ಸುಂಟಿಕೊಪ್ಪ, ಜೂ. ೪: ಸುಂಟಿಕೊಪ್ಪ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮುಂದಿನ ಸೋಮವಾರ ಅಗತ್ಯ ವಸ್ತುಗಳನ್ನು ಮಾರಾಟ ಮಾಡುವ ವರ್ತಕರು ಮತ್ತು ಅವರ ಕೆಲಸಗಾರರು ಕಡ್ಡಾಯವಾಗಿ ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೋವಿಡ್ ಟೆಸ್ಟ್ ಮಾಡಿಸಿ ನೆಗೆಟಿವ್ ವರದಿ ಹೊಂದಿರತಕ್ಕದ್ದು. ಕೋವಿಡ್ ಟೆಸ್ಟ್ ಮಾಡಿಸಿ ನೆಗೆಟಿವ್ ರಿಪೋರ್ಟ್ ಹೊಂದಿರದೇ ವ್ಯಾಪಾರ ನಡೆಸಿದಲ್ಲಿ ಅಂತಹ ಅಂಗಡಿಗಳಿಗೆ ಬೀಗ ಹಾಕಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪಿಡಿಓ ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ.