ಮಡಿಕೇರಿ, ಜೂ. ೫: ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಮಡಿಕೇರಿ ತಾಲೂಕಿನ ಸಂಪಾಜೆ ಹೋಬಳಿಯ ಜೋಡುಪಾಲ, ಕೊಯನಾಡು, ಕಲ್ಲಳ್ಳ, ದೇವರಕೊಲ್ಲಿ, ಸಂಪಾಜೆ ಪ್ರದೇಶಗಳಲ್ಲಿ ಅತಿವೃಷ್ಟಿಯಿಂದ ಬಾಧಿತವಾಗುವ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜಿಲ್ಲಾಧಿಕಾರಿಗಳೊಂದಿಗೆ ಆರಕ್ಷಕ ಅಧೀಕ್ಷಕರು, ಉಪವಿಭಾಗಾಧಿಕಾರಿಗಳು, ಕಂದಾಯ ಇಲಾಖಾ ಸಿಬ್ಬಂದಿಗಳು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ಅರಣ್ಯ ಇಲಾಖಾಧಿಕಾರಿಗಳು ಇದ್ದರು.