ಮಡಿಕೇರಿ, ಜೂ. ೨: ಜಿಲ್ಲೆಯಲ್ಲಿ ಬುಧವಾರ ಬೆಳಿಗ್ಗೆ ೧೧ ಗಂಟೆ ವೇಳೆಗೆ ಕಳೆದ ೨೪ ಗಂಟೆಗಳಲ್ಲಿ ೨೨೭ ಹೊಸ ಕೋವಿಡ್-೧೯ ಪ್ರಕರಣಗಳು ದೃಢಪಟ್ಟಿವೆ. ೨೦೨ ಆರ್.ಟಿ.ಪಿ.ಸಿ.ಆರ್. ಮತ್ತು ೨೫ ಪ್ರಕರಣಗಳು ರ‍್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿವೆ.

ಮಡಿಕೇರಿ ತಾಲೂಕಿನಲ್ಲಿ ೪೪ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬAದಿದೆ. ಈ ಪೈಕಿ ೪೧ ಪ್ರಕರಣಗಳು ಆರ್.ಟಿ.ಪಿ.ಸಿ.ಆರ್. ಮತ್ತು ೩ ಪ್ರಕರಣಗಳು ರ‍್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿವೆ.

ಸೋಮವಾರಪೇಟೆ ತಾಲೂಕಿನಲ್ಲಿ ೧೨೨ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬAದಿದೆ. ಈ ಪೈಕಿ ೧೦೨ ಆರ್.ಟಿ.ಪಿ.ಸಿ.ಆರ್. ಮತ್ತು ೨೦ ಪ್ರಕರಣಗಳು ರ‍್ಯಾಪಿಡ್ ಆಂಟಿಜೆನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.

ವೀರಾಜಪೇಟೆ ತಾಲೂಕಿನಲ್ಲಿ ೬೧ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬAದಿದೆ. ಈ ಪೈಕಿ ೫೯ ಆರ್.ಟಿ.ಪಿ.ಸಿ.ಆರ್ ಮತ್ತು ೨ ಪ್ರಕರಣ ರ‍್ಯಾಪಿಡ್ ಆಂಟಿಜೆನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.

ಜಿಲ್ಲೆಯಲ್ಲಿನ ಒಟ್ಟು ಕೋವಿಡ್-೧೯ ಪ್ರಕರಣಗಳ ಸಂಖ್ಯೆ ೨೪,೯೫೬ ಆಗಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ೩೧೯ ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು ೨೨,೪೮೩ ಮಂದಿ ಗುಣಮುಖರಾಗಿದ್ದಾರೆ. ೨೧೪೫ ಸಕ್ರಿಯ ಪ್ರಕರಣಗಳಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ೨ ಸಾವು ಉಂಟಾಗಿದ್ದು, ಒಟ್ಟು ೩೨೮ ಮರಣ ಪ್ರಕರಣಗಳು ವರದಿಯಾಗಿದೆ. ಕಂಟೈನ್ಮೆAಟ್ ವಲಯಗಳ ಸಂಖ್ಯೆ ೩೩೬ ಆಗಿದೆ. ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ಪ್ರಮಾಣ ಶೇ. ೧೬.೫೫ ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ತಿಳಿಸಿದ್ದಾರೆ.