ಸೋಮವಾರಪೇಟೆ, ಜೂ. ೪: ಕೊರೊನಾ ಲಾಕ್‌ಡೌನ್ ಪ್ರಾರಂಭದ ದಿನದಿಂದ ಕೊರೊನಾ ಸೇನಾನಿಗಳಿಗೆ ಮತ್ತು ಹೊರರೋಗಿಗಳಿಗೆ ಸೋಮವಾರಪೇಟೆ ಪಟ್ಟಣದ ಸರ್ಕಾರಿ ಆಸ್ಪತ್ರೆಯ ಮುಂಭಾಗ ಮಧ್ಯಾಹ್ನ ಊಟವನ್ನು ಉಚಿತವಾಗಿ ವಿತರಿಸುತ್ತಿರುವ ದಾನಿಗಳಾದ ವಿ.ಎಂ.ವಿಜಯ ಅವರನ್ನು ಶರಣ ಸಾಹಿತ್ಯ ಪರಿಷತ್ ವತಿಯಿಂದ ಸನ್ಮಾನಿಸಲಾಯಿತು.

ಶ್ರೀ ತಪೋವನ ಕ್ಷೇತ್ರ ಮನೆಹಳ್ಳಿ ಮಠಾಧೀಶರಾದ ಶ್ರೀ ಮಹಾಂತ ಶಿವಲಿಂಗ ಸ್ವಾಮೀಜಿ ಸನ್ಮಾನಿಸಿದರು. ಶರಣ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಎಸ್. ಮಹೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.