ಮಡಿಕೇರಿ, ಜೂ. ೨: ಮಡಿಕೇರಿ ತಾಲೂಕಿನ ಕುಂದಚೇರಿ, ಕರಿಕೆ, ಭಾಗಮಂಡಲ, ಅಯ್ಯಂಗೆರಿ, ಬಲ್ಲಮಾವಟಿ, ಎಮ್ಮೆಮಾಡು, ಕಕ್ಕಬ್ಬೆ, ನಾಪೋಕ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೋವಿಡ್-೧೯ ಮಹಾಮಾರಿಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಶಾಸಕ ಕೆ.ಜಿ. ಬೋಪಯ್ಯ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.

ಆಯಾಯ ಪಂಚಾಯಿತಿ ವ್ಯಾಪ್ತಿಯಲ್ಲಿ ತಹಶೀಲ್ದಾರ್, ತಾಲೂಕು ಪಂಚಾಯಿತಿ ಆಡಳಿತಾಧಿ ಕಾರಿಗಳು, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ, ತಾಲೂಕು ವೈದ್ಯಾಧಿಕಾರಿ, ನೋಡಲ್ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು, ಸ್ಥಳೀಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಕೋವಿಡ್ ಜಾಗೃತಿ ಸಮಿತಿ ಸದಸ್ಯರು, ಗ್ರಾಮ ಪಂಚಾಯಿತಿ ಸದಸ್ಯರು, ಆಶಾ ಕಾರ್ಯಕರ್ತರು ಹಾಗೂ ಆರೋಗ್ಯ ಕಾರ್ಯ ಕರ್ತರುಗಳ ಸಮ್ಮುಖದಲ್ಲಿ ಸಭೆ ನಡೆಸಿ, ಕೋವಿಡ್-೧೯ ಮಹಾಮಾರಿ ಯನ್ನು ಹತೋಟಿಗೆ ತರುವ ನಿಟ್ಟಿನಲ್ಲಿ ತೆಗೆದುಕೊಳ್ಳಬೇಕಾದ ಕ್ರಮಗಳು ಮತ್ತು ಸ್ಥಳೀಯ ಸಮಸ್ಯೆ ಗಳ ಬಗ್ಗೆ ಚರ್ಚಿಸಿ, ಉಪಯುಕ್ತ ಸಲಹೆ ಸೂಚನೆಗಳನ್ನು ನೀಡ ಲಾಯಿತು. ಹಾಗೆಯೇ ಕೋವಿಡ್ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಲಾಯಿತು.