ಮಡಿಕೇರಿ, ಜೂ.೧: ಜಿಲ್ಲಾ ತಂಬಾಕು ನಿಯಂತ್ರಣ ಕೋಶ ವತಿಯಿಂದ ಸೋಮವಾರ ವಿಶ್ವ ತಂಬಾಕು ರಹಿತ ದಿನಾಚರಣೆಯ ಪ್ರಯುಕ್ತ ಜಿಲ್ಲಾಧಿಕಾರಿ ಚಾರುಲತ ಸೋಮಲ್ ಅವರು ಜಿಲ್ಲಾ ತಂಬಾಕು ನಿಯಂತ್ರಣ ಕಾರ್ಯಕ್ರಮದ ಲೋಗೊ ಹೊಂದಿರುವ ಮಾಸ್ಕ್ ಹಾಗೂ ಬ್ಯಾಡ್ಜ್ ಧರಿಸಿ ಪ್ರತಿಜ್ಞಾ ವಿಧಿ ಭೋಧಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್, ಜಿಲ್ಲಾ ತಂಬಾಕು ನಿಯಂತ್ರಣ ಕಾರ್ಯಕ್ರಮಾಧಿಕಾರಿ ಡಾ.ಆನಂದ್, ವೈದ್ಯಕೀಯ ಅಧೀಕ್ಷಕರಾದ ಡಾ.ಮಂಜುನಾಥ್, ಸ್ಥಾನೀಯ ವೈದ್ಯಾಧಿಕಾರಿ ಡಾ.ರೂಪೇಶ್, ಕೊಡಗು ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಪ್ರಾಂಶುಪಾಲರಾದ ಡಾ.ವಿಶಾಲ್ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಿಬ್ಬಂದಿಗಳು ಉಪಸ್ಥಿತರಿದ್ದರು.