ಮಡಿಕೇರಿ, ಮೇ ೩೧: ಕೋವಿಡ್-೧೯ ಪಾಸಿಟಿವ್ ಬಂದು ಗೃಹ ಸಂಪರ್ಕ ತಡೆಯಲ್ಲಿರುವ ಕೆಲವರು ಮನೆಯಿಂದ ಹೊರಬಂದು ಓಡಾಡುತ್ತಿರುವ ಬಗ್ಗೆ ದೂರುಗಳು ಕೇಳಿ ಬರುತ್ತಿದ್ದು, ಇಂತಹವರು ಸಾರ್ವಜನಿಕ ಸ್ಥಳಗಳಲ್ಲಿ ಓಡಾಡುವುದು ಕಂಡುಬAದಲ್ಲಿ ನಿಯಮಾನುಸಾರ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಎಚ್ಚರಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಜೊತೆ ಸೋಮವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಗೃಹ ಸಂಪರ್ಕ ತಡೆಯಲ್ಲಿರುವವರಿಗೆ ಕಡ್ಡಾಯವಾಗಿ ಸೀಲು ಹಾಕಬೇಕು. ಯಾವುದೇ ಕಾರಣಕ್ಕೂ ಗೃಹ ಸಂಪರ್ಕ ತಡೆಯಿಂದ ಹೊರಬರಬಾರದು. ಗೃಹಸಂಪರ್ಕ ತಡೆಯಲ್ಲಿ ಇರಲು ಸಾಧ್ಯವಿಲ್ಲದಿದ್ದಲ್ಲಿ ಕೋವಿಡ್ ಆರೈಕೆ ಕೇಂದ್ರಕ್ಕೆ ದಾಖಲಾಗಬೇಕು, ಕೋವಿಡ್ ಪಾಸಿಟಿವ್ ಪ್ರಕರಣಗಳು ಹೆಚ್ಚಾದಲ್ಲಿ ಹೆಚ್ಚುವರಿಯಾಗಿ ಕೋವಿಡ್ ಆರೈಕೆ ಕೇಂದ್ರಗಳನ್ನು ತೆರೆಯಲಾಗುವುದು. ಕೋವಿಡ್ ಪಾಸಿಟಿವ್ ಬಂದವರು ಕಡ್ಡಾಯವಾಗಿ ಕೋವಿಡ್ ಆರೈಕೆ ಕೇಂದ್ರಕ್ಕೆ ದಾಖಲಾಗಬೇಕು ಎಂದು ಹೇಳಿದರು.

ಜಿಲ್ಲೆಯಲ್ಲಿ ಕೋವಿಡ್-೧೯ ನಿಯಂತ್ರಣಕ್ಕೆ ಎಲ್ಲರೂ ಕೈಜೋಡಿಸಬೇಕಿದೆ. ಹಾಗಾದಾಗ ಮಾತ್ರ ಕೊಡಗನ್ನು ಕೋವಿಡ್ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಸಾಧ್ಯ. ಆದ್ದರಿಂದ ಪ್ರತಿಯೊಬ್ಬರೂ ಆರೋಗ್ಯದ ಕಡೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಕೋವಿಡ್ ನಿಯಂತ್ರಣ ಬಗ್ಗೆ ಚರ್ಚೆ: ಬಳಿಕ ಜಿಲ್ಲೆಯ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ, ರೆಡ್‌ಕ್ರಾಸ್ ಹಾಗೂ ಸೇವಾ ಭಾರತಿ ಸಂಸ್ಥೆಯ ಪ್ರತಿನಿಧಿಗಳು ಜಿಲ್ಲಾಧಿಕಾರಿ ಅವರನ್ನು ಸೋಮವಾರ ಭೇಟಿ ಮಾಡಿ ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣ ಸಂಬAಧ ಚರ್ಚಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸೇವಾ ಭಾರತಿ ಸಂಸ್ಥೆಯ ಜಿಲ್ಲಾ ಪ್ರಮುಖರಾದ ಚಂದ್ರು ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಸರ್ಕಾರದ ಜೊತೆ ಕೈಜೋಡಿಸಿವೆ. ಕೋವಿಡ್ ಪಾಸಿಟಿವ್ ಕುಟುಂಬಗಳಿಗೆ ಆಹಾರ, ಔಷಧಿ ತಲುಪಿಸುವುದು. ಅಧಿಕಾರಿಗಳ ಜೊತೆ ಸಮನ್ವಯತೆ ಸಾಧಿಸುವುದು. ಅಂತ್ಯಸAಸ್ಕಾರಕ್ಕೆ ಕೈಜೋಡಿಸುವುದು ಹೀಗೆ ಹಲವು ಕಾರ್ಯಗಳನ್ನು ಮಾಡಿಕೊಂಡು ಬರಲಾಗಿದೆ ಎಂದು ಗಮನಕ್ಕೆ ತಂದರು. ಡಾಲಿ ಮಾತನಾಡಿ ಕೋವಿಡ್ ನಿಯಂತ್ರಣ ಸಂಬAಧ ಗ್ರಾಮ ಮಟ್ಟದಲ್ಲಿ ತಂಡವನ್ನು ರಚಿಸಲಾಗಿದೆ. ಸರ್ಕಾರದ ಮಾರ್ಗಸೂಚಿ ಪಾಲಿಸುವುದು, ಸ್ವಚ್ಛತೆ ಕಡೆ ಗಮನಹರಿಸುವುದು, ಹೀಗೆ ಹಲವು ಮಾಹಿತಿ ನೀಡಲಾಗುತ್ತದೆ ಎಂದರು.

ವಾರದಲ್ಲಿ ಮೂರು ದಿನ ಬೆಳಗಿನ ವೇಳೆ ತರಕಾರಿ, ದಿನಸಿ, ಮತ್ತಿತರವನ್ನು ಕೊಳ್ಳಲು ಅವಕಾಶ ನೀಡಲಾಗಿದ್ದು, ಇದರಿಂದ ಗ್ರಾಮೀಣ ಪ್ರದೇಶದವರು ಪಟ್ಟಣಕ್ಕೆ ಬರಲು ತೊಂದರೆಯಾಗುತ್ತದೆ. ಬೆಳಿಗ್ಗೆ ೮ ರಿಂದ ಮಧ್ಯಾಹ್ನ ೧೨ ಗಂಟೆಯವರೆಗೆ ಅವಕಾಶ ಮಾಡುವಂತಾಗಬೇಕು ಎಂದು ಕೋರಿದರು.

ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ನಗರಾಧ್ಯಕ್ಷ ಧನಂಜಯ ಮಾತನಾಡಿ ಈಗಾಗಲೇ ಕೋವಿಡ್ ಮುಖ್ಯವಾಹಿನಿಯ ಕಾರ್ಯಕರ್ತರಿಗೆ ಲಸಿಕೆ ನೀಡಲಾಗುತ್ತಿದೆ. ಹಾಗೆಯೇ ಸ್ವಯಂ ಸೇವಕರಾಗಿ ಕಾರ್ಯನಿರ್ವಹಿಸುತ್ತಿರುವವರಿಗೆ ಲಸಿಕೆ ನೀಡುವಂತಾಗಬೇಕು, ಜಿಲ್ಲೆಯ ಯಾವ ಪ್ರದೇಶಗಳಲ್ಲಿ ಕೋವಿಡ್-೧೯ ಪಾಸಿಟಿವ್ ಪ್ರಕರಣಗಳು ಹೆಚ್ಚು ಕಂಡುಬರುತ್ತಿವೆ. ಅಂತಹ ಕಡೆಗಳಲ್ಲಿ ವಿಶೇಷ ಗಮನಹರಿಸಬೇಕಿದೆ. ಗೃಹ ಸಂಪರ್ಕ ತಡೆಯಲ್ಲಿ ಇರುವವರ ಬಗ್ಗೆ ಸದಾ ಎಚ್ಚರ ವಹಿಸಬೇಕು. ಜೂನ್ ೧೫ ರವರೆಗೆ ಲಾಕ್‌ಡೌನ್ ಮುಂದುವರಿಸುವAತಾಗಬೇಕು ಎಂದು ಸಲಹೆ ಮಾಡಿದರು.

ಸೇವಾ ಭಾರತಿ ಸಂಸ್ಥೆಯ ಸದಸ್ಯರಾದ ಅಪ್ಪಣ್ಣ ಮಾತನಾಡಿ ಆಸ್ಪತ್ರೆಯ ತ್ಯಾಜ್ಯವನ್ನು ಸಮರ್ಪಕವಾಗಿ ವಿಲೇವಾರಿ ಮಾಡಬೇಕು. ಎಲ್ಲೆಂದರಲ್ಲಿ ಬಿಸಾಡಿದರೆ ತೊಂದರೆಗೆ ಸಿಲುಕಬೇಕಾಗುತ್ತದೆ ಎಂದರು. ಡಾ.ನವೀನ್ ಮಾತನಾಡಿ ಖಾಸಗಿ ಚಿಕಿತ್ಸಾಲಯಗಳು ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಸೋಂಕಿತರ ಮಾಹಿತಿಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಒದಗಿಸಬೇಕು, ಮುಖ್ಯವಾಹಿನಿಯಲ್ಲಿ ಕಾರ್ಯನಿರ್ವಹಿಸುವವರಿಗೆ ಲಸಿಕೆ ನೀಡಲಾಗುತ್ತಿದ್ದು, ಸ್ವಯಂ ಸೇವಕರಾಗಿ ಕಾರ್ಯ ನಿರ್ವಹಿಸುವವರಿಗೂ ಲಸಿಕೆ ನೀಡಬೇಕು. ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು ತಳಮಟ್ಟದಲ್ಲಿ ಕೋವಿಡ್ ನಿಯಂತ್ರಣಕ್ಕೆ ಶ್ರಮಿಸುತ್ತಿದ್ದು, ಇವರ ಆರೋಗ್ಯಕ್ಕೂ ವಿಶೇಷ ಆದ್ಯತೆ ನೀಡಬೇಕಿದೆ ಎಂದು ಹೇಳಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್ ಅವರು ಅಂಗನವಾಡಿ ಕಾರ್ಯಕರ್ತರು ಹಾಗೂ ಎಎನ್‌ಎಂಒ ಗಳಿಗೆ ಪಲ್ಸ್ ಆಕ್ಸಿಮೀಟರ್ ನೀಡಲಾಗಿದೆ ಎಂದರು.

ಬಳಿಕ ಮಾತನಾಡಿದ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಸರ್ಕಾರದ ನಿರ್ದೇಶನದಂತೆ ಕೋವಿಡ್ ನಿರೋಧಕ ಲಸಿಕೆಯನ್ನು ಅರ್ಹರಿಗೆ ನೀಡಲಾಗುತ್ತದೆ. ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕೋವಿಡ್ ನಿಯಂತ್ರಣ ಸಂಬAಧ ಕಾರ್ಯಪಡೆಯನ್ನು ರಚಿಸಲಾಗಿದ್ದು, ಪಾಸಿಟಿವ್ ಬಂದಿರುವವರು ಸಾರ್ವಜನಿಕ ಸ್ಥಳಗಳಲ್ಲಿ ಓಡಾಡುವುದು ಕಂಡು ಬಂದಲ್ಲಿ ತಕ್ಷಣವೇ ಮಾಹಿತಿ ನೀಡುವಂತಾಗಬೇಕು ಕೋರಿದರು.

ಜಿ.ಪಂ.ಸಿಇಓ ಭಂವರ್ ಸಿಂಗ್ ಮೀನಾ ಮಾತನಾಡಿ ಕೋವಿಡ್ ನಿಯಂತ್ರಣ ಸಂಬAಧಿಸಿದAತೆ ಗ್ರಾಮ ಮಟ್ಟದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಆಶಾ ಕಾರ್ಯಕರ್ತರು ಹೀಗೆ ಹಲವು ಹಂತದ ಅಧಿಕಾರಿಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದರು. ಉಪ ವಿಭಾಗಾಧಿಕಾರಿ ಈಶ್ವರ ಕುಮಾರ್ ಖಾಂದು, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆಡಳಿತಾಧಿಕಾರಿ ಡಾ.ನಂಜುAಡೇಗೌಡ, ಡಾ.ವಿಶಾಲ್ ಕುಮಾರ್, ಡಾ.ಮಂಜುನಾಥ್, ಡಾ.ರೂಪೇಶ್ ಗೋಪಾಲ್ ಇತರರು ಹಲವು ಮಾಹಿತಿ ನೀಡಿದರು.