ಮಡಿಕೇರಿ, ಜೂ. ೩ : ಜಿಲ್ಲೆಯಲ್ಲಿ ಗುರವಾರ ಬೆಳಗ್ಗೆ ೧೧ ಗಂಟೆ ವೇಳೆಗೆ ೩೧೬ ಹೊಸ ಕೋವಿಡ್-೧೯ ಪ್ರಕರಣಗಳು ದೃಢಪಟ್ಟಿದೆ. ೨೮೧ ಆರ್.ಟಿ.ಪಿ.ಸಿ.ಆರ್ ಮತ್ತು ೩೫ ಪ್ರಕರಣಗಳು ರ‍್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.

ಮಡಿಕೇರಿ ತಾಲೂಕಿನಲ್ಲಿ ೫೧ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬAದಿದೆ. ಈ ಪೈಕಿ ೫೧ ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.

ಸೋಮವಾರಪೇಟೆ ತಾಲೂಕಿನಲ್ಲಿ ೧೮೧ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬAದಿದೆ. ಈ ಪೈಕಿ ೧೫೧ ಆರ್.ಟಿ.ಪಿ.ಸಿ.ಆರ್ ಮತ್ತು ೩೦ ಪ್ರಕರಣಗಳು ರ‍್ಯಾಪಿಡ್ ಆಂಟಿಜೆನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.

ವೀರಾಜಪೇಟೆ ತಾಲೂಕಿನಲ್ಲಿ ೮೪ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬAದಿದೆ. ಈ ಪೈಕಿ ೭೯ ಆರ್.ಟಿ.ಪಿ.ಸಿ.ಆರ್ ಮತ್ತು ೫ ಪ್ರಕರಣ ರ‍್ಯಾಪಿಡ್ ಆಂಟಿಜೆನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.

ಜಿಲ್ಲೆಯಲ್ಲಿನ ಒಟ್ಟು ಕೋವಿಡ್-೧೯ ಪ್ರಕರಣಗಳ ಸಂಖ್ಯೆ ೨೫,೨೭೨ ಆಗಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ೧೧೬ ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು ೨೨,೪೮೩ ಮಂದಿ ಗುಣಮುಖರಾಗಿದ್ದಾರೆ. ೨೪೫೯ ಸಕ್ರಿಯ ಪ್ರಕರಣಗಳಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ೨ ಸಾವು ಉಂಟಾಗಿದ್ದು, ಒಟ್ಟು ೩೩೦ ಮರಣ ಪ್ರಕರಣಗಳು ವರದಿಯಾಗಿದೆ. ಕಂಟೈನ್ಮೆAಟ್ ವಲಯಗಳ ಸಂಖ್ಯೆ ೩೨೦ ಆಗಿದೆ. ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ಪ್ರಮಾಣ ಶೇ.೨೦.೮೯ ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ತಿಳಿಸಿದ್ದಾರೆ.