ಸಿದ್ದಾಪುರ, ಜೂ. ೨: ಸಿದ್ದಾಪುರ ವ್ಯಾಪ್ತಿಯಲ್ಲಿ ಹಾಗೂ ಕರಡಿಗೋಡು ಗ್ರಾಮದಲ್ಲಿ ಉಪಟಳ ನೀಡುತ್ತ ಮಾನವನ ಮೇಲೆ ದಾಳಿ ನಡೆಸುತ್ತಿ ರುವ ಒಂಟಿ ಸಲಗವೊಂದನ್ನು ಸೆರೆ ಹಿಡಿಯಲು ಅರಣ್ಯ ಇಲಾಖಾಧಿಕಾರಿ ಗಳು ಸರ್ಕಾರಕ್ಕೆ ಪ್ರಸ್ತಾವನೆ ಕಳಿಸಿದ್ದಾರೆ. ಸಿದ್ದಾಪುರ ಹಾಗೂ ಕರಡಿಗೋಡು ಭಾಗದ ಕಾಫಿ ತೋಟಗಳಲ್ಲಿ ಬೀಡು ಬಿಟ್ಟಿರುವ ಈ ಸಲಗ ಮಾನವನ ಮೇಲೆ ದಾಳಿ ನಡೆಸುತ್ತಿದೆ.