ಮಡಿಕೇರಿ, ಮೇ ೩೧: ಜಿಲ್ಲೆಯಲ್ಲಿ ಸೋಮವಾರ ೨೪೫ ಹೊಸ ಕೋವಿಡ್-೧೯ ಪ್ರಕರಣಗಳು ದೃಢಪಟ್ಟಿದೆ. ೨೩೩ ಆರ್‌ಟಿಪಿಸಿಆರ್ ಮತ್ತು ೧೨ ಪ್ರಕರಣಗಳು ರ‍್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.

ಮಡಿಕೇರಿ ತಾಲೂಕಿನಲ್ಲಿ ೭೫ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬAದಿದೆ. ಈ ಪೈಕಿ ೭೧ ಪ್ರಕರಣಗಳು ಆರ್‌ಟಿಪಿಸಿಆರ್ ಮತ್ತು ೪ ಪ್ರಕರಣಗಳು ರ‍್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.

ಸೋಮವಾರಪೇಟೆ ತಾಲೂಕಿನಲ್ಲಿ ೧೧೮ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬAದಿದೆ. ಈ ಪೈಕಿ ೧೧೨ ಆರ್‌ಟಿಪಿಸಿಆರ್ ಮತ್ತು ೬ ಪ್ರಕರಣಗಳು ರ‍್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.

ವೀರಾಜಪೇಟೆ ತಾಲೂಕಿನಲ್ಲಿ ೫೨ ಹೊಸ ಕೋವಿಡ್-೧೯ ಪ್ರಕರಣಗಳು ಕಂಡು ಬಂದಿದೆ. ಈ ಪೈಕಿ ೫೦ ಆರ್‌ಟಿಪಿಸಿಆರ್ ಮತ್ತು ೨ ಪ್ರಕರಣ ರ‍್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.

ಜಿಲ್ಲೆಯಲ್ಲಿನ ಒಟ್ಟು ಕೋವಿಡ್-೧೯ ಪ್ರಕರಣಗಳ ಸಂಖ್ಯೆ ೨೪,೪೮೬ ಆಗಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ೩೨೮ ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು ೨೧,೮೧೩ ಮಂದಿ ಗುಣಮುಖರಾಗಿದ್ದಾರೆ. ೨೩೫೪ ಸಕ್ರಿಯ ಪ್ರಕರಣಗಳಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ೩ ಸಾವು ಉಂಟಾಗಿದ್ದು, ಒಟ್ಟು ೩೧೯ ಮರಣ ಪ್ರಕರಣಗಳು ವರದಿಯಾಗಿದೆ. ಕಂಟೈನ್‌ಮೆAಟ್ ವಲಯಗಳ ಸಂಖ್ಯೆ ೩೫೫ ಆಗಿದೆ. ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ಪ್ರಮಾಣ ಶೇ.೧೬.೨೬ ರಷ್ಟು ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದ್ದಾರೆ.