
ಮಡಿಕೇರಿ, ಜೂ. ೩: ಕೊರೊನಾ ಹಿನ್ನೆಲೆಯಲ್ಲಿ ೧೨ನೇ ತರಗತಿ ಸಿಬಿಎಸ್ಇ ಹಾಗೂ ಐಸಿಎಸ್ಇ ಪರೀಕ್ಷೆಯನ್ನು ರದ್ದುಗೊಳಿಸಿ ಕೇಂದ್ರ ಸರ್ಕಾರ ನಿರ್ಧಾರ ಕೈಗೊಂಡಿದೆ. ಇದಕ್ಕೆ ಸಂಬAಧಿಸಿದAತೆ ಕೊಡಗಿನಲ್ಲಿ ಜವಾಹರ್ ನವೋದಯ ವಿದ್ಯಾಲಯ ಹಾಗೂ ಗೋಣಿಕೊಪ್ಪ ಕಾಲ್ಸ್ ವಿದ್ಯಾಸಂಸ್ಥೆಯಲ್ಲಿ ಮಾತ್ರ ಕೇಂದ್ರ ಪಠ್ಯ ಕ್ರಮದಡಿ ಪಿಯು ತರಗತಿಗಳು ನಡೆಯುತ್ತಿದ್ದು, ಈ ಎರಡೂ ವಿದ್ಯಾಸಂಸ್ಥೆಗಳ ೧೦೪ ವಿದ್ಯಾರ್ಥಿಗಳಿಗೆ ಈ ಬಾರಿ ಪರೀಕ್ಷೆ ಇಲ್ಲದಂತಾಗಿದೆ. ಇದರಿಂದ ಪರೀಕ್ಷೆಗಾಗಿ ಅಗತ್ಯ ತಯಾರಿಯಲ್ಲಿ ತೊಡಗಿದ್ದ ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಲೆಕ್ಕಾಚಾರ ತಲೆಕೆಳಗಾದಂತಾಗಿದೆ.
ನವೋದಯದಲ್ಲಿ ಪ್ರಸಕ್ತ ಸಾಲಿನಲ್ಲಿ ವಿಜ್ಞಾನ ವಿಭಾಗದಲ್ಲಿ ೩೯, ವೃತ್ತಿಪರ ವಿಷಯಗಳ ವಿಭಾಗದಲ್ಲಿ ೨೦ ಸೇರಿದಂತೆ ಒಟ್ಟು ೫೯ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಇವರುಗಳಿಗೆ ಪರೀಕ್ಷೆಯನ್ನು ಎದುರಿಸುವ ನಿಟ್ಟಿನಲ್ಲಿ ಆನ್ಲೈನ್ ತರಗತಿಗಳ ಮೂಲಕ ವಿಶೇಷ ತರಬೇತಿ ನೀಡುವುದರೊಂದಿಗೆ ಸಿದ್ಧತೆ ಕೈಗೊಳ್ಳಲಾಗಿತ್ತು. ಪ್ರಸ್ತುತ ನವೋದಯದಲ್ಲಿ ಕೋವಿಡ್ ಕೇರ್ ಸೆಂಟರ್ ಆರಂಭಿಸಿರುವುದರಿAದ ವಿದ್ಯಾರ್ಥಿಗಳನ್ನು ಅವರವರ ಮನೆಗಳಿಗೆ ಕಳುಹಿಸಿ ಆನ್ಲೈನ್ ಮೂಲಕ ತರಗತಿಗಳನ್ನು ನಡೆಸಲಾಗುತ್ತಿತ್ತು.
ಈ ಕುರಿತು ‘ಶಕ್ತಿ’ಯೊಂದಿಗೆ ಮಾತನಾಡಿದ ಜವಾಹರ್ ನವೋದಯ ವಿದ್ಯಾಲಯದ ಪ್ರಬಾರ ಪ್ರಾಂಶುಪಾಲ ಕೆ. ಗಂಗಾಧರನ್ ಅವರು, ಪರೀಕ್ಷೆಗೆ ವಿದ್ಯಾರ್ಥಿಗಳನ್ನು ತಯಾರು ಮಾಡುವ ನಿಟ್ಟಿನಲ್ಲಿ ಅಗತ್ಯವಾದ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿತ್ತು. ಆದರೆ ಇದೀಗ ಸರ್ಕಾರ ಪರೀಕ್ಷೆಯನ್ನು ರದ್ದು ಮಾಡಿದ್ದು, ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆಯುವ ನಿಟ್ಟಿನಲ್ಲಿ ಶ್ರಮಪಟ್ಟ ವಿದ್ಯಾರ್ಥಿಗಳಿಗೆ ಸರ್ಕಾರದ ಈ ನಿರ್ಧಾರ ಬೇಸರ ಮೂಡಿಸುವದಂತೂ ದಿಟ ಎಂದು ಅಭಿಪ್ರಾಯಿಸಿದ್ದಾರೆ. ಕೊರೊನಾ ಹಿನ್ನೆಲೆ ಪರೀಕ್ಷೆಗಳನ್ನು ಸ್ವಲ್ಪದಿನಗಳ ಮಟ್ಟಿಗೆ ಮುಂದೂಡಿದ್ದರೂ, ತೊಂದರೆ ಇರಲಿಲ್ಲ ಎಂದು ಅವರು ಅನಿಸಿಕೆ ವ್ಯಕ್ತಪಡಿಸಿದ್ದಾರೆ. ಪರೀಕ್ಷೆ ರದ್ದುಗೊಂಡ ಹಿನ್ನೆಲೆ ಮುಂದೆ ಅನುಸರಿಸಬೇಕಾದ ಕ್ರಮಗಳೇನು ಎಂಬ ಬಗ್ಗೆ ಸಿಬಿಎಸ್ಸಿಯಿಂದ ಆದೇಶ ಬಂದ ನಂತರ ಕಾರ್ಯಪ್ರವೃತ್ತರಾಗುವುದಾಗಿ ಗಂಗಾಧರನ್ ತಿಳಿಸಿದ್ದಾರೆ.
ಕ್ರಮವನ್ನು ಪಾಲಿಸಬೇಕಿದೆ
ಕೇಂದ್ರ ಸರ್ಕಾರ ಕೊರೊನಾ ಹಿನ್ನೆಲೆಯಲ್ಲಿ ಸಿಬಿಎಸ್ಇ ಹಾಗೂ ಐಸಿಎಸ್ಇ ೧೨ ನೇ ತರಗತಿ ಪರೀಕ್ಷೆಗಳನ್ನು ರದ್ದು ಮಾಡಿದ್ದು, ಪ್ರಸ್ತುತ ಕೇಂದ್ರ ಸರ್ಕಾರ ಕೈಗೊಂಡಿರುವ ಕ್ರಮಗಳನ್ನು ನಾವುಗಳು ಪಾಲಿಸಬೇಕಾಗಿದೆ ಎಂದು ಗೋಣಿಕೊಪ್ಪಲುವಿನ ಕಾಲ್ಸ್ ವಿದ್ಯಾಸಂಸ್ಥೆಯ ಪ್ರಾಂಶುಪಾಲರಾದ ಬಾಚೆಟ್ಟಿರ ಎಂ.ಗೌರಮ್ಮ ಅಭಿಪ್ರಾಯ ಹಂಚಿಕೊAಡಿದ್ದಾರೆ. ಪ್ರಸ್ತುತ ವರ್ಷದಲ್ಲಿ ೪೫ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಅರ್ಹರಾಗಿದ್ದರು. ಇದರಲ್ಲಿ ೩೦ ಬಾಲಕರು ಹಾಗೂ ೧೫ ಬಾಲಕಿಯರು ಇದ್ದು, ಐಸಿಎಸ್ಇ ನಲ್ಲಿ ವಿದ್ಯಾಭ್ಯಾಸವನ್ನು ಮುಂದುವರೆಸಿದ್ದರು.
ಕೊರೊನಾ ಹಿನ್ನೆಲೆಯಲ್ಲಿ ಸಂಸ್ಥೆಯ ವತಿಯಿಂದ ಕಳೆದ ಮೇ ತಿಂಗಳಿನಿAದಲೇ ಆನ್ ಲೈನ್ ತರಗತಿಯಲ್ಲಿ ಮಕ್ಕಳ ಪಾಲ್ಗೊಳ್ಳುವಿಕೆ ಬಗ್ಗೆ ಜಾಗ್ರತೆ ಮೂಡಿಸಲಾಗಿತ್ತು.ವಿದ್ಯಾರ್ಥಿಗಳು ಕೂಡ ಹಂತ ಹಂತವಾಗಿ ಆನ್ ಲೈನ್ ತರಗತಿಗೆ ಹೊಂದಾಣಿಕೆ ಆಗುತ್ತಿದ್ದರು. ಹೊಸ ವಿಧಾನ ಪಾಠಗಳಿಗೆ ವಿದ್ಯಾರ್ಥಿಗಳು ಸಹಜವಾಗಿಯೇ ಆಸಕ್ತಿಯನ್ನು ಹೊಂದಿದ್ದರು. ಈ ಹಿನ್ನೆಲೆಯಲ್ಲಿ ಗೂಗಲ್ ಕ್ಲಾಸ್ ರೂಂ ಆರಂಭಿಸಲಾಗಿತ್ತು.
ಶಿಕ್ಷಕರಿಗೆ ವಿಶೇಷ ತರಬೇತಿ ನೀಡುವ ಮೂಲಕ ಮಕ್ಕಳಲ್ಲಿ ಕಲಿಕಾ ಮಟ್ಟವನ್ನು ಹೆಚ್ಚಿಸಲಾಯಿತು. ವಿದ್ಯಾರ್ಥಿಗಳಿಗೆ ಪಠ್ಯಗಳನ್ನು ‘ರಿವಿಷನ್’ ಕೂಡ ಮಾಡಲಾಗಿತ್ತು. ವಿದ್ಯಾರ್ಥಿಗಳು ಕೂಡ ಪರೀಕ್ಷೆ ಬರೆಯುವ ನಿಟ್ಟಿನಲ್ಲಿ ಸನ್ನದ್ಧರಾಗಿದ್ದರು. ಇದೀಗ ಸರ್ಕಾರ ಪರೀಕ್ಷೆಯನ್ನು ರದ್ದುಗೊಳಿಸಿದ್ದು, ಸರ್ಕಾರದ ನಿಯಮವನ್ನು ಪಾಲಿಸಲಾಗುವುದೆಂದು ಗೌರಮ್ಮ ಹೇಳಿದರು.
-ಉಜ್ವಲ್/ ಜಗದೀಶ್
