ಕೆಎಸ್ಆರ್ಟಿಸಿ ವಿವಾದ: ತೀರ್ಪಿನ ಪ್ರತಿ ಕೈ ಸೇರಿದ ಬಳಿಕ ಮುಂದಿನ ಹೋರಾಟ
ಬೆಂಗಳೂರು, ಜೂ. ೩: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಕೆಎಸ್ಆರ್ಟಿಸಿ ಪದ ಬಳಕೆ ವಿವಾದಕ್ಕೆ ಸಂಬAಧಿಸಿದAತೆ ಕೋರ್ಟ್ ತೀರ್ಪಿನ ಪ್ರತಿ ಕೈ ಸೇರಿದ ಬಳಿಕ ಮುಂದಿನ ಕಾನೂನು ಹೋರಾಟದ ಕುರಿತು ನಿರ್ಧರಿಸಲಾಗುತ್ತದೆ ಎಂದು ರಾಜ್ಯ ಉಪ ಮುಖ್ಯಮಂತ್ರಿ ಮತ್ತು ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಹೇಳಿದ್ದಾರೆ. ತೀರ್ಪಿನ ಬಳಿಕ ಇದೇ ಮೊದಲ ಬಾರಿಗೆ ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಲಕ್ಷö್ಮಣ್ ಸವದಿ ಅವರು, ಕೇರಳವು ಕೆಎಸ್ಆರ್ಟಿಸಿ ಎಂಬ ಪದವನ್ನು ತಾವೇ ಮೊದಲು ಬಳಸಿದ್ದರಿಂದ ಕರ್ನಾಟಕ ಈ ಪದವನ್ನು ಬಳಸಬಾರದು ಎಂದು ತಕರಾರು ತೆಗೆದ ಬಗ್ಗೆ ಈಗ ಟ್ರೇಡ್ ಮಾರ್ಕ್ ರಿಜಿಸ್ಟಿçಯು ತೀರ್ಪು ನೀಡಿದೆ. ಈ ತೀರ್ಪಿನಲ್ಲಿ ಏನಿದೆ ಎಂಬ ಅಂಶ ಅಧಿಕೃತವಾಗಿ ಇನ್ನೂ ಬಂದಿಲ್ಲ. ಅದು ಲಭ್ಯವಾದ ಬಳಿಕ ರಾಜ್ಯದ ಮುಂದಿನ ನಿಲುವು ಮತ್ತು ಕಾನೂನು ಹೋರಾಟದ ಬಗ್ಗೆ ತೀರ್ಮಾನಿಸಲಾಗುವುದು ಎಂದು ಹೇಳಿದ್ದಾರೆ. ಅಂತೆಯೇ ನಮ್ಮದು ಒಕ್ಕೂಟ ವ್ಯವಸ್ಥೆ. ಒಂದು ರಾಜ್ಯವು ಮತ್ತೊಂದು ರಾಜ್ಯದ ಜೊತೆಗೆ ಯಾವುದೇ ಸಂಘರ್ಷವಿಲ್ಲದೆ ಸೌಹಾರ್ದಯುತವಾಗಿ ಸಂಬAಧ ಇಟ್ಟುಕೊಂಡು ಹೋಗಬೇಕೆಂದು ಈ ಒಕ್ಕೂಟ ವ್ಯವಸ್ಥೆ ಹೇಳುತ್ತದೆ. ಆದರೆ, ದುರದೃಷ್ಟವಶಾತ್ ಈ ವಿವಾದ ಅನಗತ್ಯವಾಗಿ ಎದ್ದಿದೆ. ಖಾಸಗಿ ಸಂಸ್ಥೆಗಳಲ್ಲಾದರೆ ಈ ರೀತಿಯ ಹೆಸರು ಅಥವಾ ಟ್ರೇಡ್ ಮಾರ್ಕ್ಗಳಿಂದ ವ್ಯವಹಾರ ಮತ್ತು ಲಾಭಗಳ ಮೇಲೆ ಪ್ರಭಾವ ಬೀಳುತ್ತದೆ. ಆದರೆ, ಸರ್ಕಾರಿ ಸಂಸ್ಥೆಗಳು ಹಾಗಲ್ಲ. ಇಲ್ಲಿ ಜನರ ಸೇವೆ ಮುಖ್ಯ. ಕರ್ನಾಟಕವಾಗಲಿ, ಕೇರಳವಾಗಲಿ ಪರಸ್ಪರ ಸಾರಿಗೆ ಕ್ಷೇತ್ರದಲ್ಲಿ ಲಾಭ ಗಳಿಸುವ ಮೇಲಾಟಕ್ಕೆ ಅಥವಾ ಸ್ಪರ್ಧೆಗೆ ಮುಂದಾಗದೆ ಸಾರ್ವಜನಿಕರ ಹಿತಾಸಕ್ತಿ ಮತ್ತು ಸೇವೆ ಗಮನದಲ್ಲಿ ಇಟ್ಟುಕೊಂಡು ಕೆಲಸ ಮಾಡುತ್ತಿವೆ. ಹೀಗಾಗಿ ಈ ವಿಷಯವನ್ನು ಯಾವುದೇ ರಾಜ್ಯಗಳು ಪ್ರತಿಷ್ಠೆಯ ವಿಷಯವಾಗಿ ಮಾಡಿಕೊಳ್ಳಬಾರದು. ಇದರಿಂದ ಕೇರಳ ರಾಜ್ಯಕ್ಕೆ ಸಂಭ್ರಮಪಡುವAತಹ ವಿಚಾರವೇನೂ ಅಲ್ಲ. ಕರ್ನಾಟಕದಲ್ಲಿ ಕೆಎಸ್ಆರ್ಟಿಸಿ ಎಂಬ ಹೆಸರಿದ್ದರೆ ಅದರಿಂದ ಕೇರಳದ ಕೆಎಸ್ಆರ್ಟಿಸಿ ಸಂಸ್ಥೆಗೆ ಯಾವುದೇ ನಷ್ಟ ಇಲ್ಲ. ಕರ್ನಾಟಕವು ಕೇರಳದ ಸಾರಿಗೆ ಸಂಸ್ಥೆಗಳೊAದಿಗೆ ಎಂದೂ ಪೈಪೋಟಿಗೆ ಇಳಿದಿದ್ದಿಲ್ಲ ಎಂಬುದನ್ನು ಕೇರಳ ಮೊದಲು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ. ಅಂತೆಯೇ ಇಂಥ ವಿಷಯಗಳಲ್ಲಿ ಅನಗತ್ಯವಾಗಿ ವಿವಾದಗಳನ್ನು ಹೆಚ್ಚು ಮಾಡುತ್ತಾ ಪರಸ್ಪರ ರಾಜ್ಯಗಳಲ್ಲಿ ವಿವಾದಗಳನ್ನು ಬೆಳೆಸುವ ಪರಿಪಾಠಕ್ಕೆ ನಾವೆಲ್ಲರೂ ಅಂತ್ಯ ಹಾಡಬೇಕು. ದೇಶದ ಹಿತದೃಷ್ಟಿಯಿಂದ ರಾಜ್ಯ-ರಾಜ್ಯಗಳ ನಡುವಿನ ಬಾಂಧವ್ಯವನ್ನು ಉತ್ತಮವಾಗಿ ಇಟ್ಟುಕೊಳ್ಳುವುದು ಬಹಳ ಮುಖ್ಯ ಎಂದು ಸವದಿ ಅಭಿಪ್ರಾಯಪಟ್ಟಿದ್ದಾರೆ.
ಚಿತ್ರದುರ್ಗ; ತಡರಾತ್ರಿ ಅಬ್ಬರಿಸಿದ ಮುಂಗಾರು ಮಳೆ
ಚಿತ್ರದುರ್ಗ, ಜೂ. ೩: ಜಿಲ್ಲೆಯ ವಿವಿಧ ತಾಲೂಕಿನ ಹಳ್ಳಿಗಳಲ್ಲಿ ಗುಡುಗು, ಸಿಡಿಲು ಸಹಿತ ಮಳೆಯಾಗಿದೆ. ತಡರಾತ್ರಿ ಸುರಿದ ಮಳೆಗೆ ಅಲ್ಲಲ್ಲಿ ಹಳ್ಳಕೊಳ್ಳ, ಚೆಕ್ ಡ್ಯಾಂ, ಕೃಷಿ ಹೊಂಡ ತುಂಬಿ ಹರಿಯುತ್ತಿವೆ. ಚಳ್ಳಕೆರೆ ತಾಲೂಕಿನ ರೆಡ್ಡಿಹಳ್ಳಿ, ರೇಖಲಗೆರೆ, ತಳುಕು, ಎನ್. ದೇವರಹಳ್ಳಿ ಸೇರಿದಂತೆ ಮತ್ತಿತರ ಕಡೆಗಳಲ್ಲಿ ಉತ್ತಮ ಮಳೆಯಾಗಿದೆ ಎಂದು ತಿಳಿದು ಬಂದಿದೆ. ಹಿರಿಯೂರು ತಾಲೂಕಿನ ಬಹುತೇಕ ಹಳ್ಳಿಗಳಲ್ಲಿ ಮಳೆಯಾಗಿದೆ. ಮಸ್ಕಲ್, ವಿ.ವಿ. ಪುರ, ಬಾಲೆನಹಳ್ಳಿ, ಇಕ್ಕನೂರು ಮತ್ತಿತರ ಹಳ್ಳಿಗಳಲ್ಲಿ ಮಳೆ ಬಿದ್ದಿದೆ. ಹಿರಿಯೂರು ೧೩.೮ ಮಿ.ಮೀ., ಬಬ್ಬೂರು ೧೩.೦, ಇಕ್ಕನೂರು ೧೩.೬, ಈಶ್ವರಗೆರೆ ೧೪.೨ ಮಿ.ಮೀ. ಮಳೆಯಾಗಿದೆ. ತಾಲೂಕಿನ ಆಯ್ದ ಭಾಗಗಳಾದ ಐಮಂಗಲ, ಮಸ್ಕಲ್, ಹರ್ತಿಕೊಟೆ, ಕೊವೆರಹಟ್ಟಿ, ಕಲ್ಲಹಟ್ಟಿ, ಬುರುಜಿನರೊಪ್ಪ ಹಾಗೂ ಧರ್ಮಪುರ ಹಾಗೂ ಜೆಜಿ ಹಳ್ಳಿ ಹೋಬಳಿಯ ಕೆಲವು ಭಾಗಗಳಲ್ಲಿ ಈರುಳ್ಳಿ ಬಿತ್ತನೆ ಮಾಡಲಾಗಿದೆ. ಚಿತ್ರದುರ್ಗ ತಾಲೂಕಿನ ಭರಮಸಾಗರ ಹೋಬಳಿಯ ಹುಲ್ಲೇನಾಳ್ ಗ್ರಾಮದ ಮಂಜಪ್ಪ ಎನ್ನುವ ರೈತನ ಈರುಳ್ಳಿ ಬೆಳೆ ಮಳೆ ಬಂದ ಹಿನ್ನೆಲೆಯಲ್ಲಿ ಕೊಚ್ಚಿ ಹೋಗಿದೆ. ಅಕ್ಕಪಕ್ಕದ ಸರ್ಕಾರಿ ಹಳ್ಳವನ್ನು ಒತ್ತುವರಿ ಮಾಡಿದ್ದು ಇದರ ಸಲುವಾಗಿ ಹಳ್ಳಕ್ಕೆ ಹರಿದು ಹೋಗಬೇಕಾಗಿದ್ದ ನೀರು ಮಂಜಪ್ಪನ ಜಮೀನಿಗೆ ನುಗ್ಗಿ ಬೆಳೆ ನಾಶವಾಗಿದೆ. ಹಳ್ಳದ ನೀರು ಹೊಲಕ್ಕೆ ನುಗ್ಗಿದ ಕಾರಣ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಬೆಳೆಯುತ್ತಿರುವ ಈರುಳ್ಳಿ ಹಾನಿಯಾಗಿ ನಷ್ಟ ಸಂಭವಿಸಿದೆ. ಅಕ್ಕಪಕ್ಕದವರು ಒತ್ತುವರಿ ಮಾಡಿದ್ದ ಜಮೀನನ್ನು ತೆರವು ಮಾಡಿಸಿ ಕೊಡುವೆಂತೆ ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರ್ಗೆ ದೂರು ಸಲ್ಲಿಸಲಾಗಿತ್ತು. ಆದರೆ ಯಾವುದೇ ಪ್ರಯೋಜನವಾಗಿಲ್ಲ ಎಂದು ಮಂಜಪ್ಪ ಅಸಹಾಯಕತೆ ವ್ಯಕ್ತಪಡಿಸಿದರು. ಒಟ್ಟಾರೆಯಾಗಿ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಉತ್ತಮ ಮಳೆಯಾಗಿದ್ದು, ಕೊರೊನಾ ಮಧ್ಯೆ ಬಿಸಿಲಿನಿಂದ ಬಸವಳಿದಿದ್ದ ಬರದನಾಡಿನ ಜನತೆಗೆ ವರುಣ ದೇವ ತಂಪೆರೆದಿದ್ದಾನೆ. ಮಳೆಯ ಅಬ್ಬರಕ್ಕೆ ಅನ್ನದಾತರ ಮೊಗದಲ್ಲಿ ಮಂದಹಾಸ ಮೂಡಿದ್ದು, ಜಿಲ್ಲೆಯ ಹಲವೆಡೆ ಕೃಷಿ ಚಟುವಟಿಕೆ ಗರಿಗೆದರಿದೆ.
ಮೃತ ಉದ್ಯೋಗಿಗಳ ಕುಟುಂಬಕ್ಕೆ ನೆರವಿನ ಹಸ್ತ ಚಾಚಿದ ರಿಲಯನ್ಸ್
ಮುಂಬೈ, ಜೂ. ೩: ಕೋವಿಡ್ ಹೋರಾಟದಲ್ಲಿ ಜೀವ ಕಳೆದುಕೊಂಡ ತನ್ನ ಉದ್ಯೋಗಿಗಳ ಕುಟುಂಬದವರಿಗೆ ನೆರವಿನ ಹಸ್ತ ಚಾಚುವ ಸಲುವಾಗಿ ರಿಲಯನ್ಸ್ ಇಂಡಸ್ಟಿçÃಸ್ (ಆರ್ಐಎಲ್), ಮುಂದಿನ ಐದು ವರ್ಷಗಳವರೆಗೆ ಅವರ ಕೊನೆಯ ವೇತನ ಪ್ರಮಾಣದ ಮೊತ್ತವನ್ನು ನೀಡುವ ಹಾಗೂ ಅವರ ಮಕ್ಕಳಿಗೆ ಕಾಲೇಜು ಪದವಿ ಪೂರೈಸುವವರೆಗೂ ಶಿಕ್ಷಣಕ್ಕೆ ನೆರವು ನೀಡುವ ಮಹತ್ಕಾರ್ಯ ನಡೆಸುತ್ತಿದೆ. ಕೋವಿಡ್ಗೆ ಬಲಿಯಾದ ತನ್ನ ಉದ್ಯೋಗಿಗಳ ಮಕ್ಕಳು ಭಾರತದ ಯಾವುದೇ ಶಿಕ್ಷಣ ಸಂಸ್ಥೆಯಿAದ ಪದವಿ ಶಿಕ್ಷಣ ಪೂರೈಸುವವರೆಗೂ ಅವರ ಟ್ಯೂಷನ್, ಪುಸ್ತಕ ಮತ್ತು ಹಾಸ್ಟೆಲ್ ವಸತಿ ವೆಚ್ಚಗಳನ್ನು ರಿಲಯನ್ಸ್ ಭರಿಸಲಿದೆ. ಮೃತಪಟ್ಟ ರೋಗಿಗಳ ಸಂಗಾತಿ, ಪೋಷಕರು ಮತ್ತು ಮಕ್ಕಳ ಪದವಿ ಪೂರೈಸುವವರೆಗಿನ ಅವಧಿಯವರೆಗೆ ಆಸ್ಪತ್ರೆ ದಾಖಲೀಕರಣದ ಮೇಲೆ ಶೇ. ೧೦೦ರಷ್ಟು ವಿಮೆ ಪ್ರೀಮಿಯಂಅನ್ನು ಹೆಚ್ಚುವರಿಯಾಗಿ ತುಂಬಲಿದೆ. ಇದಲ್ಲದೆ, ಕೋವಿಡ್-೧೯ರಿಂದ ಬಳಲುತ್ತಿರುವ ಉದ್ಯೋಗಿ ಅಥವಾ ಕುಟುಂಬದ ಸದಸ್ಯರ ಆರೈಕೆಗಾಗಿ ತೆರಳಬೇಕಿರುವ ಉದ್ಯೋಗಿಯು ಅವರು ಮಾನಸಿಕ ಹಾಗೂ ದೈಹಿಕವಾಗಿ ಸಂಪೂರ್ಣ ಚೇತರಿಸಿಕೊಳ್ಳುವವರೆಗಿನ ಪೂರ್ಣಾವಧಿಯವರೆಗೂ ವಿಶೇಷ ರಜೆಯನ್ನು ನೀಡಲಾಗುತ್ತದೆ. ತನ್ನ ಆಫ್-ರೋಲ್ ಕೆಲಸಗಾರರಿಗೆ ಕುಟುಂಬ ನೆರವು ಹಾಗೂ ಕಲ್ಯಾಣ ಕಾರ್ಯಕ್ರಮಗಳನ್ನು ಕೂಡ ರಿಲಯನ್ಸ್ ಪ್ರಕಟಿಸಿದೆ. ಆರ್ಐಎಲ್ನ ಆಫ್-ರೋಲ್ ಕಾರ್ಯಪಡೆಯ ಯಾವುದೇ ಸದಸ್ಯ ಮೃತಪಟ್ಟರೆ ಅವರ ನಾಮಿನಿಗೆ ರೂ. ೧೦ ಲಕ್ಷ ಮೊತ್ತ ನೀಡಲಾಗುತ್ತದೆ. ತನ್ನ ಎಲ್ಲ ಉದ್ಯೋಗಿಗಳು ಹಾಗೂ ಅವರ ಕುಟುಂಬದವರಿಗೂ ಲಸಿಕೆಗಳನ್ನು ನೀಡಲು ರಿಲಯನ್ಸ್ ಮುಂದಾಗಿದೆ.
ಕನ್ನಡದ ಮತ್ತೊಬ್ಬ ಹಿರಿಯ ನಟಿ ನಿಧನ
ಬೆಂಗಳೂರು, ಜೂ. ೩: ಸ್ಯಾಂಡಲ್ವುಡ್ ಇಂಡಸ್ಟಿç ಮತ್ತೊಬ್ಬ ಕಲಾವಿದೆಯನ್ನು ಕಳೆದುಕೊಂಡಿದೆ. ಕನ್ನಡ ಚಿತ್ರರಂಗದಲ್ಲಿ ಹಲವು ವರ್ಷಗಳಿಂದ ಸಕ್ರಿಯರಾಗಿದ್ದ ಬಿ. ಜಯಾ ಅವರು ಗುರುವಾರ ಮಧ್ಯಾಹ್ನ ನಿಧನರಾದರು ಎಂದು ತಿಳಿದು ಬಂದಿದೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ೭೫ ವರ್ಷದ ಬಿ. ಜಯಾ ಕರುಣಾಶ್ರಯ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಎಂಬ ವಿಚಾರ ಹೊರಬಿದ್ದಿದೆ. ಬಿ. ಜಯಾ ಅವರು ಕಳೆದ ಆರು ದಶಕಗಳಿಂದ ಚಿತ್ರರಂಗದಲ್ಲಿ ತೊಡಗಿಕೊಂಡಿದ್ದರು. ಸುಮಾರು ೩೦೦ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದರು. ಹೆಚ್ಚಾಗಿ ಹಾಸ್ಯ ಪಾತ್ರಗಳಲ್ಲಿ ಖ್ಯಾತಿಗಳಿಸಿದ್ದರು. ೧೯೫೮ರಲ್ಲಿ ಮೂಡಿ ಬಂದಿದ್ದ 'ಭಕ್ತ ಪ್ರಹ್ಲಾದ' ಚಿತ್ರದಲ್ಲಿ ಬಿ. ಜಯಾ ಚೊಚ್ಚಲ ಬಾರಿಗೆ ನಟಿಸಿದರು. ಅಲ್ಲಿಂದ ಡಾ. ರಾಜ್ ಕುಮಾರ್, ಅಂಬರೀಶ್, ವಿಷ್ಣುವರ್ಧನ್, ಉದಯ್ ಕುಮಾರ್, ಕಲ್ಯಾಣ್ ಸೇರಿದಂತೆ ಇಂದಿನ ನಟರ ಸಿನಿಮಾಗಳಲ್ಲಿಯೂ ಅಭಿನಯಿಸಿದ್ದಾರೆ. ಪ್ರಮುಖ ಹಾಸ್ಯಕಲಾವಿದೆಯಾಗಿ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ನರಸಿಂಹ ರಾಜು, ದ್ವಾರಕೀಶ್, ಬಾಲಕೃಷ್ಣ ಅಂತಹ ಮೇರು ಕಲಾವಿದರು ಜೊತೆ ಸಹನಟಿಯಾಗಿ ಕಾಣಿಸಿಕೊಂಡಿದ್ದರು.