ಸೋಮವಾರಪೇಟೆ, ಮೇ ೩೧: ಜಿಲ್ಲೆಯ ಇತರ ಎರಡು ತಾಲೂಕಿಗಿಂತಲೂ ಸೋಮವಾರಪೇಟೆ ತಾಲೂಕಿನಲ್ಲಿ ಕೊರೊನಾ ಸೋಂಕಿತರು ಹಾಗೂ ಮರಣದ ಸಂಖ್ಯೆ ಹೆಚ್ಚಾಗಿದ್ದು ಎಲ್ಲಾ ಇಲಾಖಾಧಿಕಾರಿಗಳು ಕೊರೊನಾ ನಿಯಂತ್ರಣ ಕ್ರಮಗಳನ್ನು ಗಂಭೀರವಾಗಿ ಪರಿಗಣಿಸಿ ಕರ್ತವ್ಯ ನಿರ್ವಹಿಸಬೇಕಿದೆ ಎಂದು ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಕರೆ ನೀಡಿದರು.

ಸಮೀಪದ ಐಗೂರು, ಬೇಳೂರು, ಚೌಡ್ಲು, ಹಾನಗಲ್ಲು, ನೇರುಗಳಲೆ, ಗಣಗೂರು, ಕಿರಗಂದೂರು ಗ್ರಾಮ ಪಂಚಾಯ್ತಿ ಹಾಗೂ ಸೋಮವಾರಪೇಟೆ ಪಟ್ಟಣ ಪಂಚಾಯ್ತಿಯ ಟಾಸ್ಕ್ ಫೋರ್ಸ್ ಸಮಿತಿಗಳ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಕೊರೊನಾ ತಡೆಗಟ್ಟಲು ಅಧಿಕಾರಿ, ಸಿಬ್ಬಂದಿಗಳೊAದಿಗೆ ಜನಸಾಮಾನ್ಯರು ಕೈಜೋಡಿಸದಿದ್ದರೆ ಸೋಂಕು ನಿಯಂತ್ರಣ ಸಾಧ್ಯವಿಲ್ಲ. ಈ ನಿಟ್ಟಿನಲ್ಲಿ ಎಲ್ಲಾ ಇಲಾಖೆಗಳೂ ಸಮನ್ವಯತೆ ಯಿಂದ ಕೆಲಸ ಮಾಡಬಕು. ಸಾರ್ವಜನಿಕರೂ ಸಹ ಆಡಳಿತ ದೊಂದಿಗೆ ಕೈಗ ಜೋಡಿಸಬೇಕು ಎಂದು ಅಭಿಪ್ರಾಯಪಟ್ಟರು. ಇಲ್ಲಿನ ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ವಿವಿಧ ಇಲಾಖೆಗಳ ಅಧಿಕಾರಿಗಳು, ಪಟ್ಟಣ ಪಂಚಾಯಿತಿ ವಾರ್ಡ್ ಟಾಸ್ಕ್ ಫೋರ್ಸ್ ಸಮಿತಿ ಸದಸ್ಯರುಗಳ ಸಭೆಯಲ್ಲಿ ಮಾತನಾಡಿದ ಅವರು, ಸರ್ಕಾರದ ಆದೇಶದಂತೆ ಪ್ರತಿ ಮನೆಗಳಿಗೂ ತೆರಳಿ ಕೋವಿಡ್ ಪರೀಕ್ಷೆ ನಡೆಸಬೇಕು. ರೋಗ ಲಕ್ಷಣಗಳಿದ್ದರೆ ಹೋಮ್ ಐಸೋಲೇಶನ್ ಇರಿಸಬೇಕು ಮತ್ತು ಒಂದೇ ಶೌಚಾಲಯ ಇರುವ ಮನೆಯಲ್ಲಿ ಸೋಂಕಿತರಿದ್ದರೆ ಅಂಥವರನ್ನು ಕೋವಿಡ್ ಕೇರ್ ಸೆಂಟರ್‌ಗೆ ಕಳುಹಿಸಬೇಕೆಂದರು.

ಬೆAಗಳೂರಿನಿAದ ಬಂದವರಿದ್ದರೆ ಕಡ್ಡಾಯವಾಗಿ ಪರೀಕ್ಷೆ ನಡೆಸಿ ಹೋಂ ಕ್ವಾರಂಟೈನ್ ಮಾಡಬೇಕು. ಇದಕ್ಕೆ ಸಹಕರಿಸದಿದ್ದರೆ ಪೊಲೀಸರಿಗೆ ದೂರು ನೀಡಿ ಎಂದ ರಂಜನ್, ಪಟ್ಟಣದಲ್ಲಿ ಮೂರು ದಿನ ಜನಸಂದಣಿ ಹೆಚ್ಚುತ್ತಿದ್ದು, ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆಗೆ ಸೂಚಿಸಿದರು.

ಪಟ್ಟಣದಲ್ಲಿ ತರಕಾರಿ ಹಾಗೂ ಹಣ್ಣುಗಳನ್ನು ಜಿಲ್ಲಾಡಳಿತ ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿರುವ ಬಗ್ಗೆ ದೂರುಗಳು ಬರುತ್ತಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಹಾಗೂ ದರಪಟ್ಟಿ ಯನ್ನು ಅಂಗಡಿಗಳ ಮುಂದೆ ಹಾಕುವಂತೆ ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿಗಳಿಗೆ ಸೂಚಿಸಿದ ಶಾಸಕರು, ಮುಂದೆಯೂ ಹೆಚ್ಚಿನ ದರಕ್ಕೆ ಮಾರಾಟ ಮಾಡಿದರೆ ಮೊಕದ್ದಮೆ ದಾಖಲಿಸುವಂತೆ ಪೊಲೀಸರಿಗೆ ತಿಳಿಸಿದರು.

ಜಿಲ್ಲಾಡಳಿತದಿಂದ ಟಾಸ್ಕ್ ಫೋರ್ಸ್ ಸಮಿತಿಗಳಿಗೆ ಅಗತ್ಯ ವಸ್ತುಗಳನ್ನು ಒದಗಿಸಲು ಅನುದಾನ ಬಿಡುಗಡೆ ಮಾಡುವಂತೆ ಜಿಲ್ಲಾಧಿಕಾರಿ ತಿಳಿಸುವುದಾಗಿ ರಂಜನ್ ಹೇಳಿದರು. ಅನಗತ್ಯವಾಗಿ ಓಡಾಡುವ ವ್ಯಕ್ತಿಗಳು, ವಾಹನಗಳ ಮೇಲೆ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಿ. ಎರಡನೇ ಅಲೆ ತೀಕ್ಷ÷್ಣವಾಗಿದ್ದು, ಮುಂದೆ ಮೂರನೇ ಅಲೆಯ ಸಾಧ್ಯತೆಯೂ ಇದೆ. ಅವುಗಳನ್ನು ಎದುರಿಸಲು ಈಗಿನಿಂದಲೇ ಸಜ್ಜಾಗಬೇಕಿದೆ ಎಂದರು.

ಪಟ್ಟಣದಲ್ಲಿ ೫೦ ಮಂದಿ ಸೋಂಕಿತರಿದ್ದು, ೨೯ ಮನೆಗಳನ್ನು ಸೀಲ್‌ಡೌನ್ ಮಾಡಲಾಗಿದೆ. ಈವರೆಗೆ ೧೪ ಮಂದಿ ಕೊರೊನಾದಿಂದಾಗಿ ಮೃತಪಟ್ಟಿದ್ದಾರೆ ಎಂದು ಮುಖ್ಯಾಧಿಕಾರಿ ನಾಚಪ್ಪ ಮಾಹಿತಿ ನೀಡಿದರು.

ಸಭೆಯಲ್ಲಿ ತಹಶೀಲ್ದಾರ್ ಗೋವಿಂದರಾಜು, ಪೊಲೀಸ್ ವೃತ್ತ ನಿರೀಕ್ಷಕ ಮಹೇಶ್, ಠಾಣಾಧಿಕಾರಿ ಶ್ರೀಧರ್, ಪ.ಪಂ. ಸದಸ್ಯರುಗಳಾದ ಶುಭಕರ, ನಾಮನಿರ್ದೇಶನ ಸಸ್ಯರುಗಳಾದ ಎಸ್.ಮಹೇಶ್, ಸೋಮೇಶ್, ಶರತ್, ಜಿ.ಪಂ.ಮಾಜಿ ಅಧ್ಯಕ್ಷ ವಿ.ಎಂ.ವಿಜಯ, ಮಂಡಲ ಬಿ.ಜೆ.ಪಿ. ಅಧ್ಯಕ್ಷ ಮನುಕುಮಾರ್ ರೈ ಸೇರಿದಂತೆ ಇತರರು ಹಾಜರಿದ್ದರು.