ಕೂಡಿಗೆ, ಜೂ. ೩: ಸಮೀಪದ ಶಿರಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಟಾಸ್ಕ್ಫೋರ್ಸ್ ಸಮಿತಿ ಸಭೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಬಿ.ಹೆಚ್. ಭಾಗೀರತಿ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು.

ಸಭೆಯಲ್ಲಿ ಮುಖ್ಯವಾಗಿ ಕೊರೊನಾ ಸೋಂಕು ತಡೆಗಟ್ಟಲು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಸುರ್ದೀಘವಾಗಿ ಚರ್ಚೆಗಳು ನಡೆದವು. ಅಲ್ಲದೆ ಗ್ರಾಮ ವ್ಯಾಪ್ತಿಯ ಎಲ್ಲಾ ಗ್ರಾಮಸ್ಥರು ಕೊರೊನಾ ಲಸಿಕೆಯನ್ನು ಹಾಕಿಸಿಕೊಳ್ಳುವ ಬಗ್ಗೆ ತಿಳುವಳಿಕೆ ನೀಡಲು ನಿರ್ಧರಿಸಲಾಯಿತು.

ಸಭೆಯಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಧರ್ಮಪ್ಪ, ಶಿರಂಗಾಲ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಮಹಾಲಕ್ಷಿö್ಮ, ಅಭಿವೃದ್ಧಿ ಅಧಿಕಾರಿ ಹರೀಶ್, ಆರೋಗ್ಯ ಇಲಾಖೆಯ ಸಹಾಯಕರು, ದಾದಿಗಳು, ಆಶಾ ಕಾರ್ಯಕರ್ತೆರು, ಅಂಗನವಾಡಿ ಕಾರ್ಯಕರ್ತೆರು ಸೇರಿದಂತೆ ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗದವರು ಹಾಜರಿದ್ದರು.