ಮಡಿಕೇರಿ, ಜೂ.೧: ಕೊಡಗು ಜಿಲ್ಲಾ ಪೊಲೀಸ್ ಘಟಕದ ವಿವಿಧ ಠಾಣೆ ಮತ್ತು ಕಚೇರಿಗಳಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದ ಮಡಿಕೇರಿ ವೃತ್ತ ನಿರೀಕ್ಷಕ ಸಿ.ಎನ್. ದಿವಾಕರ್, ಸಿಪಿಐ ಹಾಗೂ ಸಹಾಯಕ ಉಪ ನಿರೀಕ್ಷಕ ಕೆ.ಜಿ. ಹೊನ್ನಪ್ಪ ಅವರನ್ನು ಕೊಡಗು ಜಿಲ್ಲಾ ಪೊಲೀಸ್ ವತಿಯಿಂದ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಸನ್ಮಾನಿಸಿ ಬೀಳ್ಕೊಡಲಾಯಿತು.