ಕರಿಕೆ, ಜೂ. ೨: ಇಲ್ಲಿನ ಗ್ರಾಮ ಪಂಚಾಯಿತಿಯ ಗ್ರಾಮಮಟ್ಟದ ಕೋವಿಡ್-೧೯ ಕಾರ್ಯಪಡೆಯ ಜನಜಾಗೃತಿ ಸಭೆ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಶಾಸಕ ಕೆ.ಜಿ. ಬೋಪಯ್ಯ ಅಧ್ಯಕ್ಷತೆಯಲ್ಲಿ ನಡೆಯಿತು.

ಮಡಿಕೇರಿ ತಾಲೂಕು ಕಾರ್ಯನಿರ್ವಹಣಾಧಿಕಾರಿ ಶೇಖರ್, ತಹಶೀಲ್ದಾರ್ ಮಹೇಶ್, ಪೊಲೀಸ್ ಇಲಾಖೆ, ಕಂದಾಯ ಇಲಾಖೆ, ಆರೋಗ್ಯ ಇಲಾಖೆ, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಕರಿಕೆ ಗ್ರಾಮ ಪಂಚಾಯಿತಿ ಮಟ್ಟದ ಟಾಸ್ಕ್ಫೋರ್ಸ್ ಸದಸ್ಯರು, ಪಂಚಾಯಿತಿ ಸಿಬ್ಬಂದಿಗಳು ಉಪಸ್ಥಿತರಿದ್ದರು.