ಮಡಿಕೇರಿ: ಜಿಲ್ಲೆಯ ಕೇಂದ್ರ ಸ್ಥಾನದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವ ೩೦ ಪತ್ರಕರ್ತರಿಗೆ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಪಿ.ಎಂ. ಅಬ್ದುಲ್ ಲತೀಫ್ ವೈದ್ಯಕೀಯ ಕಿಟ್ ವಿತರಿಸಿದರು.
ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ವಾಣಿಜ್ಯೋದ್ಯಮಿಗಳ ಸಹಕಾರ ಸಂಘದ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾಸ್ಕ್, ಸ್ಯಾನಿಟೈಸರ್, ಫೇಸ್ ಶೀಲ್ಡ್ ನೀಡಿದರು. ತಮ್ಮ ಸ್ವಂತ ವಾಹನದಲ್ಲಿ ೫೬ ಕೋವಿಡ್ ಸೋಂಕಿತರನ್ನು ಆಸ್ಪತ್ರೆಗೆ ಕರೆದುಕೊಂಡು ಬರುವುದರ ಮೂಲಕ ಅಬ್ದುಲ್ ಲತೀಫ್ ಗಮನ ಸೆಳೆದಿದ್ದಾರೆ. ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷೆ ಬಿ.ಆರ್. ಸವಿತಾ ರೈ, ಪ್ರಧಾನ ಕಾರ್ಯದರ್ಶಿ ಅನು ಕಾರ್ಯಪ್ಪ, ಉಪಾಧ್ಯಕ್ಷ ಕೆ.ಎ. ಆದಿತ್ಯ, ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ ಮತ್ತಿತರರು ಇದ್ದರು.
ಶನಿವಾರಸಂತೆ: ಕೊರೊನಾ ಮಹಾಮಾರಿ ನಿಯಂತ್ರಣಕ್ಕೆ ನಿರಂತರ ಶ್ರಮಿಸುತ್ತಿರುವ ವಾರಿಯರ್ಸ್ಗಳಿಗೆ ಕೊಡ್ಲಿಪೇಟೆ ವಿದ್ಯಾಸಂಸ್ಥೆ ನಿರ್ದೇಶಕ, ದಾನಿ ಶಿವಪ್ರಸಾದ್, ಕೊಡ್ಲಿಪೇಟೆಗೆ ಆಗಮಿಸಿದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರ ಮೂಲಕ ಮೆಡಿಕಲ್ ಕಿಟ್ ವಿತರಿಸಿದರು.
ಕೊಡ್ಲಿಪೇಟೆ, ಬ್ಯಾಡಗೊಟ್ಟ, ಬೆಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರು, ಪ್ರಾಥಮಿಕ ಆರೋಗ್ಯ ಕೇಂದ್ರ, ಉಪ ಪೊಲೀಸ್ ಠಾಣೆ ಹಾಗೂ ವಿದ್ಯುತ್ ಇಲಾಖೆ ಸಿಬ್ಬಂದಿಗಳಿಗೆ ಮಾಸ್ಕ್, ಸ್ಯಾನಿಟೈಸರ್, ಗ್ಲೌಸ್ಗಳನ್ನೊಳಗೊಂಡ ೬೦ ಕಿಟ್ ವಿತರಿಸಲಾಯಿತು.ಮಡಿಕೇರಿ: ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಮಡಿಕೇರಿ ನಗರ ಪತ್ರಕರ್ತರಿಗೆ ಅಗತ್ಯ ವಸ್ತುಗಳ ಕಿಟ್ ವಿತರಿಸಿದರು.
ಕಿಟ್ ವಿತರಿಸಿ ಮಾತನಾಡಿದ ಶಾಸಕರು, ವಿಷಮ ಸ್ಥಿತಿಯಲ್ಲಿ ಪತ್ರಕರ್ತರು ಪ್ರಾಣದ ಹಂಗು ತೊರೆದು ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ. ೩ನೇ ಅಲೆ ಭೀತಿ ಕೂಡ ಎದುರಾಗಿದ್ದು, ಈ ಹಿನ್ನೆಲೆ ಜನತೆ ಸೂಕ್ತ ಮುಂಜಾಗ್ರತೆ ವಹಿಸಬೇಕು. ಮಾಸ್ಕ್ ಧರಿಸಬೇಕು, ಸ್ಯಾನಿಟೈಸರ್ ಬಳಸಬೇಕು ಹಾಗೂ ದೈಹಿಕ ಅಂತರ ಕಾಯ್ದುಕೊಳ್ಳುವಂತೆ ಮನವಿ ಮಾಡಿದರು.
ಈ ಸಂದರ್ಭ ಜಿ.ಪಂ. ಮಾಜಿ ಅಧ್ಯಕ್ಷ ವಿ.ಎಂ. ವಿಜಯ, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷೆ ಸವಿತಾ ರೈ, ಕಾರ್ಯದರ್ಶಿ ಆನಂದ್, ಹಿರಿಯ ಪತ್ರಕರ್ತ ಎಚ್.ಟಿ. ಅನಿಲ್ ಸೇರಿದಂತೆ ಇನ್ನಿತರರು ಇದ್ದರು.
ಸಿದ್ದಾಪುರ: ಪಾಲಿಬೆಟ್ಟ ಚೇಶ್ಯರ್ ಹೋಂ ವಿಶೇಷ ಚೇತನ ಶಾಲೆಯ ಆಡಳಿತ ಮಂಡಳಿಯ ವತಿಯಿಂದ ಚೇಶ್ಯರ್ ಹೋಮ್ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಅತೀ ಕಡು ಮಕ್ಕಳಿಗೆ ಅಗತ್ಯ ವಸ್ತುಗಳ ಕಿಟ್ಗಳನ್ನು ಸಿದ್ದಾಪುರ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ವಿತರಿಸಲಾಯಿತು.
ಈ ಸಂದರ್ಭ ಮಾತನಾಡಿದ ಚೇಶ್ಯರ್ ಹೋಮ್ ವಿಶೇಷಚೇತನ ಶಾಲೆಯ ಅಧ್ಯಕ್ಷೆ ಗೀತಾ ಚಂಗಪ್ಪ ಮಾತನಾಡಿ, ಕೊರೊನಾ ಮಹಾಮಾರಿ ಎರಡನೇ ಅಲೆಯಿಂದಾಗಿ ಸಾಕಷ್ಟು ಮಂದಿ ಸಮಸ್ಯೆಗಳಿಗೆ ಸಿಲುಕಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ನಮ್ಮ ಸಂಸ್ಥೆಯ ಪಾಲಿಬೆಟ್ಟ ಚೇಶ್ಯರ್ ಹೋಮ್ನಲ್ಲಿ ವ್ಯಾಸಂಗ ಮಾಡುತ್ತಿರುವ ಅತೀ ಕಡು ಬಡ ಮಕ್ಕಳನ್ನು ಗುರುತಿಸಿ ಅವರಿಗೆ ಅಗತ್ಯ ವಸ್ತುಗಳ ಕಿಟ್ಗಳನ್ನು ವಿತರಿಸಲಾಗುತ್ತಿದೆ. ಒಟ್ಟು ೩೦ ಮಕ್ಕಳಿಗೆ ಕಿಟ್ ನೀಡಲಾಗುವದೆಂದರು.
ಕಾರ್ಯಕ್ರಮದಲ್ಲಿ ಸಿದ್ದಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ತುಳಸಿ, ಪಿಡಿಓ ವಿಶ್ವನಾಥ್, ಪಾಲಿಬೆಟ್ಟ ಚೇಶ್ಯರ್ ಹೋಮ್ ಸಂಸ್ಥೆಯ ಅಪ್ಪರಂಡ ಕುಶೀ ಕಾರ್ಯಪ್ಪ, ಪುನೀತ ರಾಮಸ್ವಾಮಿ, ಅಕ್ಷರ ಕಾಳಪ್ಪ, ಅಶಿಕ್ ಬೆಳ್ಯಪ್ಪ, ಶಿಕ್ಷಕಿ ಶಿವರಾಜ್, ಶಾಹೀನ, ಅನಿಲ್, ಧರ್ಮೆಶ್, ಸಿದ್ದಾಪುರ ಪೊಲೀಸ್ ಠಾಣೆಯ ಸಹಾಯಕ ಠಾಣಾಧಿಕಾರಿ ಗಣಪತಿ ಹಾಜರಿದ್ದರು.