ಮಡಿಕೇರಿ, ಜೂ. ೫: ವಿಧಾನ ಪರಿಷತ್ ಸದಸ್ಯರಾದ ಎಂ.ಪಿ. ಸುನಿಲ್ ಸುಬ್ರಮಣಿ ಅವರು ವೀರಾಜಪೇಟೆ ಪಟ್ಟಣ ಹಾಗೂ ವಿವಿಧ ಗ್ರಾಮ ಪಂಚಾಯಿತಿಗೆ ತೆರಳಿ ಕೋವಿಡ್ ಸಂಬAಧ ಪರಿಶೀಲನೆ ನಡೆಸಿದರು.
ವೀರಾಜಪೇಟೆಯ ಸರ್ಕಾರಿ ತಾಲೂಕು ಆಸ್ಪತ್ರೆಯಲ್ಲಿ ನೂತನ ತಂತ್ರಜ್ಞಾನದ ಮೂಲಕ ಸ್ಥಳದಲ್ಲಿಯೇ ಆಕ್ಸಿಜನ್ ಉತ್ಪಾದಿಸುವ ಘಟಕದ ಪರಿವೀಕ್ಷಣೆ ಮಾಡಿದರು. ಈ ವೇಳೆ ಅಧಿಕಾರಿಗಳಿಂದ ಮಾಹಿತಿ ಪಡೆದರು.
ವೀರಾಜಪೇಟೆಯ ಪಟ್ಟಣ ಪಂಚಾಯಿತಿಯ ಸಭಾಂಗಣದಲ್ಲಿ ಅಲ್ಲಿನ ಅಧಿಕಾರಿಗಳೊಂದಿಗೆ ಕೋವಿಡ್ ಸೋಂಕು ಹಾಗೂ ಸೋಂಕಿತರ ಚಿಕಿತ್ಸೆಯ ಕುರಿತ ತೆಗೆದುಕೊಂಡ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಚರ್ಚೆ ನಡೆಸಿ, ಪಟ್ಟಣದಲ್ಲಿ ಸೋಂಕು ನಿಯಂತ್ರಿಸಲು ಕ್ರಮ ತೆಗೆದುಕೊಳ್ಳುವಂತೆ ಸೂಚನೆ ನೀಡಿದರು.
ಕಣ್ಣಂಗಾಲ, ಚೆಂಬೆಬೆಳ್ಳೂರು, ಆರ್ಜಿ, ಹುದಿಕೇರಿ, ಟಿ. ಶೆಟ್ಟಿಗೇರಿ, ಕೆ. ಬಾಡಗ, ನಾಲ್ಕೇರಿ, ಕಾನೂರು, ಬಲ್ಯಮಂಡೂರು, ಅರುವತೋಕ್ಲು, ಬಿ. ಶೆಟ್ಟಿಗೇರಿ, ಬಿಟ್ಟಂಗಾಲ, ಬಿಳು ಗುಂದ, ಕೆದಮುಳ್ಳೂರು, ಕದನೂರು, ಗೋಣಿಕೊಪ್ಪ, ಪೊನ್ನಂಪೇಟೆ, ಬಾಳೆಲೆ, ಹಾಲುಗುಂದ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಅಲ್ಲಿನ ಪಂಚಾಯಿತಿ ಸಿಬ್ಬಂದಿ ಗಳೊಂದಿಗೆ ಕೊರೊನಾ ಸೋಂಕು ನಿಯಂತ್ರಣ ಸಂಬAಧ ಚರ್ಚಿಸಿ ಮಾಹಿತಿ ಪಡೆದುಕೊಂಡರು.