ಕೂಡಿಗೆ, ಜೂ. ೫: ಕೊರೊನಾ ಎರಡನೇ ಅಲೆ ಭೀಕರವಾಗಿದ್ದು, ಮೂರನೇ ಅಲೆ ಜಿಲ್ಲೆಗೆ ಪ್ರವೇಶಿಸದಂತೆ ಸಕಲ ರೀತಿಯ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳಬೇಕಿದೆ ಎಂದು ಮಡಿಕೇರಿ ಕ್ಷೇತ್ರದ ಶಾಸಕ ಅಪ್ಪಚ್ಚು ರಂಜನ್ ಹೇಳಿದರು.
ಕುಶಾಲನಗರ ತಾಲೂಕು ವ್ಯಾಪ್ತಿಯ ೬ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿದ ಅವರು ಕೋವಿಡ್-೧೯ ಟಾಸ್ಕ್ಫೋರ್ಸ್ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಕೊರೊನಾ ಮೊದಲನೆ ಅಲೆಗಿಂತಲೂ ಎರಡನೇ ಅಲೆ ಭೀಕರವಾಗಿ ಮಾರ್ಪಟ್ಟಿದೆ. ಸೋಂಕಿನ ಪ್ರಮಾಣ, ತೀವ್ರತೆ ಹಾಗೂ ಸಾವಿನ ಸಂಖ್ಯೆ ಹೆಚ್ಚಾಗಿರುವುದು ವಿಷಾದಕರ ಸಂಗತಿ. ಮೂರನೇ ಅಲೆ ಬಗ್ಗೆ ತಜ್ಞರು ಎಚ್ಚರಿಕೆ ನೀಡಿದ್ದು, ಇದರ ವಿರುದ್ಧ ಹೋರಾಡಲು ಪ್ರತಿಯೊಬ್ಬರೂ ಅಗತ್ಯ ಮುಂಜಾಗ್ರತೆ, ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು. ಸರಕಾರದ ಮಾರ್ಗಸೂಚಿಗಳನ್ನು ಪಾಲಿಸುವ ಮೂಲಕ ಸಾರ್ವಜನಿಕರು ಕೊರೊನಾ ವಿರುದ್ಧ ಹೋರಾಡಲು ಕೈಜೋಡಿಸ ಬೇಕಿದೆ. ಸರಕಾರ ಕೊರೊನಾ ನಿಯಂತ್ರಿಸುವಲ್ಲಿ ಎಲ್ಲಾ ರೀತಿಯ ಸೂಕ್ತ ಕ್ರಮಗಳನ್ನು ಕೈಗೊಂಡಿದೆ. ಕೋವಿಡ್ ಸೋಂಕಿತರ ಸಮಸ್ಯೆಗಳಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸಿ ಸಹಕಾರ ನೀಡುವಲ್ಲಿ ಆಯಾ ಪಂಚಾಯಿತಿಗಳು ಮುಂದಾಗಿವೆ. ತಾನು ಕೂಡ ಖುದ್ದು ಕೋವಿಡ್ ಕೇಂದ್ರಗಳಿಗೆ ಭೇಟಿ ನೀಡಿ ನೇರವಾಗಿ ಸೋಂಕಿತರ ಸಮಸ್ಯೆಗಳನ್ನು ಆಲಿಸಿ ಪರಿಹಾರ ಒದಗಿಸಿರುವುದಾಗಿ ತಿಳಿಸಿದರು. ಶಾಸಕರು ಕೊಡಗಿನ ಗಡಿ ಭಾಗವಾದ ಶಿರಂಗಾಲ, ತೊರೆನೂರು, ಹೆಬ್ಬಾಲೆ, ಕೂಡಿಗೆ, ಕೂಡು ಮಂಗಳೂರು, ಮುಳ್ಳುಸೋಗೆ ವ್ಯಾಪ್ತಿಯ ೬ ಗ್ರಾಮ ಪಂಚಾಯಿತಿಗಳ ಟಾಸ್ಕ್ಫೋರ್ಸ್ ಸಭೆಯಲ್ಲಿ ಭಾಗವಹಿಸಿದರು.
ಸಭೆಯಲ್ಲಿ ಆಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋವಿಡ್ಗೆ ಸಂಬAಧಿಸಿದAತೆ ಸಮಗ್ರವಾದ ಮಾಹಿತಿಯನ್ನು ಶಾಸಕರು ಪಡೆದುಕೊಂಡು ಮುಂದಿನ ದಿನಗಳಲ್ಲಿ ಕೊರೊನಾ ಸೋಂಕಿನ ತಡೆಗೆ ಮುಂಜಾಗ್ರತಾ ಕ್ರಮಗಳನ್ನು ಕೃಗೊಳ್ಳುವ ಬಗ್ಗೆ ಚರ್ಚೆ ನಡೆಸಿದರು.
ಈ ಸಂದರ್ಭ ಪಂಚಾಯಿತಿಗಳ ಜನಪ್ರತಿನಿಧಿಗಳು, ವಿವಿಧ ಇಲಾಖೆ ಅಧಿಕಾರಿಗಳು, ಆಶಾ ಮತ್ತು ಅಂಗನವಾಡಿ ಕಾರ್ಯ ಕರ್ತರೊಂದಿಗೆ ಶಾಸಕರು ಚರ್ಚೆ ನಡೆಸಿ ಸಂಪೂರ್ಣವಾದ ಅಗತ್ಯ ಮಾಹಿತಿ ಪಡೆದು ಸಲಹೆ ಸೂಚನೆಗಳನ್ನು ನೀಡಿದರು.
ಈ ಸಂದರ್ಭ ತಹಶೀಲ್ದಾರ್ ಗೋವಿಂದರಾಜು, ತಾಲೂಕು ಕಾರ್ಯನಿರ್ವಹಣಾಧಿಕಾರಿ ಜಯಣ್ಣ ಸರಕಾರದ ಹೊಸ ಯೋಜನೆಯ ಮಾಹಿತಿಯನ್ನು ನೀಡಿದರು. ಮತ್ತು ಡಾ. ಮಹಾಲಕ್ಷಿö್ಮ , ಡಾ. ಭರತ್, ಡಾ. ತುಂಗಾ ಆರೋಗ್ಯ ಇಲಾಖೆಯ ಮಾಹಿತಿಯನ್ನು ನೀಡಿದರು. ಕುಶಾಲನಗರದ ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿ ಶಿವಶಂಕರ್ ಕೋವಿಡ್ ತಡೆಗೆ ಕಾನೂನಿನ ನಿಯಮಗಳನ್ನು ತಿಳಿಸಿದರು.
ಈ ಸಂದರ್ಭ ಗ್ರಾ.ಪಂ. ಅಧ್ಯಕ್ಷರುಗಳಾದ ಭಾಗೀರತಿ, ರೂಪ, ಹೆಚ್.ಎಸ್. ಮಂಜುನಾಥ, ಮಂಗಳಾ, ಇಂದಿರಾ ರಮೇಶ್, ಚೆÀಲುವರಾಜ್ ಸೇರಿದಂತೆ ಆಯಾ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರುಗಳು ಮತ್ತು ಸದಸ್ಯರು ವಿವಿಧ ಇಲಾಖೆಯ ಅಧಿಕಾರಿ ವರ್ಗದವರು ಹಾಜರಿದ್ದರು.