ಮಡಿಕೇರಿ, ಜೂ.೧: ಕೇಂದ್ರ ಸರ್ಕಾರದಿಂದ ಮಹತ್ವದ ನಿರ್ಧಾರ ಕೈಗೊಂಡಿದ್ದು, ಕೋವಿಡ್ ಹಿನ್ನೆಲೆಯಲ್ಲಿ ೧೨ನೇ ತರಗತಿ ಸಿಬಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲಾಗಿದೆ. ವಿದ್ಯಾರ್ಥಿ ಸ್ನೇಹಿ ಕ್ರಮ ಎಂದು ಸರ್ಕಾರ ಹೇಳಿದ್ದು, ಟ್ವೀಟ್ ಮೂಲಕ ಪ್ರಧಾನಿ ಮೋದಿ ನಿರ್ಧಾರ ಘೋಷಣೆ ಮಾಡಿದ್ದಾರೆ. ಮಕ್ಕಳ ಆರೋಗ್ಯಕ್ಕೆ ಆದ್ಯತೆ ಹಿನ್ನೆಲೆ ಪರೀಕ್ಷೆ ನಡೆಸದಿರಲು ಕೇಂದ್ರ ಸರಕಾರ ಈ ನಿರ್ಧಾರ ಕೈಗೊಂಡಿದೆ.