ಸೋಮವಾರಪೇಟೆ, ಜೂ. ೨: ಕೊರೊನಾ ವೈರಸ್ ವಿರುದ್ಧ ಲಭ್ಯವಿರುವ ಲಸಿಕೆಗಳ ಬಗ್ಗೆ ಜನ ಸಾಮಾನ್ಯರಲ್ಲಿ ಜಾಗೃತಿ ಮೂಡಿಸಲು ಸ್ಥಳೀಯ ಆಡಳಿತಗಳು ಮುಂದಾಗಬೇಕೆAದು ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಕರೆ ನೀಡಿದರು.
ಕಳೆದ ೪ ದಿನಗಳಿಂದ ಕ್ಷೇತ್ರದಾದ್ಯಂತ ಗ್ರಾ.ಪಂ. ಭೇಟಿ ಮಾಡಿ ಸ್ಥಳೀಯ ಟಾಸ್ಕ್ ಫೋರ್ಸ್ ಸಮಿತಿ ಸಭೆಗಳಲ್ಲಿ ಭಾಗಿಯಾಗುತ್ತಿರುವ ಶಾಸಕರು ಬುಧವಾರದಂದು ಕೊಡ್ಲಿಪೇಟೆ, ದೊಡ್ಡಮಳ್ತೆ, ಗೌಡಳ್ಳಿ, ಶನಿವಾರಸಂತೆ, ದುಂಡಳ್ಳಿ, ಬ್ಯಾಡಗೊಟ್ಟ, ಬೆಸೂರು, ಹಂಡ್ಲಿ, ನಿಡ್ತ, ಆಲೂರುಸಿದ್ದಾಪುರ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಕೊರೊನಾ ಸಂಬAಧಿತ ಸುಧಾರಣಾ ಸದಸ್ಯರುಗಳು ಸ್ವತಃ ಕೋವಿಡ್ ಲಸಿಕೆ ಪಡೆದುಕೊಂಡು ಲಸಿಕೆ ಕುರಿತು ಜನರಲ್ಲಿ ಜಾಗೃತಿ ಮೂಡಿಸಬೇಕು. ೪೫ ವಷÀð ಒಳಗಿರುವ ಗ್ರಾಮ ಪಂಚಾಯತ್ ಸದಸ್ಯರುಗಳಿಗೂ ಲಸಿಕೆ ನೀಡಲು ಆರೋಗ್ಯ ಇಲಾಖಾಧಿಕಾರಿ ಗಳಿಗೆ ಸೂಚಿಸುವುದಾಗಿ ತಿಳಿಸಿದರು.
ಸಭೆಯಲ್ಲಿದ್ದ ಸೋಮವಾರಪೇಟೆ ತಹಶೀಲ್ದಾರ್ ಗೋವಿಂದರಾಜು ಮಾತನಾಡಿ, ಮೂರನೆ ಅಲೆ ಪರಿಣಾಮಕಾರಿಯಾಗಿರುವುದರಿಂದ ರಾಜ್ಯ ಸರ್ಕಾರದ ನಿರ್ದೇಶನದಂತೆ ‘ವ್ಯೆದ್ಯರ ನಡೆ ಹಳ್ಳಿಯ ಕಡೆ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಆರೋಗ್ಯ ಇಲಾಖೆಯ ನೌಕರರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಶಿಕ್ಷಕಿಯರು ಮನೆ ಮನೆಗೆ ತೆರಳಿ ಕಾರ್ಯನಿರ್ವ ಹಿಸಲಿದ್ದು, ಇವರೊಂದಿಗೆ ಗ್ರಾಮ ಪಂಚಾಯತ್ ಕಾರ್ಯಪಡೆ ಸದಸ್ಯರುಗಳು ಕೈ ಜೋಡಿಸಬೇಕೆಂದು ಮನವಿ ಮಾಡಿದರು.
ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಜಯಣ್ಣ ಮಾತನಾಡಿ, ತಮ್ಮ ಗ್ರಾಮ ಪಂಚಾಯತ್ನ್ನು ಕೊರೊನಾ ಮುಕ್ತವಾಗಲು ಅಗತ್ಯ ಮುಂಜಾಗ್ರತೆ ವಹಿಸುವಂತೆ ಸೂಚಿಸಿದರು. ತಾಲೂಕು ಕೋವಿಡ್ ನೋಡಲ್ ಅಧಿಕಾರಿ ಬಾಲಕೃಷ್ಣ ರೈ, ವೈದ್ಯಾಧಿಕಾರಿ ಡಾ.ಇಂದೂಧರ್ ಅವರುಗಳು ಮಾಹಿತಿ ಒದಗಿಸಿದರು.
ನಂತರ ಬ್ಯಾಡಗೊಟ್ಟ ಸರಕಾರಿ ಪ್ರಾಥಮಿಕ ಶಾಲೆಯ ಸಭಾಂಗಣ ಹಾಗೂ ಬೆಸೂರು ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಭೆಯಲ್ಲಿ ಶಾಸಕರು ಭಾಗವಹಿಸಿದ್ದರು. ಸಭೆಯಲ್ಲಿ ಶನಿವಾರಸಂತೆ ಠಾಣಾಧಿಕಾರಿ ದೇವರಾಜ್, ಕೊಡ್ಲಿಪೇಟೆ ಉಪತಹಶೀಲ್ದಾರ್ ಪುರುಷೋತ್ತಮ, ಕಂದಾಯ ಅಧಿಕಾರಿ ಮನುಕುಮಾರ್, ಗ್ರಾಮ ಲೆಕ್ಕಾಧಿಕಾರಿಗಳಾದ ಚೈತ್ರ, ಪ್ರಕೃತಿ, ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು, ಗ್ರಾಮ ಪಂಚಾಯತ್ ಕೋವಿಡ್ ಟಾಸ್ಕ್ ಫೋರ್ಸ್ ಸಮಿತಿ ಸದಸ್ಯರು ಉಪಸ್ಥಿತರಿದ್ದರು.ಪಂಚಾಯತ್ ಕಾರ್ಯಪಡೆ ಸದಸ್ಯರುಗಳು ಕೈ ಜೋಡಿಸಬೇಕೆಂದು ಮನವಿ ಮಾಡಿದರು.
ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಜಯಣ್ಣ ಮಾತನಾಡಿ, ತಮ್ಮ ಗ್ರಾಮ ಪಂಚಾಯತ್ನ್ನು ಕೊರೊನಾ ಮುಕ್ತವಾಗಲು ಅಗತ್ಯ ಮುಂಜಾಗ್ರತೆ ವಹಿಸುವಂತೆ ಸೂಚಿಸಿದರು. ತಾಲೂಕು ಕೋವಿಡ್ ನೋಡಲ್ ಅಧಿಕಾರಿ ಬಾಲಕೃಷ್ಣ ರೈ, ವೈದ್ಯಾಧಿಕಾರಿ ಡಾ.ಇಂದೂಧರ್ ಅವರುಗಳು ಮಾಹಿತಿ ಒದಗಿಸಿದರು.
ನಂತರ ಬ್ಯಾಡಗೊಟ್ಟ ಸರಕಾರಿ ಪ್ರಾಥಮಿಕ ಶಾಲೆಯ ಸಭಾಂಗಣ ಹಾಗೂ ಬೆಸೂರು ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಭೆಯಲ್ಲಿ ಶಾಸಕರು ಭಾಗವಹಿಸಿದ್ದರು. ಸಭೆಯಲ್ಲಿ ಶನಿವಾರಸಂತೆ ಠಾಣಾಧಿಕಾರಿ ದೇವರಾಜ್, ಕೊಡ್ಲಿಪೇಟೆ ಉಪತಹಶೀಲ್ದಾರ್ ಪುರುಷೋತ್ತಮ, ಕಂದಾಯ ಅಧಿಕಾರಿ ಮನುಕುಮಾರ್, ಗ್ರಾಮ ಲೆಕ್ಕಾಧಿಕಾರಿಗಳಾದ ಚೈತ್ರ, ಪ್ರಕೃತಿ, ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು, ಗ್ರಾಮ ಪಂಚಾಯತ್ ಕೋವಿಡ್ ಟಾಸ್ಕ್ ಫೋರ್ಸ್ ಸಮಿತಿ ಸದಸ್ಯರು ಉಪಸ್ಥಿತರಿದ್ದರು.