ಭಾಗಮಂಡಲ, ಜೂ. ೨: ಭಾಗಮಂಡಲದ ಕಾವೇರಿ ಪದವಿಪೂರ್ವ ಕಾಲೇಜಿನಲ್ಲಿ ೩೩ ವರ್ಷಗಳ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಪ್ರಾಂಶುಪಾಲೆ ಜಾನಕಿ
ಮೋಹನ್ ಅವರಿಗೆ ಕಾಲೇಜಿನ ಆಡಳಿತ ಮಂಡಳಿ ವತಿಯಿಂದ ಬೀಳ್ಕೊಡಲಾಯಿತು. ಸಂಸ್ಥೆಯ ಅಧ್ಯಕ್ಷ ಹೊಸೂರು ಸತೀಶ್ ಕುಮಾರ್ ನಿವೃತ್ತಿ ಹೊಂದಿದ ಜಾನಕಿ ಮೋಹನ್ ಅವರನ್ನು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭ ವಿದ್ಯಾಸಂಸ್ಥೆಯ ಉಪಾಧ್ಯಕ್ಷ ಹ್ಯಾರೀಸ್, ಸದಸ್ಯರಾದ ಕುಯ್ಯಮುಡಿ ಮನೋಜ್, ರವಿ ಹೆಬ್ಬಾರ್ ಹಾಗೂ ಶಿಕ್ಷಕ ವೃಂದ ಇದ್ದರು.