ಮಡಿಕೇರಿ, ಜೂ. ೧: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕೊಡಗು ಕೋವಿಡ್ ಆಸ್ಪತ್ರೆಗೆ ಆಕ್ಸಿಜನ್ ಕಾನ್ಸನ್ಟ್ರೇಟರ್ಗಳನ್ನು ನೀಡಲಾಯಿತು. ಸುಮಾರು ೩ ಲಕ್ಷ ಮೌಲ್ಯದ ಉಪಕರಣವನ್ನು ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ಧ.ಗ್ರಾ.ಯೋಜನೆಯ ಪ್ರಮುಖರು ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ ಅವರ ಮೂಲಕ ಅಪರ ಜಿಲ್ಲಾಧಿಕಾರಿ ರಾಜು ಮೊಗವೀರ ಅವರಿಗೆ ಹಸ್ತಾಂತರಿಸಿದರು.
ಈ ವೇಳೆ ಮಾತನಾಡಿದ ಧ.ಗ್ರಾ. ಯೋಜನೆಯ ಪ್ರಾದೇಶಿಕ ನಿರ್ದೇಶಕರಾದ ವಸಂತ್ ಸಾಲ್ಯನ ಅವರು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕೋವಿಡ್ ಹಿನ್ನೆಲೆಯಲ್ಲಿ ಈಗಾಗಲೇ ರಾಜ್ಯ ವ್ಯಾಪ್ತಿಯಲ್ಲಿ ಎರಡೂವರೆ ಕೋಟಿ ಮೌಲ್ಯದ ಆಕ್ಸಿಜನ್
(ಮೊದಲ ಪುಟದಿಂದ) ಕಾನ್ಸನ್ಟ್ರೇಟರ್, ವೆಂಟಿಲೇಟರ್ಗಳನ್ನು ೮ ಹೈಪ್ಲೊಮಿಷನ್ ಅನ್ನು ನೀಡಲಾಗಿದೆ. ೧೦೦ ಟನ್ ಆಕ್ಸಿಜನ್ ವಿತರಿಸುವ ಗುರಿ ಹೊಂದಲಾಗಿದ್ದು, ೫೦ ಟನ್ ಆಕ್ಸಿಜನ್ ಅನ್ನು ಈಗಾಗಲೇ ನೀಡಲಾಗಿದೆ. ಉಚಿತ ವಾಹನ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ ಎಂದು ತಿಳಿಸಿದರು.
ಎಂಎಲ್ಸಿ ಸುನಿಲ್ ಸುಬ್ರಮಣಿ ಮಾತನಾಡಿ, ಕೋವಿಡ್ ಸಂಕಷ್ಟದ ಈ ಸಂದರ್ಭದಲ್ಲಿ ಧರ್ಮಸ್ಥಳ ಕ್ಷೇತ್ರದಿಂದ ನಡೆಯುತ್ತಿರುವ ಈ ಸೇವೆ ಶ್ಲಾಘನೀಯವಾದದ್ದು ಎಂದರು. ಅಪರ ಜಿಲ್ಲಾಧಿಕಾರಿ ರಾಜು ಮೊಗವೀರ ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನೆರವನ್ನು ಸದುಪಯೋಗಪಡಿಸಿಕೊಳ್ಳಲಾಗುವುದು ಎಂದು ಹೇಳಿದರು. ಈ ಸಂದರ್ಭ ಯೋಜನೆಯ ನಿರ್ದೇಶಕ ಯೋಗೇಶ್, ವೀರಾಜಪೇಟೆ, ಮಡಿಕೇರಿ ಯೋಜನಾಧಿಕಾರಿ ಪದ್ಮಯ್ಯ, ಸೋಮವಾರಪೇಟೆ ಯೋಜನಾಧಿಕಾರಿ ಜಯಂತಿ ಹಾಜರಿದ್ದರು.