ಹೈಕಮಾಂಡ್ ಬಯಸಿದರೆ ತಕ್ಷಣ ರಾಜೀನಾಮೆ ನೀಡಲು ನಾನು ಸಿದ್ಧ: ಮುಖ್ಯಮಂತ್ರಿ ಯಡಿಯೂರಪ್ಪ ಸ್ಫೋಟಕ ಹೇಳಿಕೆ
ಬೆಂಗಳೂರು, ಜೂ. ೬: ಹೈಕಮಾಂಡ್ ಸೂಚಿಸಿದರೆ ರಾಜೀನಾಮೆ ನೀಡಲು ನಾನು ಸದಾ ಸಿದ್ಧ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಮೂಡಿಸಿದ್ದಾರೆ. ಬಿಜೆಪಿ ಹೈಕಮಾಂಡ್ಗೆ ನನ್ನ ಮೇಲೆ ಎಲ್ಲಿಯವರೆಗೆ ವಿಶ್ವಾಸವಿರುತ್ತೋ ಅಲ್ಲಿಯವರೆಗೆ ಮುಖ್ಯಮಂತ್ರಿ ಪದವಿಯಲ್ಲಿ ಮುಂದುವರಿಯುತ್ತೇನೆ, ನನ್ನ ಶಕ್ತಿಮೀರಿ ಕೆಲಸ ಮಾಡುತ್ತೇನೆ, ಮುಂದೆಯೂ ರಾಜ್ಯದ ಜನತೆಯ ಮತ್ತು ಪಕ್ಷದ ಒಳಿತಿಗಾಗಿ ಕೆಲಸ ಮಾಡುತ್ತೇನೆ, ಈ ವಿಷಯದಲ್ಲಿ ನನಗೆ ಯಾವುದೇ ಗೊಂದಲವಿಲ್ಲ ಎಂಬ ಸ್ಫೋಟಕ ಹೇಳಿಕೆಯನ್ನು ಇಂದು ವಿಧಾನಸೌಧದಲ್ಲಿ ನೀಡಿದ್ದಾರೆ. ಯಾವ ದಿನ ಯಡಿಯೂರಪ್ಪನವರೇ ನೀವು ಬೇಡ ಎಂದು ವರಿಷ್ಠರು ಹೇಳುತ್ತಾರೋ ಆಗ ಮುಖ್ಯಮಂತ್ರಿ ಪದವಿಯಿಂದ ಕೆಳಗಿಳಿಯುತ್ತೇನೆ, ರಾಜೀನಾಮೆ ನೀಡಿ ಜನತೆ ಪರ ಕೆಲಸ ಮಾಡುತ್ತೇನೆ ಎಂದರು. ಪರ್ಯಾಯ ನಾಯಕರಿಲ್ಲ ಎಂಬ ಭಾವನೆಯಿಲ್ಲ. ನನ್ನ ಬದಲಿಗೆ ಪರ್ಯಾಯ ನಾಯಕತ್ವ ಇಲ್ಲ ಎಂಬ ಮಾತನ್ನು ನಾನು ಒಪ್ಪುವುದಿಲ್ಲ. ದೇಶ, ರಾಜ್ಯದಲ್ಲಿ ಪರ್ಯಾಯ ನಾಯಕರು ಇರುತ್ತಾರೆ, ನಾನು ಯಾರ ಬಗ್ಗೆಯೂ ಟೀಕೆ ಮಾಡುವುದಿಲ್ಲ, ಹೈಕಮಾಂಡ್ ಸೂಚನೆ ನೀಡಿದರೆ ಯಾವುದೇ ಗೊಂದಲವಿಲ್ಲದೆ ರಾಜೀನಾಮೆ ಕೊಟ್ಟು ರಾಜ್ಯದ ಅಭಿವೃದ್ಧಿಗೆ ಕೆಲಸ ಮಾಡುತ್ತೇನೆ ಎಂದರು.
ಆರು ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಲ್ಲಿ ಶತಕದ ಗಡಿ ದಾಟಿದ ಪೆಟ್ರೋಲ್ ಬೆಲೆ!
ನವದೆಹಲಿ, ಜೂ. ೬: ತೈಲ ಬೆಲೆ ಮತ್ತೆ ಏರಿಕೆಯಾಗಿದ್ದು, ರಾಷ್ಟç ರಾಜಧಾನಿ ದೆಹಲಿಯಲ್ಲಿ ಇದೇ ಮೊದಲ ಬಾರಿಗೆ ಒಂದು ಲೀಟರ್ ಪೆಟ್ರೋಲ್ ಬೆಲೆ ರೂ. ೯೫ ಡೀಸೆಲ್ ಬೆಲೆ ರೂ. ೮೬ ದಾಟಿದೆ. ಸರ್ಕಾರಿ ಸ್ವಾಮ್ಯದ ಇಂಧನ ಚಿಲ್ಲರೆ ವ್ಯಾಪಾರಿಗಳ ಬೆಲೆ ಅಧಿಸೂಚನೆಯೊಂದರ ಪ್ರಕಾರ, ಪ್ರತಿ ಲೀಟರ್ಗೆ ೨೧ ಪೈಸೆಯಷ್ಟು ಪೆಟ್ರೋಲ್ ಬೆಲೆ ಏರಿಕೆಯಾಗಿದ್ದರೆ, ಪ್ರತಿ ಲೀಟರ್ಗೆ ೨೦ ಪೈಸೆಯಷ್ಟು ಡೀಸೆಲ್ ಬೆಲೆ ಏರಿಕೆಯಾಗಿದೆ. ಮೇ ೪ ರಿಂದಲೂ ೨೦ನೇ ಬಾರಿಗೆ ದೇಶಾದ್ಯಂತ ತೈಲೆ ಬೆಲೆ ಏರಿಕೆಯಾಗಿದ್ದು, ರಾಜಸ್ಥಾನ, ಮಧ್ಯಪ್ರದೇಶ, ಮಹಾರಾಷ್ಟç, ಆಂಧ್ರಪ್ರದೇಶ, ತೆಲಂಗಾಣ ಮತ್ತು ಲಡಾಖ್ನಲ್ಲಿ ಪೆಟ್ರೋಲ್ ಬೆಲೆ ರೂ. ೧೦೦ ಕ್ಕಿಂತ ಹೆಚ್ಚಾಗಿದೆ. ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ಬೆಲೆ ಸಾರ್ವಕಾಲಿಕ ಎಂಬAತೆ ರೂ. ೯೫.೦೯ ಏರಿಕೆಯಾದರೆ, ಡೀಸೆಲ್ ಬೆಲೆ ರೂ. ೮೬.೦೧ ಇದೆ. ಸ್ಥಳೀಯ ತೆರಿಗೆಗಳಾದ ವ್ಯಾಟ್ ಮತ್ತು ಸರಕು ಶುಲ್ಕದ ಆಧಾರದ ಮೇಲೆ ಇಂಧನ ಬೆಲೆಗಳು ರಾಜ್ಯದಿಂದ ರಾಜ್ಯಕ್ಕೆ ಭಿನ್ನವಾಗಿರುತ್ತವೆ. ಅಂತಾರಾಷ್ಟಿçÃಯ ಮಾರುಕಟ್ಟೆಯಲ್ಲಿ ಬೆಲೆ ಹೆಚ್ಚಾದ ನಂತರ ರಿಟೈಲ್ ದರಗಳು ಕೂಡಾ ಹೆಚ್ಚಾಗಿವೆ. ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ರಾಜಸ್ಥಾನ ಅತಿ ಹೆಚ್ಚು ವ್ಯಾಟ್ ವಿಧಿಸುತ್ತಿದ್ದರೆ, ಮಧ್ಯಪ್ರದೇಶ, ಮಹಾರಾಷ್ಟç, ಆಂಧ್ರಪ್ರದೇಶ ಮತ್ತು ತೆಲಂಗಾಣಗಳು ನಂತರದ ಸ್ಥಾನದಲ್ಲಿವೆ. ಮೇ ೨೯ ರಂದು ಮುಂಬೈನಲ್ಲಿ ಮೊದಲ ಬಾರಿಗೆ ಪೆಟ್ರೋಲ್ ಬೆಲೆ ೧೦೦ ರೂ.ಗೆ ತಲುಪಿತ್ತು. ಸದ್ಯ ಅಲ್ಲಿ ಈಗ ಲೀಟರ್ ಪೆಟ್ರೋಲ್ ಬೆಲೆ ೧೦೧.೩ ರೂ. ಇದ್ದರೆ ಡೀಸೆಲ್ ಬೆಲೆ ೯೩.೩೫ ರೂ. ಆಗಿದೆ. ಬೆಂಗಳೂರಿನಲ್ಲಿ ಇಂದು ಲೀಟರ್ ಪೆಟ್ರೋಲ್ ರೂ. ೯೭.೯೨ ಪೈಸೆ ಇದ್ದರೆ ಡೀಸೆಲ್ ೯೦.೮೧ ಪೈಸೆಯಿದೆ.
ಪುಲ್ವಾಮದಲ್ಲಿ ಸ್ಫೋಟ: ಕನಿಷ್ಟ ೭ ಮಂದಿಗೆ ಗಾಯ!
ಪುಲ್ವಾಮ, ಜೂ. ೬ ಜಮ್ಮು-ಕಾಶ್ಮೀರದ ಪುಲ್ವಾಮದಲ್ಲಿ ಭೀಕರ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ೭ ಮಂದಿ ಗಾಯಗೊಂಡಿರುವುದು ಜೂ. ೬ ರಂದು ವರದಿಯಾಗಿದೆ. ಸ್ಫೋಟಕ್ಕೆ ಈವರೆಗೂ ನಿಖರ ಕಾರಣ ತಿಳಿದುಬಂದಿಲ್ಲ. ತ್ರಾಲ್ ಪ್ರದೇಶದ ಬಸ್ ನಿಲ್ದಾಣದಲ್ಲಿ ಈ ಸ್ಫೋಟ ಸಂಭವಿಸಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಪರಿಸ್ಥಿತಿ ಸ್ಥಿರವಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕಲಬುರಗಿ: ಕ್ಷುಲ್ಲಕ ಕಾರಣಕ್ಕೆ ಯುವಕನ ಬರ್ಬರ ಕೊಲೆ
ಕಲಬುರಗಿ, ಜೂ. ೬: ೨೨ರ ಯುವಕನೊಬ್ಬನನ್ನು ಕ್ಷುಲ್ಲಕ ಕಾರಣಕ್ಕೆ ಮಾರಕಾಸ್ತçದಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಕಲಬುರಗಿ ನಗರದ ವಾಜಪೇಯಿ ಬಡಾವಣೆಯ ಸಮೀಪ ನಡೆದಿದೆ. ಮೃತನನ್ನು ನಿಖಿಲ್ ಕನೇಗಾರ ಎನ್ನಲಾಗಿದ್ದು ಕರುಣೇಶ್ವರ ನಗರ ನಿವಾಸಿಯಾಗಿದ್ದ. ಘಟನೆಯಲ್ಲಿ ನಿಖಿಲ್ ಸೋದರ ಹಾಗೂ ಆತನ ತಾಯಿ ಗಾಯಗೊಂಡಿದ್ದು ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ತರಕಾರಿ ಖರೀದಿಸಲು ಬಂದಾಗ ಯುವಕನೊಬ್ಬ ಕ್ಷುಲ್ಲಕ ಕಾರಣಕ್ಕೆ ಜಗಳ ತೆಗೆದಿದ್ದಾನೆ. ಆ ನಂತರ ಸ್ನೇಹಿತರನ್ನು ಕರೆಸಿ ಮಾರಕಾಸ್ತçಗಳಿಂದ ನಿಖಿಲ್ ಮೇಲೆ ಹಲ್ಲೆ ಮಾಡಿದ್ದಾನೆ. ಆ ವೇಳೆ ನಿಖಿಲ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ನಿಖಿಲ್ ಸಂಬAಧಿ ಯುವತಿಯೊಬ್ಬಳಿಗೆ ನಿಶ್ಚಿತಾರ್ಥವಿತ್ತು. ಆದರೆ ಆ ಯುವತಿಯನ್ನು ಬೇರೊಬ್ಬ ಯುವಕ ಪ್ರೀತಿಸುತ್ತಿದ್ದ. ಆ ವಿಚಾರವನ್ನು ಪ್ರೀತಿಸುತ್ತಿದ್ದ ಯುವಕ ನಿಶ್ಚಯವಾಗುತ್ತಿದ್ದ ಯುವಕನಿಗೆ ಹೇಳಿದ್ದಾಗಿ ಈ ಬಗ್ಗೆ ಇಬ್ಬರ ಕುಟುಂಬದ ನಡುವೆ ಜಗಳ ನಡೆದಿದೆ. ಆ ವೇಳೆ ಜಗಳ ಪರಿಹರಿಸಲು ನಿಖಿಲ್ ಅಲ್ಲಿಗೆ ತೆರಳಿದ್ದನೆನ್ನಲಾಗಿದೆ. ಆದರೆ ಈ ಬಗ್ಗೆ ನಿಖರ ಮಾಹಿತಿ ಇನ್ನೂ ಲಭ್ಯವಾಗಿಲ್ಲ. ಘಟನೆ ಸಂಬAಧ ಕಲಬುರಗಿ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.