ಆಲೂರು-ಸಿದ್ದಾಪುರ, ಜೂ. ೩: ಸರಕಾರ ಮತ್ತು ಜಿಲ್ಲಾಡಳಿತ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಾರ್ಯಪಡೆ ಸಮಿತಿ ಮೂಲಕ ಸೋಂಕು ನಿರ್ಮೂಲನೆಗಾಗಿ ಪಣತೊಟ್ಟಿದೆ. ಕಾರ್ಯಪಡೆಯ ಕಾರ್ಯವೈಖರಿ ನಿಜಕ್ಕೂ ಶ್ಲಾಘನೀಯ ಎಂದು ಮಡಿಕೇರಿ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಹೇಳಿದರು.

ಆಲೂರು-ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆಲೂರು-ಸಿದ್ದಾಪುರ, ಜೂ. ೩: ಸರಕಾರ ಮತ್ತು ಜಿಲ್ಲಾಡಳಿತ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಾರ್ಯಪಡೆ ಸಮಿತಿ ಮೂಲಕ ಸೋಂಕು ನಿರ್ಮೂಲನೆಗಾಗಿ ಪಣತೊಟ್ಟಿದೆ. ಕಾರ್ಯಪಡೆಯ ಕಾರ್ಯವೈಖರಿ ನಿಜಕ್ಕೂ ಶ್ಲಾಘನೀಯ ಎಂದು ಮಡಿಕೇರಿ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಹೇಳಿದರು.

ಆಲೂರು-ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ೨ನೇ ಅಲೆ ತೀವ್ರತೆಯಿಂದ ಕೊಡಗು ಜಿಲ್ಲೆಯಲ್ಲಿ ಅಧಿಕ ಸಂಖ್ಯೆಯಲ್ಲಿ ಸೋಂಕು ಮತ್ತು ಸಾವಿನ ಪ್ರಕರಣಗಳಾಗಿವೆ, ಹೆಚ್ಚಾಗಿ ಗ್ರಾಮೀಣ ಪ್ರದೇಶಗಳಲ್ಲಿ ಸೋಂಕು ಮತ್ತು

ಸಾವಿನ ಪ್ರಕರಣ

(ಮೊದಲ ಪುಟದಿಂದ) ಹೆಚ್ಚಾಗುತ್ತಿರುವುದರಿಂದ ಸರಕಾರ ಮತ್ತು ಜಿಲ್ಲಾಡಳಿತ ತಾಲೂಕು ಮತ್ತು ಗ್ರಾ.ಪಂ. ಮಟ್ಟದಲ್ಲಿ ಕಾರ್ಯಪಡೆ ಸಮಿತಿ ರಚಿಸಿದ್ದು ಕೋವಿಡ್ ವಾರಿಯರ್ಸ್ ಜೊತೆಗೂಡಿ ಕೋವಿಡ್ ಸೋಂಕು ಪ್ರಕರಣ ಪ್ರತಿಯೊಂದು ಗ್ರಾಮಗಳಲ್ಲಿ ಶೂನ್ಯ ಸಂಖ್ಯೆಗೆ ತರಲು ಪಣತೊಟ್ಟಿದೆ ಎಂದರು. ಟಾಸ್ಕ್ಫೋರ್ಸ್ ಸಮಿತಿ ಮತ್ತು ವಾರಿಯರ್ಸ್ಗಳು ತಮ್ಮ ಆರೋಗ್ಯವನ್ನು ಕಾಪಾಡಿಕೊಂಡು ಜನರಿಗೆ ಸೋಂಕು ಹರಡದಂತೆ ತಡೆಗಟ್ಟಲು ಪಣತೊಡುವಂತೆ ಮನವಿ ಮಾಡಿದರು. ಸರಕಾರ ಕೋವಿಡ್ ಆಸ್ಪತ್ರೆ ಮತ್ತು ಕೋವಿಡ್ ಕೇರ್‌ಸೆಂಟರ್‌ಗಳನ್ನು ಸ್ಥಾಪಿಸಿ ಸೋಂಕಿತರಿಗೆ ಉತ್ತಮ ಆರೋಗ್ಯ ಸೇವೆಯ ಜೊತೆಯಲ್ಲಿ ಉತ್ತಮವಾದ ಪೌಷ್ಟಿಕಾಂಶ ಆಹಾರವನ್ನು ನೀಡುತ್ತಿದೆ, ಕೋವಿಡ್ ೩ನೇ ಅಲೆ ಮಕ್ಕಳ ಮೇಲೆ ಪರಿಣಾಮ ಬೀರಬಹುದೆಂದು ತಜ್ಞರು ಎಚ್ಚರಿಕೆ ನೀಡಿರುವ ಹಿನ್ನೆಲೆ ಈಗಿನ ೨ನೇ ಅಲೆಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವ ಮೂಲಕ ೩ನೇ ಅಲೆಯನ್ನು ಎದುರಿಸಲು ಸಿದ್ಧಗೊಳ್ಳಬೇಕಿದ್ದು ಈ ನಿಟ್ಟಿನಲ್ಲಿ ಸರಕಾರದ ಮಾರ್ಗಸೂಚಿಯನ್ನು ಟಾಸ್ಕ್ಫೋರ್ಸ್ ಸಮಿತಿ ಮತ್ತು ವಾರಿಯರ್ಸ್ ಪಾಲನೆ ಮಾಡುವಂತೆ ಮನವಿ ಮಾಡಿದರು.

ತಾ.ಪಂ. ಸಿಇಓ ಜಯಣ್ಣ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಕೋವಿಡ್ ಸೋಂಕು ಹೆಚ್ಚಾಗುತ್ತಿರು ವುದರಿಂದ ಗ್ರಾ.ಪಂ. ಕಾರ್ಯಪಡೆ, ಆಶಾ, ಅಂಗನವಾಡಿ ಮತ್ತು ಆರೋಗ್ಯ ಕಾರ್ಯಕರ್ತೆಯರು ಹಗಲಿರುಳು ಶ್ರಮಿಸುತ್ತಿದ್ದು, ಈ ನಿಟ್ಟಿನಲ್ಲಿ ಗ್ರಾಮಗಳಲ್ಲಿ ಸೋಂಕು ಪ್ರಕರಣ ಶೂನ್ಯ ಗೊಳಿಸಲು ಮತ್ತಷ್ಟು ಶ್ರಮವಹಿಸುವಂತೆ ಮನವಿ ಮಾಡಿದರು.

ತಹಶೀಲ್ದಾರ್ ಗೋವಿಂದರಾಜು ಮಾತನಾಡಿ, ಹೊರ ಜಿಲ್ಲೆ ಮತ್ತು ಹೊರ ರಾಜ್ಯಗಳಿಂದ ಬಂದವರಿAದ ಜಿಲ್ಲೆಯಲ್ಲಿ ಪ್ರತಿಯೊಂದು ಹಳ್ಳಿಗಳಲ್ಲಿ ಕೋವಿಡ್ ಸೋಂಕು ಹೆಚ್ಚಾಗಲು ಕಾರಣವಾಗಿದೆ, ಜಿಲ್ಲಾಡಳಿತ ಹೊರ ಜಿಲ್ಲೆಯಿಂದ ಬಂದವರನ್ನು ಕೋವಿಡ್ ಪರೀಕ್ಷೆ ಮತ್ತು ಸೀಲ್ ಹಾಕಿ ಮನೆಯಲ್ಲಿ ಕ್ವಾರಂಟೈನ್‌ನಲ್ಲಿರಿಸಿದರೂ ಕೆಲವರು ಹೊರಗಡೆ ಓಡಾಡುತ್ತಿರುವ ಬಗ್ಗೆ ದೂರು ಬರುತ್ತಿದೆ. ಈ ನಿಟ್ಟಿನಲ್ಲಿ ಅಂತವರ ವಿರುದ್ಧ ಮೇಲೆ ಕ್ರಮಕೈಗೊಳ್ಳಲು ಟಾಸ್ಕ್ಫೋರ್ಸ್ ಸಮಿತಿಯವರಿಗೆ ಪೂರ್ಣ ಅಧಿಕಾರ ನೀಡಲಾಗಿದೆ ಎಂದರು.

ಆಲೂರು-ಸಿದ್ದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಸುಪರ್ಣ ಕೃಷ್ಣಾನಂದ್ ಮಾತನಾಡಿದರು.

ಸಭೆಯಲ್ಲಿ ತಾಲೂಕು ಕೋವಿಡ್ ನೋಡಲ್ ಅಧಿಕಾರಿ ಬಾಲಕೃಷ್ಣ ರೈ, ಗ್ರಾ.ಪಂ. ಅಧ್ಯಕ್ಷ ಮೋಹನ್‌ಕುಮಾರ್, ಉಪಾಧ್ಯಕ್ಷೆ ದಮಯಂತಿ ಕರುಂಬಯ್ಯ, ಸದಸ್ಯ ಪಿ.ಎನ್. ಗಂಗಾಧರ್, ಪಿಡಿಓ ಪೂರ್ಣಿಮ, ಕಾರ್ಯದರ್ಶಿ ಚಂದ್ರೇಗೌಡ, ಶನಿವಾರಸಂತೆ ಪೊಲೀಸ್ ಠಾಣಾಧಿಕಾರಿ ದೇವರಾಜ್ ಸೇರಿದಂತೆ ಇನ್ನಿತರರು ಇದ್ದರು.