ಮಡಿಕೇರಿ, ಜೂ. ೫: ಕೊರೊನಾ ಸೋಂಕು ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಕೊಡಗು ಜಿಲ್ಲಾಡಳಿತ ಅಗತ್ಯ ವಸ್ತು ಖರೀದಿಗೆ ನಿಗದಿ ಮಾಡಿದ್ದ ಸಮಯವನ್ನು ಬೆಳಿಗ್ಗೆ ೬ ರಿಂದ ಮಧ್ಯಾಹ್ನ ೧ ಗಂಟೆ ತನಕ ಅವಕಾಶ ನೀಡಿ ವಿಸ್ತರಿಸಿದೆ.ಅತ್ಯವಶ್ಯಕ ಸೇವೆಗಳಡಿ ಬರುವ ತರಕಾರಿ, ಹಣ್ಣು-ಹಂಪಲು, ದಿನಸಿ, ಕೃಷಿಗೆ ಸಂಬAಧಿಸಿದ ಅಂಗಡಿ ಮಳಿಗೆ ಮತ್ತು ದಾಸ್ತಾನು ಕೇಂದ್ರಗಳು, ಮೀನು ಮತ್ತು ಮಾಂಸದ ಮಳಿಗೆಗಳನ್ನು, ಹಾಪ್ ಕಾಮ್ಸ್ ಮಳಿಗೆಗಳನ್ನು ಸೋಮವಾರ, ಬುಧವಾರ ಮತ್ತು ಶುಕ್ರವಾರದಂದು ಬೆಳಿಗ್ಗೆ ೬ ಗಂಟೆಯಿAದ ಮಧ್ಯಾಹ್ನ೧ ಗಂಟೆಯವರೆಗೆ ತೆರೆಯಲು ಅವಕಾಶ ಕಲ್ಪಿಸಲಾಗಿದೆ.
ನಿಗದಿತ ಅವಧಿಯಲ್ಲಿ ದೈನಂದಿನ ಅಗತ್ಯ ವಸ್ತಗಳ ಖರೀದಿ, ಬ್ಯಾಂಕಿAಗ್ ಕಾರ್ಯ, ಮುಂಗಾರು ಪೂರ್ವ ಚಟುವಟಿಕೆ, ಮೂಲ ಸೌಲಭ್ಯಗಳ ನಿರ್ಮಾಣ ಚಟುವಟಿಕೆ ಇತ್ಯಾದಿಗಳಿಗೆ ಅನುಕೂಲವಾಗುವಂತೆ ಹಾಗೂ ಕೆಲ ಗ್ರಾಮೀಣ ಭಾಗಗಳಲ್ಲಿ ಕಾಡು ಪ್ರಾಣಿಗಳ ಉಪಟಳ ಇರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಹಿತಾಸಕ್ತಿಯಿಂದ ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ತಾ. ೭ ರ ಬೆಳಿಗ್ಗೆ ೬ ಗಂಟೆಯಿAದ ತಾ. ೧೪ ರ ಬೆಳಿಗ್ಗೆ ೬ ಗಂಟೆಯವರೆಗೆ ಜಾರಿಯಲ್ಲಿರುವಂತೆ ಕೆಲವು ನಿರ್ಬಂಧ, ವಿನಾಯಿತಿಗಳಿರುವ ಲಾಕ್ಡೌನ್ ಆದೇಶವನ್ನು ಜಿಲ್ಲಾಡಳಿತ ಹೊರಡಿಸಿದೆ.
ಸೋಮವಾರ, ಬುಧವಾರ ಮತ್ತು ಶುಕ್ರವಾರ ಬೆಳಿಗ್ಗೆ ೬ ರಿಂದ ಮಧ್ಯಾಹ್ನ ೧ ಗಂಟೆಯವರೆಗೆ ಕೃಷಿ ಪರಿಕರವಾದ ರಸಗೊಬ್ಬರವನ್ನು ರಸೀದಿ ಪಡೆದು ಖರೀದಿಸಲು ಹಾಗೂ ಖರೀದಿಸಿದ ಸ್ಥಳದಿಂದ ರೈತರ ಕೃಷಿ ಚಟುವಟಿಕೆಯ ಸ್ಥಳಕ್ಕೆ ಅದೇ ದಿನದಂದು ಸಾಗಿಸಲು ಅವಕಾಶ ಕಲ್ಪಿಸಲಾಗಿದೆ. ಸಾಗಾಣಿಕೆ ಸಮಯದಲ್ಲಿ ಅಧಿಕೃತ ರಶೀದಿಯನ್ನು ಹೊಂದಿರತಕ್ಕದ್ದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
(ಮೊದಲ ಪುಟದಿಂದ) ಮಳೆಗಾಲಕ್ಕೆ ಮತ್ತು ಕೃಷಿ ಚಟುವಟಿಕೆಗಳಿಗೆ ಅಗತ್ಯವಿರುವ ರೈನ್ಕೋಟ್, ಛತ್ರಿ, ಟಾರ್ಪಲ್ಗಳು, ಬಟ್ಟೆ ಬರೆ, ಚಪ್ಪಲಿ, ಗಂಬೂಟು ಮುಂತಾದ ವಸ್ತುಗಳ ಅವಶ್ಯಕತೆ ಇರುವುದರಿಂದ ಇಂತಹ ವಸ್ತುಗಳ ಮಾರಾಟ ಮಳಿಗೆಯನ್ನು ನಿಗದಿತ ಸಮಯದಲ್ಲಿ ತೆರೆಯಲು ಅವಕಾಶ ಕಲ್ಪಿಸಲಾಗಿದೆ.
ಪಡಿತರ ನ್ಯಾಯಬೆಲೆ ಮಳಿಗೆಗಳು ಸೋಮವಾರ, ಬುಧವಾರ ಮತ್ತು ಶುಕ್ರವಾರದಂದು ಮಾತ್ರ ತೆರೆಯಲು ಅನುಮತಿಸಿದೆ. ಸ್ಟಾಂಡ್ ಅಲೋನ್ ಹಾಲಿನ ಬೂತ್ಗಳು, ದಿನಪತ್ರಿಕೆಗಳ ಸೆಗ್ರಿಗೇಷನ್ ಮತ್ತು ವಿತರಣೆಗೆ ಪ್ರತಿದಿನ ಬೆಳಿಗ್ಗೆ ೬ ಗಂಟೆಯಿAದ ಬೆಳಗ್ಗೆ ೧೦ ಗಂಟೆಯವರೆಗೆ ಅನುಮತಿಸಲಾಗಿದೆ. ಆಸ್ಪತ್ರೆ, ಔಷಧಾಲಯ, ವೈದ್ಯಕೀಯ ಸೇವೆಗಳು, ಪೆಟ್ರೋಲ್ ಬಂಕ್ಗಳು, ಎಲ್.ಪಿ.ಜಿ ಕೇಂದ್ರಗಳ ಎಂದಿನAತೆ ೨೪x೭ ಕಾರ್ಯಚಟುವಟಿಕೆ ನಡೆಸಬಹುದಾಗಿದೆ.
ಹೊಟೇಲ್, ರೆಸ್ಟೋರೆಂಟ್ಗಳಿAದ ಆಹಾರವನ್ನು ಟೇಕ್ ಅವೆ (ಪಾರ್ಸಲ್) ರೂಪದಲ್ಲಿ ಪಡೆಯಲು ಅನುಮತಿಸಿದೆ. ಬಾರ್ಗಳಲ್ಲಿ ನಿಗದಿತ ಸಮಯದಲ್ಲಿ ಪಾರ್ಸಲ್ ಪಡೆಯಲು ವಿನಾಯಿತಿ ನೀಡಲಾಗಿದೆ.
ಹೊರ ಜಿಲ್ಲೆಯಿಂದ ಬರುವವರಿಗೆ ಕಡ್ಡಾಯ ಕ್ವಾರಂಟೈನ್
ಜಿಲ್ಲೆಗೆ ಆಗಮಿಸುವವರನ್ನು ಪ್ರತಿ ಚೆಕ್ ಪೋಸ್ಟ್ಗಳಲ್ಲಿ ವಿಚಾರಣೆ ನಡೆಸಿ, ಕೊಡಗು ಜಿಲ್ಲೆಯಲ್ಲಿ ವಾಸ್ತವ್ಯ ಹೂಡುವುದಾದಲ್ಲಿ ಎಲ್ಲಿ ತಂಗುತ್ತಾರೆ ಎಂಬ ಬಗ್ಗೆ ಪೂರ್ಣ ವಿಳಾಸ, ಮೊಬೈಲ್ ಸಂಖ್ಯೆಯನ್ನು ಪಡೆದುಕೊಳ್ಳುವುದು ಹಾಗೂ ಹೊರ ಜಿಲ್ಲೆಯಿಂದ ಆಗಮಿಸಿದವರು ಕಡ್ಡಾಯವಾಗಿ ೧೪ ದಿನಗಳ ಕಾಲ ಹೋಂ ಕ್ವಾರಂಟೈನ್ನಲ್ಲಿ ಇರತಕ್ಕದ್ದು.
ರಾಜ್ಯ ಸರ್ಕಾರದ ಮತ್ತು ಅದರ ಸ್ವಾಯತ್ತ ಸಂಸ್ಥೆಗಳು, ನಿಗಮಗಳು ಇತ್ಯಾದಿಗಳ ಅಧಿಕಾರಿ, ಸಿಬ್ಬಂದಿಗಳ ಕರ್ತವ್ಯದ ನಿಮಿತ್ತ ಹಾಗೂ ಕೋವಿಡ್-೧೯ ನಿಯಂತ್ರಣ ಕಾರ್ಯದಲ್ಲಿ ತೊಡಗಿರುವ ಅಧಿಕಾರಿ, ನೌಕರರ ಸಂಚಾರಕ್ಕೆ ಅವಕಾಶ ಇರುತ್ತದೆ. ಜಿಲ್ಲೆಯಾದ್ಯಂತ ಯಾವುದೇ ವ್ಯಕ್ತಿಗಳು ಸಕಾರಣವಿಲ್ಲದೆ ಅನಗತ್ಯ ಸಂಚರಿಸುವುದು ಕಡ್ಡಾಯವಾಗಿ ನಿಷೇಧಿಸಿದೆ.
ಈ ಆದೇಶದ ದುರುಪಯೋಗ ಅಥವಾ ಉಲ್ಲಂಘನೆಯು ಭಾರತ ದಂಡ ಸಂಹಿತೆ ಕಲಂ ೧೮೮, ದಿ ಕರ್ನಾಟಕ ಎಪಿಡೆಮಿಕ್ ಡಿಸೀಸಸ್ ಆಕ್ಟ್ ೨೦೨೦, ಡಿಸಾಸ್ಟರ್ ಮ್ಯಾನೇಜ್ಮೆಂಟ್ ಆಕ್ಟ್ ೨೦೦೫ರಡಿ ಮತ್ತು ವಿವಿಧ ಕಾಯ್ದೆಗಳಡಿ ದಂಡನೀಯವಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.