ಗುಡ್ಡೆಹೊಸೂರು, ಮೇ ೩೧: ಹೆಲ್ಮೆಟ್ ಧರಿಸದ ದ್ವಿಚಕ್ರ ವಾಹನ ಸವಾರರಿಗೆ ಗುಡ್ಡೆ ಹೊಸೂರಿನಲ್ಲಿ ಪೊಲೀಸರು ದಂಡ ವಿಧಿಸುತ್ತಿದ್ದಾರೆ. ಅಧಿಕ ಮಂದಿ ಸವಾರರು ಹೆಲ್ಮೆಟ್ ಧರಿಸುತ್ತಿಲ್ಲ. ಕುಶಾಲನಗರ ಗ್ರಾಮಾಂತರ ಠಾಣಾಧಿಕಾರಿ ಮತ್ತು ಸಿಬ್ಬಂದಿಗಳು ಹಲವು ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಗ್ರಾಮಾಂತರ ಠಾಣಾಧಿಕಾರಿ ಶಿವಶಂಕರ ಮತ್ತು ಡಿವೈಎಸ್ಪಿ ಶೈಲೇಂದ್ರ, ವೃತ್ತನಿರೀಕ್ಷಕ ಮಹೇಶ್ ಮತ್ತು ಸಿಬ್ಬಂದಿಗಳು ತೊಡಗಿಸಿಕೊಂಡಿದ್ದಾರೆ.