ಆರೋಗ್ಯ ಇಲಾಖೆಯಡಿಯ ಮಂಗಳೂರು ವೆನ್ಲಾಕ್ ಹಾಗೂ ವಿಜಯಪುರ ಆಸ್ಪತ್ರೆ ಸೇರಿ ಒಟ್ಟು ೭ ಕಡೆ ಜೀನೋಮಿಕ್ ಲ್ಯಾಬ್ಗಳನ್ನು ಆರಂಭಿಸಲಾಗುವುದು. ವೈರಾಣು ಸ್ವಭಾವ ಅಧ್ಯಯನ ಮಾಡಿ ಅದಕ್ಕೆ ಬೇಕಾದ ಚಿಕಿತ್ಸೆಯನ್ನು ಇಲ್ಲಿ ತೀರ್ಮಾನಿಸಲಾಗುವುದು ಎಂದರು. ಲಾಕ್ಡೌನ್ ಬಗ್ಗೆ ತಾಂತ್ರಿಕ ಸಲಹಾ ಸಮಿತಿ ವರದಿ ನೀಡಿದ್ದು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರವರು ಯಾವ ಬಗೆಯ ಲಾಕ್ಡೌನ್ ಮಾಡಬೇಕು ಹಾಗೂ ಹೇಗೆ ಹಂತಹAತವಾಗಿ ನಿರ್ಬಂಧ ಸಡಿಲಿಸಬೇಕೆಂದು ತೀರ್ಮಾನಿಸುತ್ತಾರೆ. ಕೋವಿಡ್ ಪಾಸಿಟಿವಿಟಿ ದರ ಶೇ. ೫ ಕ್ಕಿಂತ ಕಡಿಮೆ ಹಾಗೂ ಪ್ರಕರಣಗಳ ಸಂಖ್ಯೆ ೫ ಸಾವಿರಕ್ಕಿಂತ ಇಳಿಕೆಯಾದರೆ ನಿರ್ಬಂಧ ಸಡಿಲಿಸಬಹುದು ಎಂದು ತಾಂತ್ರಿಕ ಸಲಹಾ ಸಮಿತಿಯ ವರದಿಯಲ್ಲಿ ಹೇಳಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿಗಳೊAದಿಗೆ ಚರ್ಚಿಸಲಾಗಿದೆ. ೧.೬೪ ಲಕ್ಷ ಕೋವ್ಯಾಕ್ಸಿನ್ ಲಸಿಕೆ ಡೋಸ್ ರಾಜ್ಯಕ್ಕೆ ಬಂದಿದೆ. ಇದನ್ನು ಬಳಸಿ ೪೫ ವರ್ಷ ಮೇಲ್ಪಟ್ಟವರಿಗೆ ಎರಡನೇ ಡೋಸ್ ನೀಡಲಾಗುತ್ತಿದೆ. ಜೂನ್ ಮೊದಲ ವಾರದೊಳಗೆ ಬಾಕಿ ಉಳಿದವರಿಗೆ ಲಸಿಕೆ ನೀಡಲಾಗುವುದು ಎಂದು ತಿಳಿಸಲಾಗಿತ್ತು. ಅದರಂತೆ ಲಸಿಕಾಕರಣ ನಡೆಸಲಾಗುವುದು. ಮುಂದೆ ಲಸಿಕೆ ದೊರೆತಂತೆ, ೧೮-೪೪ ವರ್ಷದವರಿಗೆ ಲಸಿಕೆ ನೀಡಲಾಗುವುದು ಎಂದರು.