ವೀರಾಜಪೇಟೆ, ಜೂ. ೨: ವೀರಾಜಪೇಟೆ ತಾಲೂಕಿನ ಆರ್ಜಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಏಕಲವ್ಯ ವಸತಿ ಶಾಲೆಯಲ್ಲಿನ ಕೋವಿಡ್ ಆರೈಕೆ ಕೇಂದ್ರಕ್ಕೆ ತಹಶೀಲ್ದಾರ್ ಯೋಗಾನಂದ ಮತ್ತು ವೀರಾಜಪೇಟೆ ಪ.ಪಂ. ಮುಖ್ಯಾಧಿಕಾರಿ ಎ.ಎಂ. ಶ್ರೀಧರ್ ಅವರು ಭೇಟಿ ನೀಡಿ ಪರಿಶೀಲಿಸಿದರು. ಕೋವಿಡ್-೧೯ ಸೋಂಕಿತರ ಯೋಗಕ್ಷೇಮ ವಿಚಾರಿಸಿದರು. ಊಟ ತಿಂಡಿ ಸಮಯಕ್ಕೆ ಸರಿಯಾಗಿ ನೀಡಲಾಗುತ್ತಿದೆಯೇ, ಬಿಸಿ ನೀರು ಒದಗಿಸಲಾಗುತ್ತಿದೆಯೇ ಎಂದು ಮಾಹಿತಿ ಪಡೆದರು. ಹಾಗೆಯೇ ಪರಿಸರ ಶುಚಿತ್ವಕ್ಕೆ ಆದ್ಯತೆ ನೀಡುವಂತೆ ಸಲಹೆ ಮಾಡಿದರು.