ಸುಂಟಿಕೊಪ್ಪ, ಜೂ. ೧: ಕೊಡಗು ಜಿಲ್ಲೆಯನ್ನು ಕೊರೊನಾ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಟಾಸ್ಕ್ ಫೋರ್ಸ್ ಸಮಿತಿಯ ಎಲ್ಲಾ ಸದಸ್ಯರು ಶ್ರಮಿಸುವಂತೆ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಕರೆ ನೀಡಿದರು.

ಕಂಬಿಬಾಣೆ ಗ್ರಾಮ ಪಂಚಾಯಿತಿ ಕಚೇರಿ ಆವರಣದಲ್ಲಿ ಆಯೋಜಿಸ ಲಾದ ಟಾಸ್ಕ್ ಫೋರ್ಸ್ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೋವಿಡ್ ಲಸಿಕೆಯನ್ನು ಹಾಕಿಸಿಕೊಳ್ಳುವುದರಿಂದ ಆರೋಗ್ಯದ ಸ್ಥಿರತೆಯನ್ನು ಕಾಯ್ದುಕೊಳ್ಳಬಹುದು. ಟಾಸ್ಕ್ ಫೋರ್ಸ್ ಸಮಿತಿಯವರು ಲಸಿಕೆಯ ಬಗ್ಗೆ ಸಾರ್ವಜನಿಕರಲ್ಲಿ ಮನವರಿಕೆ ಮಾಡಿಕೊಡಬೇಕೆಂದರು. ಲಸಿಕೆ ಕಾರ್ಯಕ್ರಮವನ್ನು ಕನಿಷ್ಟ ವಾರಕ್ಕೊಮ್ಮೆ ನಡೆಸುವಂತೆ ಆರೋಗ್ಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಕೋವಿಡ್ ಪಾಸಿಟಿವ್ ಬಂದ ರೋಗಿಗಳನ್ನು ಮನೆಯಲ್ಲಿ ಹೋಂ ಕ್ವಾರಂಟೈನ್‌ಗೊಳಿಸದೆ ಕೋವಿಡ್ ಕೇಂದ್ರಗಳಲ್ಲಿ ಉಳಿದುಕೊಳ್ಳುವುದರಿಂದ ಪ್ರಕರಣವನ್ನು ತಡೆಯಲು ಸಾಧ್ಯವಾಗಲಿದೆ. ಆದ್ದರಿಂದ ಟಾಸ್ಕ್ ಫೋರ್ಸ್ ಸಮಿತಿಯವರು ಕಾಳಜಿವಹಿಸಿ ಕೇಂದ್ರಗಳಿಗೆ ಸ್ಥಳಾಂತರಿಸುವAತೆ ಸೂಚಿಸಿದರು.

ಸಭೆಯಲ್ಲಿ ಸೋಮವಾರಪೇಟೆ ತಾಲೂಕು ತಹಶೀಲ್ದಾರ್ ಗೋವಿಂದ ರಾಜು, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ಜಯಣ್ಣ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಧುನಾಗಪ್ಪ, ಉಪಾಧ್ಯಕ್ಷೆ ಎಂ.ಎನ್. ಅಶ್ವಿನಿ, ಸದಸ್ಯರುಗಳಾದ ಆರ್.ಆರ್. ಮೋಹನ, ಎನ್. ಶಂಕರ, ರಾಧ, ಸುಂಟಿಕೊಪ್ಪ ಪೊಲೀಸ್ ಠಾಣಾ ಧಿಕಾರಿ ಪುನಿತ್, ಆಶಾ ಕಾರ್ಯ ಕರ್ತೆಯರು, ಅಂಗನವಾಡಿ ಕಾರ್ಯ ಕರ್ತೆಯರು, ಶಾಲಾ ಶಿಕ್ಷಕರು, ಟಾಸ್ಕ್ ಫೆೆÆÃರ್ಸ್ ಸಮಿತಿ ಹಾಗೂ ಸದಸ್ಯರು ಗ್ರಾ.ಪಂ. ಸಿಬ್ಬಂದಿಗಳು ಹಾಜರಿದ್ದರು.