ನಾಪೋಕ್ಲು, ಮೇ. ೩೧: ಪ್ರತಿಯೊಬ್ಬ ನಾಗರಿಕರು ಕೊರೊನಾ ಸೋಂಕು ಹರಡದಂತೆ ಮುನ್ನೆಚ್ಚರಿಕೆ ವಹಿಸಬೇಕು ಹಾಗೂ ಕೊರೊನಾ ಮುಕ್ತ ಗ್ರಾಮಕ್ಕೆ ಪಣತೊಡಬೇಕು ಎಂದು ಶಾಸಕ ಕೆ.ಜಿ.ಬೋಪಯ್ಯ ಹೇಳಿದರು. ಸಮೀಪದ ನೆಲಜಿ ಗ್ರಾಮದ ಪ್ರ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಲಾಗಿದ್ದ ಬಲ್ಲಮಾವಟಿ ಮತ್ತು ಎಮ್ಮೆಮಾಡು ಗ್ರಾಮ ಮಟ್ಟದ ಕಾರ್ಯಪಡೆ ಸಮಿತಿಯ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.
ಕೋವಿಡ್ ಪ್ರಕರಣಗಳು ಹಳ್ಳಿಗಳಲ್ಲಿ ಹೆಚ್ಚಾಗಿ ಕಂಡುಬರುತ್ತಿದ್ದು ಕೊರೊನಾ ಸೋಂಕು ತಡೆಗಟ್ಟಲು ಗ್ರಾಮಸ್ಥರ ಸಹಕಾರ ಅಗತ್ಯ.ಅನಾವಶ್ಯಕವಾಗಿ ಪಟ್ಟಣಕ್ಕೆ ತೆರಳುವುದನ್ನು ತಡೆಗಟ್ಟಬೇಕು.ಗ್ರಾಮ ಪಂಚಾಯಿತಿ ಸದಸ್ಯರು ಆಯಾ ವಾರ್ಡ್ಗಳಲ್ಲಿ ಸಭೆ ಕರೆದು ಆರೋಗ್ಯ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಕಾರ್ಯಕರ್ತೆ ಯರೊಂದಿಗೆ ಚರ್ಚಿಸಿ ಮಾಹಿತಿ ಪಡೆದುಕೊಳ್ಳ್ಳಬೇಕು. ಕೋವಿಡ್ ಸಕ್ರಿಯ ಪ್ರಕರಣಗಳನ್ನು ತಗ್ಗಿಸಿ ಕೊರೊನಾ ಮುಕ್ತ ಜಿಲ್ಲೆಯನ್ನಾಗಿಸಲು ಎಲ್ಲರ ಸಹಕಾರ ಅಗತ್ಯ ಎಂದರು.
ಸಭೆಯಲ್ಲಿ ಮಡಿಕೇರಿ ತಾಲೂಕು ತಹಶೀಲ್ದಾರ್ ಮಹೇಶ್, ಕಾರ್ಯನಿರ್ವಹಣಾಧಿಕಾರಿ ಶೇಖರ್, ತಾ.ಪಂ. ಆಡಳಿತಾಧಿಕಾರಿ, ಕೃಷಿ ನಿರ್ದೇಶಕಿ ಶಬಾನಾ ಶೇಖ್, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ, ಸಭೆಯಲ್ಲಿ ಮಡಿಕೇರಿ ತಾಲೂಕು ತಹಶೀಲ್ದಾರ್ ಮಹೇಶ್, ಕಾರ್ಯನಿರ್ವಹಣಾಧಿಕಾರಿ ಶೇಖರ್, ತಾ.ಪಂ. ಆಡಳಿತಾಧಿಕಾರಿ, ಕೃಷಿ ನಿರ್ದೇಶಕಿ ಶಬಾನಾ ಶೇಖ್, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ, ಸಭೆಯಲ್ಲಿ ಮಡಿಕೇರಿ ತಾಲೂಕು ತಹಶೀಲ್ದಾರ್ ಮಹೇಶ್, ಕಾರ್ಯನಿರ್ವಹಣಾಧಿಕಾರಿ ಶೇಖರ್, ತಾ.ಪಂ. ಆಡಳಿತಾಧಿಕಾರಿ, ಕೃಷಿ ನಿರ್ದೇಶಕಿ ಶಬಾನಾ ಶೇಖ್, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ,