ಕುಶಾಲನಗರ, ಜೂ ೬: ಕೋವಿಡ್ ೨ನೇ ಅಲೆ ಹಿನೆÀ್ನಲೆಯಲ್ಲಿ ಕುಶಾಲನಗರ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಇದುವರೆಗೆ ಒಟ್ಟು ೩೯೧ ಕೋವಿಡ್-೧೯ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಇದುವರೆಗೆ ೨೯೯ ಮಂದಿ ಗುಣಮುಖರಾಗಿದ್ದಾರೆಂದು ಕ್ಷೇತ್ರ ಶಾಸಕ ಎಂ ಪಿ ಅಪ್ಪಚ್ಚು ರಂಜನ್ ಉಪಸ್ಥಿತಿಯಲ್ಲಿ ನಡೆದ ಕುಶಾಲನಗರ ಪಟ್ಟಣ ಪಂಚಾಯತಿಯ ಟಾಸ್ಕ್ ಫೋರ್ಸ್ ಸಮಿತಿಯ ಸಭೆಯಲ್ಲಿ ಮುಖ್ಯಾಧಿಕಾರಿ ಕೃಷ್ಣಪ್ರಸಾದ್ ಮಾಹಿತಿ ನೀಡಿದರು. ಪಟ್ಟಣದಲ್ಲಿ ೫೯ ಕಂಟೈನ್ಮAಟ್ ಝೋನ್‌ಗಳನ್ನು ತೆರೆಯಲಾಗಿದ್ದು, ಇದುವರೆಗೆ ೧೨ ಮಂದಿ ಕೋವಿಡ್-೧೯ ಸೋಂಕಿನಿAದ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಕುಶಾಲನಗರ ಪಟ್ಟಣಕ್ಕೆ ನೆರೆ ರಾಜ್ಯ, ಜಿಲ್ಲೆಗಳಿಂದ ಬಂದ ಒಟ್ಟು ೪೨ ಮಂದಿ ವ್ಯಕ್ತಿಗಳನ್ನು ಗುರುತಿಸಲಾಗಿದ್ದು, ಅವರುಗಳನ್ನು ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ ಎಂದು ವಿವರಿಸಿದರು.

ಪಟ್ಟಣ ಪಂಚಾಯಿತಿ ಅಧ್ಯಕ್ಷ ಜಯವರ್ಧನ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪಟ್ಟಣ ವ್ಯಾಪ್ತಿಯ ಎಲ್ಲಾ ಇಲಾಖಾಧಿಕಾರಿಗಳಿಂದ ಸೋಂಕಿನ ಮಾಹಿತಿ, ಲಸಿಕೆ ನೀಡುವ ಬಗ್ಗೆ ಶಾಸಕ ರಂಜನ್ ಅವರು ಮಾಹಿತಿ ಸಂಗ್ರಹಿಸಿದರು. ಪಟ್ಟಣದ ವರ್ತಕರಿಗೆ ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಆಶಾ ಕಾರ್ಯಕರ್ತರು ಮತ್ತು ಅಂಗನವಾಡಿ ಕಾರ್ಯಕರ್ತರ ಮೂಲಕ ಪಟ್ಟಣದ ವ್ಯಾಪ್ತಿಯಲ್ಲಿ ಮನೆ ಮನೆಗೆ ತೆರಳಿ ರೋಗಿಗಳಿಗೆ ಧೈರ್ಯ ತುಂಬುವ ಕೆಲಸ ಆಗಬೇಕಿದೆ ಎಂದು ರಂಜನ್ ಆರೋಗ್ಯ ಇಲಾಖಾ ಸಿಬ್ಬಂದಿಗಳಿಗೆ ಸೂಚನೆ ನೀಡಿದರು. ಮೂರನೇ ಅಲೆ ಬಗ್ಗೆ ಪ್ರತಿಯೊಬ್ಬರೂ ಎಚ್ಚರಿಕೆ ವಹಿಸಬೇಕಾಗಿದ್ದು, ಮಕ್ಕಳ ಬಗ್ಗೆ ನಿಗಾ ವಹಿಸುವಂತೆ ಕಿವಿಮಾತು ಹೇಳಿದರು. ಲಸಿಕೆ ನೀಡುವ ಕೇಂದ್ರದಲ್ಲಿ ಕೇವಲ ಮುಂಚೂಣಿ ಕಾರ್ಯಕರ್ತರಿಗೆ ಮಾತ್ರ ಲಸಿಕೆ ನೀಡುತ್ತಿದ್ದು, ಜನಸಾಮಾನ್ಯರಿಗೆ ಲಸಿಕೆ ನೀಡಲು ಕ್ರಮ ಕೈಗೊಳ್ಳುವಂತೆ ಸಭೆಯಲ್ಲಿ ಆಗ್ರಹ ಕೇಳಿಬಂದ ಮೇರೆಗೆ ಆಧ್ಯತೆಯ ಮೇಲೆ ಪ್ರತಿಯೊಬ್ಬರಿಗೂ ಲಸಿಕೆ ನೀಡಲು ಕ್ರಮ ಕೈಗೊಳ್ಳುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ರಂಜನ್ ಸೂಚನೆ ನೀಡಿದರು.

ಈ ಸಂದರ್ಭ ಸಭೆಯಲ್ಲಿ ತಾಲೂಕು ತಹಶೀಲ್ದಾರ್ ಗೋವಿಂದ ರಾಜ್, ಪಟ್ಟಣ ಪಂಚಾಯತಿ ಉಪಾಧ್ಯಕ್ಷೆ ಸುರಯ್ಯ ಭಾನು, ಸ್ಥಾಯಿ ಸಮಿತಿ ಅಧ್ಯಕ್ಷ ಎಂ ಬಿ ಸುರೇಶ್, ಪಂಚಾಯಿತಿ ಸದಸ್ಯರು, ಕೂಡ ಅಧ್ಯಕ್ಷ ಎಂ.ಎA. ಚರಣ್, ವೈದ್ಯಾಧಿಕಾರಿ ಡಾ. ಮಧುಸೂದನ್, ಮುಖ್ಯಾಧಿಕಾರಿ ಕೃಷ್ಣಪ್ರಸಾದ್, ಡಿವೈಎಸ್‌ಪಿ ಶೈಲೇಂದ್ರಕುಮಾರ್, ಆಶಾ ಕಾರ್ಯಕರ್ತೆಯರು ಅಂಗನವಾಡಿ ಕಾರ್ಯಕರ್ತೆಯರು ಇದ್ದರು.