ಚೆಟ್ಟಳ್ಳಿ, ಜೂ. ೧: ಚೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೊರೊನಾ ತಡೆಗೆ ಸಂಬAಧಿಸಿದAತೆ ಶಾಸಕ ಅಪ್ಪಚ್ಚು ರಂಜನ್ ಸಮ್ಮುಖದಲ್ಲಿ ಚೆಟ್ಟಳ್ಳಿ ಪಂಚಾಯಿತಿ ಸಭಾಂಗಣದಲ್ಲಿ ಟಾಸ್ಕ್ ಫೋರ್ಸ್ ಸಮಿತಿ ಸಭೆ ನಡೆಯಿತು.
ಕೊರೊನಾ ತಡೆಯಲು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಶಾಸಕರು, ಜನಪ್ರತಿನಿಧಿಗಳು, ಅಧಿಕಾರಿಗಳು ಮಾತನಾಡಿದರು. ಈ ಸಂದರ್ಭ ಮಾಜಿ ತಾಲೂಕು ಪಂಚಾಯಿತಿ ಸದಸ್ಯ ಬಲ್ಲಾರಂಡ ಮಣಿ ಉತ್ತಪ್ಪ, ಕಾರ್ಯನಿರ್ವಾಹಕ ಜಯಣ್ಣ, ಪಂಚಾಯಿತಿ ಅಧ್ಯಕ್ಷ ಮುತ್ತಪ್ಪ ಪಿ.ಟಿ. ಉಪಾಧ್ಯಕ್ಷೆ ವಿಮಲಾಕ್ಷಿ ಬಿ.ಆರ್, ತಹಶೀಲ್ದಾರ್ ಗೋವಿಂದರಾಜು, ನೋಡಲ್ ಅಧಿಕಾರಿ ದರ್ಶನ್, ಸಮಾಜ ಕಲ್ಯಾಣಾಧಿಕಾರಿ ಬಾಲಕೃಷ್ಣ ರೈ, ವೈದ್ಯಾಧಿಕಾರಿ ತೇಜಸ್ವಿನಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಂದೀಶ್ ಕುಮಾರ್ ಬಿ.ಸಿ, ಕಾರ್ಯದರ್ಶಿ ಮಂಜುಳ, ಗ್ರಾಮ ಪಂಚಾಯಿತಿ ಸದಸ್ಯರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಶಿಕ್ಷಕರು ಭಾಗವಹಿಸಿದ್ದರು.