ಮಡಿಕೇರಿ, ಜೂ. ೫: ಜಿಲ್ಲೆಯಲ್ಲಿ ಶನಿವಾರ ಬೆಳಿಗ್ಗೆ ೧೧ ಗಂಟೆ ವೇಳೆಗೆ ೨೨೯ ಹೊಸ ಕೋವಿಡ್-೧೯ ಪ್ರಕರಣಗಳು ದೃಢಪಟ್ಟಿದೆ. ೧೯೭ ಆರ್‌ಟಿಪಿಸಿಆರ್ ಮತ್ತು ೩೨ ಪ್ರಕರಣಗಳು ರ‍್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.

ಮಡಿಕೇರಿ ತಾಲೂಕಿನಲ್ಲಿ ೬೧, ಸೋಮವಾರಪೇಟೆ ತಾಲೂಕಿನಲ್ಲಿ ೧೩೫, ವೀರಾಜಪೇಟೆ ತಾಲೂಕಿನಲ್ಲಿ ೩೩ ಪ್ರಕರಣ ದೃಢಪಟ್ಟಿದೆ.

ಜಿಲ್ಲೆಯಲ್ಲಿನ ಒಟ್ಟು ಕೋವಿಡ್-೧೯ ಪ್ರಕರಣಗಳ ಸಂಖ್ಯೆ ೨೫,೭೭೦ ಆಗಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ೧೭೫ ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು ೨೩,೨೧೮ ಮಂದಿ ಗುಣಮುಖರಾಗಿದ್ದಾರೆ. ೨೨೧೯ ಸಕ್ರಿಯ ಪ್ರಕರಣಗಳಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ೧ ಸಾವು ಉಂಟಾಗಿದ್ದು, ಒಟ್ಟು ೩೩೩ ಮರಣ ಪ್ರಕರಣಗಳು ವರದಿಯಾಗಿದೆ. ಕಂಟೈನ್ ಮೆಂಟ್ ವಲಯಗಳ ಸಂಖ್ಯೆ ೩೦೨ ಆಗಿದೆ. ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ. ೧೫.೫೮ ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದ್ದಾರೆ.