ಕುಶಾಲನಗರ, ಜೂ. ೧: ಕುಶಾಲನಗರ ಪಟ್ಟಣ ವ್ಯಾಪ್ತಿಯಲ್ಲಿ ೮೭ ಕೊರೊನಾ ಸೋಂಕಿತ ವ್ಯಕ್ತಿಗಳು ಚಿಕಿತ್ಸೆ ಪಡೆಯುತ್ತಿದ್ದು, ೬೦ ಕಂಟೈನ್ಮೆAಟ್ ಜೋನ್ಗಳನ್ನು ತೆರೆಯಲಾಗಿದೆ ಎಂದು ಕುಶಾಲನಗರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಕೃಷ್ಣಪ್ರಸಾದ್ ಮಾಹಿತಿ ನೀಡಿದ್ದಾರೆ.
ಪಟ್ಟಣದ ಪ್ರತಿ ವಾರ್ಡ್ ಗಳಲ್ಲಿ ವಾರ್ಡ್ ಸಮಿತಿ ಸದಸ್ಯರು ಕೊರೊನಾ ಲಾಕ್ಡೌನ್ ನಿಯಮಗಳನ್ನು ಉಲ್ಲಂಘನೆ ಮಾಡದಂತೆ ಎಚ್ಚರ ವಹಿಸುತ್ತಿದ್ದಾರೆ ಎಂದು ತಿಳಿಸಿರುವ ಮುಖ್ಯಾಧಿಕಾರಿಗಳು ಇದುವರೆಗೆ ಪಟ್ಟಣದಲ್ಲಿ ಕೋವಿಡ್-೧೯ ಮೂಲಕ ೮ ಮಂದಿ ಮೃತಪಟ್ಟಿರುವುದಾಗಿ ಮಾಹಿತಿ ನೀಡಿದ್ದಾರೆ. ಪಟ್ಟಣದ ವರ್ತಕರಲ್ಲಿ ಸುಮಾರು ೩೮೦ ಮಂದಿ ಗಂಟಲು ದ್ರವ ಪರೀಕ್ಷೆಗೆ ಒಳಗಾಗಿದ್ದು, ೬ ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಪಟ್ಟಣ ಪಂಚಾಯಿತಿ ಅಧ್ಯಕ್ಷ ಜಯವರ್ಧನ್ ತಿಳಿಸಿದ್ದಾರೆ.