ಕೂಡಿಗೆ, ಮೇ ೩೧: ಹೆಬ್ಬಾಲೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಗೂ ಆಡಳಿತ ಮಂಡಳಿಯ ಸದಸ್ಯರು ಹೆಬ್ಬಾಲೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪ್ರಾಥಮಿಕ ಆರೋಗ್ಯ ಕೇಂದ್ರ ದಲ್ಲಿ ಕೋವಿಡ್-೧೯ರ ಗಂಟಲು ಮಾದರಿ ಪರೀಕ್ಷೆ, ಕೋವಿಡ್ ಲಸಿಕೆಯನ್ನು ಪಡೆಯುತ್ತಿರುವ ಬಗ್ಗೆ ಮಾಹಿತಿ ಮತ್ತು ಚಿಕಿತ್ಸೆಯ ಬಗ್ಗೆ ಅಧ್ಯಕ್ಷ ಹೆಚ್.ಎಸ್. ಮಂಜುನಾಥ, ಸದಸ್ಯರುಗಳಾದ ಚಂದ್ರಶೇಖರ್ ರಮೇಶ್, ಕೋವಿಡ್ ನೋಡಲ್ ಅಧಿಕಾರಿ ಗಿರೀಶ್, ರಮೇಶ್, ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಭರತ್ ಮತ್ತು ಸಿಬ್ಬಂದಿ ವರ್ಗದವರು ಇದ್ದರು.