ಮಡಿಕೇರಿ, ಜೂ. ೫: ಪೊನ್ನಂಪೇಟೆಯ ಸರಕಾರಿ ಮಾದರಿ ಪ್ರಾಥಮಿಕ ಶಾಲೆ (ಕೆಪಿಎಸ್ ಪ್ರಾಥಮಿಕ)ಯಲ್ಲಿ ತಾ. ೭ ರಂದು (ನಾಳೆ) ಬೆಳಿಗ್ಗೆ ೯.೩೦ ರಿಂದ ಮಧ್ಯಾಹ್ನ ೩ ಗಂಟೆವರೆಗೆ ಪೊನ್ನಂಪೇಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ೪೫ ವರ್ಷ ಮೇಲ್ಪಟ್ಟವರಿಗೆ ಮೊದಲನೇ ಮತ್ತು ಎರಡನೇ ಸುತ್ತಿನ ಕೋವಿಡ್-೧೯ ಲಸಿಕಾ ಕಾರ್ಯವನ್ನು ಹಮ್ಮಿಕೊಳ್ಳಲಾಗಿದೆ. ಲಸಿಕೆ ಪಡೆದುಕೊಳ್ಳಲು ಪೊನ್ನಂಪೇಟೆ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ನೋಂದಾಯಿಸಿಕೊಳ್ಳಬಹುದು ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮತ್ತು ಆಡಳಿತಾಧಿಕಾರಿ ಪೊನ್ನಂಪೇಟೆ ಗ್ರಾಮ ಪಂಚಾಯಿತಿ ಅವರು ತಿಳಿಸಿದ್ದಾರೆ.