ಕುಶಾಲನಗರ, ಜೂ. ೧: ಪರಿಶಿಷ್ಟರಿಗೆ ಹಾಗೂ ಕೂಲಿ ಕಾರ್ಮಿಕರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಣೆ ಮಾಡದಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ ಮನೆ ಮುಂದೆ ಪ್ರತಿಭಟನೆ ನಡೆಸಿದ ಘಟನೆ ಕುಶಾಲ ನಗರದ ಟೌನ್ ಕಾಲೋನಿಯಲ್ಲಿ ನಡೆಯಿತು. ಭಿತ್ತಿಪತ್ರ ಹಿಡಿದು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ಪಾಲ್ಗೊಂಡ ದಲಿತ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ಕೆ.ಬಿ. ರಾಜು, ಮಾತನಾಡಿ, ಲಾಕ್ಡೌನ್ ಹಿನ್ನೆಲೆಯಲ್ಲಿ, ಪರಿಶಿಷ್ಟರು ಹಾಗೂ ಕೂಲಿ ಕಾರ್ಮಿಕರು ಕೆಲಸವಿಲ್ಲದೆ ಮನೆಯಲ್ಲೇ ಇರುವುದರಿಂದ ಊಟಕ್ಕೂ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಸ್ಥಳೀಯ ಪಟ್ಟಣ ಪಂಚಾಯಿತಿ ಕೂಡ ಇದಕ್ಕೆ ಸ್ಪಂದಿಸದೆ ಇರುವುದು ವಿಪರ್ಯಾಸ. ಬೇರೆಬೇರೆ ವರ್ಗಗಳಿಗೆ ರಾಜ್ಯ ಸರ್ಕಾರ ಪ್ಯಾಕೇಜ್ ಘೋಷಣೆ ಮಾಡಿದೆ. ಕೂಡಲೇ ಸ್ಪಂದಿಸುವAತೆ ಆಗ್ರಹಿಸಿದರು.
ಪ್ರತಿಭಟನೆ ನಡೆಯುತ್ತಿದ್ದ ಸ್ಥಳಕ್ಕೆ ಕುಶಾಲನಗರ ಪೊಲೀಸ್ ಠಾಣಾಧಿಕಾರಿ ಗಣೇಶ್ ಭೇಟಿ ನೀಡಿ ಕೋವಿಡ್ ೧೯ ನಿಯಮ ಉಲ್ಲಂಘನೆ ಮಾಡುತ್ತಿದ್ದು ಪ್ರತಿಭಟನೆಗೆ ಯಾವುದೇ ಅನುಮತಿಯನ್ನು ಪಡೆಯದೆ ಇರುವುದಕ್ಕೆ ಕೆ.ಬಿ.ರಾಜು ಅವರನ್ನು ತರಾಟೆಗೆ ತೆಗೆದುಕೊಂಡರು. ಕಾನೂನು ಕ್ರಮಕೈಗೊಳ್ಳುವ ಎಚ್ಚರಿಕೆ ನೀಡಿದ ಘಟನೆಯೂ ನಡೆಯಿತು.