ಮಡಿಕೇರಿ, ಮೇ ೩೧ : ವಿಧಾನ ಪರಿಷತ್ ಸದಸ್ಯ ಎಂ.ಪಿ. ಸುನಿಲ್ ಸುಬ್ರಮಣಿ ಅವರು ಜಿಲ್ಲೆಯ ವಿವಿಧ ಚೆಕ್‌ಪೋಸ್ಟ್, ಕೋವಿಡ್ ಕೇರ್ ಸೆಂಟರ್ ಹಾಗೂ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ದಕ್ಷಿಣ ಕೊಡಗಿನ ಕರ್ನಾಟಕ-ಕೇರಳ ಗಡಿ ಭಾಗವಾದ ಮಾಕುಟ್ಟ ಚೆಕ್‌ಪೋಸ್ಟ್ಗೆ ಭೇಟಿ ನೀಡಿ ಅಲ್ಲಿ ಕಾರ್ಯ ನಿರ್ವಹಿಸುತ್ತಿರುವ ವೈದ್ಯಕೀಯ ಸಿಬ್ಬಂದಿಗಳು ಹಾಗೂ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಆನೆಚೌಕೂರು ಚೆಕ್‌ಪೋಸ್ಟ್ಗೆ ಭೇಟಿ ನೀಡಿ ಅಲ್ಲಿ ಕರ್ತವ್ಯ ಮಾಡುತ್ತಿರುವ ಅಧಿಕಾರಿಗಳಿಂದ ಅಲ್ಲಿನ ಸ್ಥಿತಿಗತಿಯ ಬಗ್ಗೆ ಹಾಗೂ ಸಮಸ್ಯೆಗಳನ್ನು ಅವಲೋಕಿಸಿದರು.

ಬಾಳುಗೋಡುವಿನ ಏಕಲವ್ಯ ವಸತಿ ಶಾಲೆಯಲ್ಲಿ ಪ್ರಾರಂಭವಾಗಿರುವ ಕೋವಿಡ್ ಕೇರ್ ಸೆಂಟರ್‌ಗಳಿಗೆ ಭೇಟಿ ನೀಡಿ ಅಲ್ಲಿನ ಸಿಬ್ಬಂದಿಯೊAದಿಗೆ ವ್ಯವಸ್ಥೆಗಳ ಬಗ್ಗೆ ಚರ್ಚಿಸಿದರು. ಅಡುಗೆ ಕೋಣೆಗೆ ತೆರಳಿ ಕೊರೊನಾ ಸೋಂಕಿತರಿಗೆ ನೀಡಲಾಗುವ ಆಹಾರದ ಗುಣಮಟ್ಟದ ಬಗ್ಗೆ ಪರಿಶೀಲನೆ ನಡೆಸಿದರು.

ಆರ್ಜಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಆರಂಭವಾಗಿರುವ ಕೋವಿಡ್ ಕೇರ್‌ಸೆಂಟರ್‌ಗೆ ತೆರಳಿ ಅಲ್ಲಿನ ಸಿಬ್ಬಂದಿಗಳೊAದಿಗೆ ಚರ್ಚಿಸಿದರು.

ಜಿಲ್ಲೆಯ ಬೇಟೋಳಿ, ಹಾತೂರು, ತಿತಿಮತಿ, ಪಾಲಿಬೆಟ್ಟ, ಚೆನ್ನಯ್ಯನಕೋಟೆ, ಮಾಲ್ದಾರೆ, ಸಿದ್ದಾಪುರ, ನೆಲ್ಯಹುದಿಕೇರಿ ಸೇರಿದಂತೆ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಅಲ್ಲಿನ ಪಿಡಿಒ ಹಾಗೂ ಅಧ್ಯಕ್ಷರು, ಪದಾಧಿಕಾರಿಗಳೊಂದಿಗೆ ಕೋವಿಡ್ ಸೋಂಕು ನಿಯಂತ್ರಣದ ಬಗ್ಗೆ ಕೈಗೊಳ್ಳಲಾಗಿರುವ ಕ್ರಮಗಳ ಬಗ್ಗೆ ಸಭೆ ನಡೆಸಿ ಗ್ರಾಮ ಮಟ್ಟದಲ್ಲಿ ಕೋವಿಡ್ ಸೋಂಕು ನಿಯಂತ್ರಣ ಮಾಡಲು ಪಂಚಾಯಿತಿಯವರು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.