ಮಡಿಕೇರಿ, ಜೂ.೪: ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ ೧೧ ಗಂಟೆ ವೇಳೆಗೆ ೨೬೯ ಹೊಸ ಕೋವಿಡ್-೧೯ ಪ್ರಕರಣಗಳು ದೃಢಪಟ್ಟಿದೆ. ೨೪೧ ಆರ್.ಟಿ.ಪಿ.ಸಿ.ಆರ್ ಮತ್ತು ೨೮ ಪ್ರಕರಣಗಳು ರ‍್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.

ಮಡಿಕೇರಿ ತಾಲೂಕಿನಲ್ಲಿ ೭೯ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬAದಿದೆ. ಈ ಪೈಕಿ ೭೮ ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮತ್ತು ೧ ಪ್ರಕರಣ ರ‍್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.

ಸೋಮವಾರಪೇಟೆ ತಾಲೂಕಿನಲ್ಲಿ ೧೨೮ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬAದಿದೆ. ಈ ಪೈಕಿ ೧೦೮ ಆರ್.ಟಿ.ಪಿ.ಸಿ.ಆರ್ ಮತ್ತು ೨೦ ಪ್ರಕರಣಗಳು ರ‍್ಯಾಪಿಡ್ ಆಂಟಿಜೆನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.

ವಿರಾಜಪೇಟೆ ತಾಲೂಕಿನಲ್ಲಿ ೬೨ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬAದಿದೆ. ಈ ಪೈಕಿ ೫೫ ಆರ್.ಟಿ.ಪಿ.ಸಿ.ಆರ್ ಮತ್ತು ೭ ಪ್ರಕರಣ ರ‍್ಯಾಪಿಡ್ ಆಂಟಿಜೆನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.

ಜಿಲ್ಲೆಯಲ್ಲಿನ ಒಟ್ಟು ಕೋವಿಡ್-೧೯ ಪ್ರಕರಣಗಳ ಸಂಖ್ಯೆ ೨೫,೫೪೧ ಆಗಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ೪೪೪ ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು ೨೩,೦೪೩ ಮಂದಿ ಗುಣಮುಖರಾಗಿದ್ದಾರೆ. ೨೧೬೬ ಸಕ್ರಿಯ ಪ್ರಕರಣಗಳಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ೨ ಸಾವು ಉಂಟಾಗಿದ್ದು, ಒಟ್ಟು ೩೩೨ ಮರಣ ಪ್ರಕರಣಗಳು ವರದಿಯಾಗಿದೆ. ಕಂಟೈನ್ ಮೆಂಟ್ ವಲಯಗಳ ಸಂಖ್ಯೆ ೩೧೩ ಆಗಿದೆ. ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ.೧೮.೧೯ ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದ್ದಾರೆ.