ವೀರಾಜಪೇm,ೆ ಮೇ ೩೧ : ಕಳೆದ ಎರಡು ವರ್ಷಗಳಿಂದ ಭಾರೀ ಮಳೆಗೆ ಭೂ ಕುಸಿತಗೊಂಡು ತೀವ್ರ ಆತಂಕ ಸೃಷ್ಟಿಸಿದ್ದ ಇಲ್ಲಿನ ಹೆಗ್ಗಳ, ಕೆದಮುಳ್ಳೂರು, ತೋರ ಗ್ರಾಮಗಳು ಸೇರಿದಂತೆ ವಿವಿಧ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಚಾರುಲತ ಸೋಮಲ್ ಅವರು ಭೇಟಿ ನೀಡಿ ಪರಿಶೀಲನೆ ಮಾಡಿದರು.

ಭಾರೀ ಮಳೆÉಯ ಮುನ್ನವೇ ಮುನ್ನೆಚ್ಚರಿಕೆಯ ಪರಿಹಾರ ಕ್ರಮ ಕೈಗೊಳ್ಳಲು ಕಂದಾಯ ಅಧಿಕಾರಿಗಳಿಗೆ ಆದೇಶಿಸಿದ ಚಾರುಲತ ಸೋಮಲ್ ಅವರು ಅಗತ್ಯ ಹಾಗೂ ಆಯ್ದ ಸ್ಥಳಗಳಲ್ಲಿ ಗಂಜಿ ಕೇಂದ್ರಗಳನ್ನು ತೆರೆಯಲು ಸಿದ್ಧತೆ ಮಾಡಿಕೊಳ್ಳಬೇಕು. ಭೂ ಕುಸಿತದ ಆತಂಕದ ಸ್ಥಳಗಳಲ್ಲಿರುವ ಕುಟುಂಬಗಳನ್ನು ಪಟ್ಟಿ ಮಾಡಿ ಸ್ಥಳಾಂತರಿಸಬೇಕು ಎಂದು ಆದೇಶಿಸಿದರು.

ಭೇಟಿ ಸಂದರ್ಭ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ, ಡಿವೈಎಸ್‌ಪಿ ಸಿ.ಟಿ.ಜಯಕುಮಾರ್, ಸರ್ಕಲ್ ಇನ್ಸ್ಪೆಕ್ಟರ್ ಶ್ರೀಧರ್, ವೀರಾಜಪೇಟೆ ಲೋಕೋಪಯೋಗಿ ಕಾರ್ಯಪಾಲಕ ಅಭಿಯಂತರ ಸುರೇಶ್, ತಾಲೂಕು ತಹಶೀಲ್ದಾರ್ ಯೋಗಾನಂದ್ ಇತರ ಕಂದಾಯ ಅಧಿಕಾರಿಗಳು ಹಾಜರಿದ್ದರು.