ಸೋಮವಾರಪೇಟೆ, ಮೇ. ೩೧: ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದ ಮೈ ಸೇವಾ ಸಂಘಟನೆ ವತಿಯಿಂದ ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಗೆ ೩ ಆಕ್ಸಿಜನ್ ಕಾನ್ಸನ್ಟ್ರೇಟರ್ ಒದಗಿಸ ಲಾಯಿತು. ಬಿಜೆಪಿ ಮಂಡಲ ಅಧ್ಯಕ್ಷ ಮನು ಕುಮಾರ್ ರೈ, ರಾಜ್ಯ ಯುವ ಮೋರ್ಚಾ ಸಮಿತಿ ಸದಸ್ಯ ಮಹೇಶ್ ತಿಮ್ಮಯ್ಯ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ದರ್ಶನ್ ಜೋಯಪ್ಪ, ಪ.ಪಂ. ಸದಸ್ಯ ಬಿ.ಆರ್. ಮಹೇಶ್, ಪ್ರಮುಖರಾದ ಪ್ರಜಾ ಪೂಣಚ್ಚ ಸೇರಿದಂತೆ ಇತರರು ಉಪಸ್ಥಿತರಿದ್ದು, ಆಸ್ಪತ್ರೆಗೆ ಹಸ್ತಾಂತರಿಸಿದರು.