ಚೆಯ್ಯಂಡಾಣೆ, ಜೂ. ೪: ನರಿಯಂದಡ ಗ್ರಾಮ ಪಂಚಾಯಿತಿ ವತಿಯಿಂದ ಸ್ಥಳೀಯ ಮಹಿಳಾ ಸಮಾಜದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿದ್ದಂಡ ರಾಜೇಶ್ ಅಚ್ಚಯ್ಯ ಅಧ್ಯಕ್ಷತೆಯಲ್ಲಿ ಸ್ಥಳೀಯ ವರ್ತಕರ ಹಾಗೂ ವಾಹನ ಚಾಲಕರ ಹಾಗೂ ಮಾಲೀಕರ ಕಟ್ಟಡ ಕಾರ್ಮಿಕರು ಮತ್ತು ಬ್ಯಾಂಕ್ ಉದ್ಯೋಗಿಗಳ ಸಂಯುಕ್ತ ಸಭೆಯನ್ನು ಆಯೋಜಿಸಲಾಯಿತು. ಸಭೆಯಲ್ಲಿ ವರ್ತಕರು, ಗ್ರಾಹಕರು, ವಾಹನಗಳ ಚಾಲಕರು ಹಾಗೂ ಪ್ರಯಾಣಿಕರು, ಕಟ್ಟಡ ಕಾರ್ಮಿಕರು, ಬ್ಯಾಂಕ್ ಸಿಬ್ಬಂದಿಗಳು ಮತ್ತು ಪಂಚಾಯಿತಿ ವ್ಯಾಪ್ತಿಯ ಬಿಪಿಎಲ್ ಪಡಿತರ ಕಾರ್ಡ್ ಹೊಂದಿದವರು ಪಡಿತರ ಪಡೆಯಲು ಆಗಮಿಸುವ ವೇಳೆ ಕಡ್ಡಾಯವಾಗಿ ನೆಗೆಟಿವ್ ವರದಿ ಪಡೆದುಕೊಳ್ಳಬೇಕು. ನಿಯಮ ಉಲ್ಲಂಘಿಸಿದರೆ ಪಂಚಾಯಿತಿ ವತಿಯಿಂದ ಕಠಿಣ ಕ್ರಮ ಕೈಗೊಳ್ಳಲಾಗುವುದು. ರೋಗ ಲಕ್ಷಣಗಳು ಕಂಡುಬAದರೆ ಕೂಡಲೆ ಸ್ಥಳೀಯ ಆಶಾ ಕಾರ್ಯಕರ್ತೆಯರಿಗೆ ಅಥವಾ ಆರೋಗ್ಯ ಸಿಬ್ಬಂದಿಗಳಿಗೆ ಮಾಹಿತಿ ನೀಡಿ ನರಿಯಂದಡ ಗ್ರಾಮ ಪಂಚಾಯಿತಿ ವ್ಯಾಪ್ತಿಯನ್ನು ಸಂಪೂರ್ಣವಾಗಿ ಕೋವಿಡ್ ಮುಕ್ತ ಪಂಚಾಯಿತಿಯನ್ನಾಗಿ ಪರಿವರ್ತಿಸಲು ಕಾರ್ಯೋನ್ಮುಮುಖರಾಗಲು ನಿರ್ಧರಿಸಲಾಯಿತು. ಸಭೆಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯೆ ಪುಷ್ಪ, ಚೆಯ್ಯಂಡಾಣೆ ಪ್ರಾಥಮಿಕ ಸಹಕಾರ ಕೃಷಿ ಪತ್ತಿನ ಅಧ್ಯಕ್ಷ ಪೊನ್ನಚಂಡ ಮಾದಪ್ಪ, ಗ್ರಾಮ ಲೆಕ್ಕಿಗರಾದ ಪೂಜಾಶ್ರೀ ಹಾಗೂ ಆಶಾ ಕಾರ್ಯಕರ್ತೆಯರು ಅಂಗನವಾಡಿ ಕಾರ್ಯಕರ್ತೆಯರು, ಸೇರಿದಂತೆ ಇನ್ನಿತರರು ಹಾಜರಿದ್ದರು.