ಕೂಡಿಗೆ, ಜೂ. ೨: ಕೂಡಿಗೆ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಸಿ. ರಾಜು ನಿವೃತ್ತಗೊಂಡ ಹಿನ್ನೆಲೆ ತಾಲೂಕು ಶಿಕ್ಷಕರ ಸಂಘದ ವತಿಯಿಂದ ಬೀಳ್ಕೊಡುಗೆ ನೀಡಲಾಯಿತು.

ಸೋಮವಾರಪೇಟೆ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಕೆ. ಪಾಂಡು ಸನ್ಮಾನಿಸಿ, ಬೀಳ್ಕೊಟ್ಟರು. ಈ ಸಂದರ್ಭ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸಹ ಕಾರ್ಯದರ್ಶಿ ಹೆಚ್.ಎಸ್. ಚೇತನ್, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಹೆಚ್.ಎನ್. ಮಂಜುನಾಥ್, ತಾಲೂಕು ಘಟಕದ ಅಧ್ಯಕ್ಷ ಟಿ.ಕೆ. ಬಸವರಾಜ್ ಸೇರಿದಂತೆ ಶಿಕ್ಷಕರ ಸಂಘದ ಪದಾಧಿಕಾರಿಗಳು ಶಾಲಾ ಶಿಕ್ಷಕರು ಇದ್ದರು.